ಸ್ಯಾಮ್‌ಸಂಗ್ ಫೋನ್ ಖರೀದಿಸುವ ಗ್ರಾಹಕರೇ, ಈ ಡಿಸ್ಕೌಂಟ್ ಕಳ್ಕೋಬೇಡಿ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಕಂಪನಿಯು ಹೈ ಎಂಡ್ ಫೋನ್‌ಗಳ ಜೊತೆಗೆ ಕೆಲವು ಬಜೆಟ್ ಮೊಬೈಲ್‌ಗಳನ್ನು ಬಿಡುಗಡೆ ಮಾಡಿ ಸೈ ಎನಿಸಿಕೊಂಡಿದೆ. ಅಂತಹ ಬಜೆಟ್ ಫೋನ್‌ಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯಲ್ಲಿನ 'ಸ್ಯಾಮ್‌ಸಂಗ್ ಗ್ಯಾಲಕ್ಸಿ A23 5G' ಮೊಬೈಲ್ ಟ್ರೆಂಡಿ ಫೀಚರ್ಸ್‌ಗಳಿಂದ ಮೊಬೈಲ್ ಪ್ರಿಯರನ್ನು ಸೆಳೆದಿದೆ. ಖುಷಿ ವಿಷಯವೆಂದರೆ, ಈ ಫೋನ್ ಈಗ ಬೆಲೆ ಇಳಿಕೆ ಕಂಡಿದೆ.
ಹೌದು, ಸ್ಯಾಮ್‌ಮ್‌ಸಂಗ್‌ನ ಸ್ಯಾಮ್‌ಸಂಗ್ ಗ್ಯಾಲಕ್ಸಿ A23 5G ಮೊಬೈಲ್ ಈಗ ಬೆಲೆಯಲ್ಲಿ ಡಿಸ್ಕೌಂಟ್ ಆಗಿದೆ. ಇ ಕಾಮರ್ಸ್ ದೈತ್ಯ ಅಮೆಜಾನ್ ತಾಣದಲ್ಲಿ ಈ ಫೋನ್ ಈಗ 24% ರಷ್ಟು ರಿಯಾಯಿತಿ ಪಡೆದಿದ್ದು, ಹೀಗಾಗಿ ಸದ್ಯ ಗ್ರಾಹಕರು ಈ ಫೋನಿನ 6GB + 128GB ಸ್ಟೋರೇಜ್‌ನ ವೇರಿಯಂಟ್ 21,999ರೂ. ಗಳ ಬೆಲೆಯಲ್ಲಿ ಖರೀದಿಸಬಹುದು. ಹೆಚ್ಚುವರಿ ಬ್ಯಾಂಕ್ ಕೊಡುಗೆಗಳು ಸಹ ಸಿಗಲಿವೆ.

ಹಾಗೆಯೇ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಇನ್ನು ಈ ಮೊಬೈಲ್ ಬ್ಲೂ, ಆರೆಂಜ್ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರು ಖರೀದಿಸಬಹುದು. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A23 5G ಮೊಬೈಲ್‌ನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಮೊಬೈಲ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ ಇದು 82.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಸಹ ಪಡೆದಿದೆ.
ಪ್ರೊಸೆಸರ್ ಕಾರ್ಯವೈಖರಿ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಸಾಮರ್ಥ್ಯ ಅನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಸಪೋರ್ಟ್ ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 8 GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯಲ್ಲಿ ಲಭ್ಯ. ಹಾಗೆಯೇ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್ ರಚನೆ ಏನು : ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಸಪೋರ್ಟ್ ಮಾಡಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೋಮೀಟರ್, ಗ್ರಾವಿಟಿ ಸೆನ್ಸಾರ್ ಸೌಲಭ್ಯವನ್ನು ಒಳಗೊಂಡಿದೆ.
ಮೆಮೊರಿ ಹಾಗೂ ಕಲರ್ ಆಯ್ಕೆ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದ್ದು, ಅವು ಕ್ರಮವಾಗಿ 8 GB RAM + 128GB ಸ್ಟೋರೇಜ್ ಹಾಗೂ 6 GB RAM + 128GB ಆಯ್ಕೆ ಆಗಿವೆ. ಈ ಮೊಬೈಲ್ ಬ್ಲೂ, ಆರೆಂಜ್ ಮತ್ತು ಸಿಲ್ವರ್ ಕಲರ್ ಆಯ್ಕೆ ಪಡೆದಿದೆ.


Click it and Unblock the Notifications








