Just In
- 58 min ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
- 1 hr ago
ಬೆಂಗಳೂರಿಗರೇ ಗಮನಿಸಿ... ಇನ್ನೇನು ಕೆಲವೇ ದಿನದಲ್ಲಿ NIMBUS ಆಪ್ ಲಾಂಚ್!
- 3 hrs ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 4 hrs ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
Don't Miss
- News
ತ್ರಿಪುರಾ ವಿಧಾನಸಭೆ ಚುನಾವಣೆ: 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
- Sports
ಮತ್ತೊಮ್ಮೆ ನಮಗೆ ಆತನೇ ಬಲು ದೊಡ್ಡ ಕಂಟಕ: ಭಾರತೀಯ ಆಟಗಾರನ ಬಗ್ಗೆ ಆಸಿಸ್ ಕ್ರಿಕೆಟಿಗನ ಆತಂಕ!
- Finance
ಅದಾನಿ ಗ್ರೂಪ್ ವಿರುದ್ಧ ಆರೋಪ: 'ನಾವು ಜಾಗರೂಕರಾಗಿದ್ದೇವೆ' ಎಂದ ಭಾರತದ ಉನ್ನತ ಬ್ಯಾಂಕ್ಗಳು
- Movies
ಅತಿಹೆಚ್ಚು ಟಿವಿಆರ್ ಗಳಿಸಿದ ಕನ್ನಡದ 14 ಚಿತ್ರಗಳಿವು; ಆರನೇ ಸ್ಥಾನಕ್ಕೇರಿದ ಕಾಂತಾರ!
- Lifestyle
ಬಿಪಿ ಸಮಸ್ಯೆಯೇ? ಪಿಜ್ಜಾ, ಮಜ್ಜಿಗೆ ಈ ಬಗೆಯ ಅಧಿಕ ಸೋಡಿಯಂ ಆಹಾರ ಸೇವಿಸಲೇಬೇಡಿ
- Automobiles
ಬಾಕ್ಸ್ ಆಫೀಸ್ನಲ್ಲಿ 'ಪಠಾಣ್' ಅಬ್ಬರ: ಈ ಚಿತ್ರದಲ್ಲಿ ಕಾಣಿಸಿಕೊಂಡ ಆಕರ್ಷಕ ಕಾರುಗಳಿವು...
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸ್ಯಾಮ್‌ಸಂಗ್ ಸಂಸ್ಥೆಯಿಂದ ಗ್ಯಾಲಕ್ಸಿ A23 ಬಿಡುಗಡೆಗೆ ತಯಾರಿ! ಫೀಚರ್ಸ್ ನಿರೀಕ್ಷೆ ಏನು?
ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ಶೀಘ್ರದಲ್ಲೇ ಗ್ಯಾಲಕ್ಸಿ ಅನ್‌ಪ್ಯಾಕ್ಡ್ ಈವೆಂಟ್ ಅನ್ನು ನಡೆಸಲಿದೆ. ಇದು ಇದೇ ಜನವರಿ 18 ರಂದು ನಡೆಯಲಿದ್ದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಇನ್ನು ಬಹಿರಂಗವಾಗಿಲ್ಲ, ಆದರೆ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಆನ್‌ಲೈನ್‌ನಲ್ಲಿ ಸೋರಿಕೆಯಾದ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಹೊಸದಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ ಪರಿಚಯಿಸಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದಿರುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ನ ಆರಂಭಿಕ ಬೆಲೆ 23,999 ರೂ.ಗಳ ಆಯ್ಕೆಯಲ್ಲಿ ಲಭ್ಯವಾಗುವ ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಇನ್ಫಿನಿಟಿ ವಿ ಡಿಸ್‌ಪ್ಲೇ ಆಗಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಸ್‌ಪ್ಲೇ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ. ಇದು 82.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯಲ್ಲಿ ಬರುವ ನಿರೀಕ್ಷೆಯಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಕ್ಯಾಮೆರಾ ಸೆಟ್‌ಅಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೋಮೀಟರ್, ಗ್ರಾವಿಟಿ ಸೆನ್ಸಾರ್ ಅನ್ನು ಹೊಂದಿದೆ.
ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ ಭಾರತದಲ್ಲಿ 25,999ರೂ. ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಆದರೆ ಈ ಸ್ಮಾರ್ಟ್‌ಫೋನ್‌ನ ಅಧಿಕೃತ ಲಾಂಚ್ ಡೇಟ್ ಬಹಿರಂಗವಾದ ನಂತರ ಇದರ ಅಸಲಿ ಬೆಲೆ ಬಹಿರಂಗವಾಗುವ ನಿರೀಕ್ಷೆಯಿದೆ.
ಇದಲ್ಲದೆ ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ 6.5 ಇಂಚಿನ HD+ ಇನ್ಫಿನಿಟಿ-ವಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ P35 ಪ್ರೊಸೆಸರ್ ವೇಗವನ್ನು ಹೊಂದಿದೆ. ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ವರ್ಚುವಲ್ RAM ಸಹಾಯದಿಂದ 8GB RAM ವರೆಗೆ ವಿಸ್ತರಿಸಬಹುದು. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470