Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ನಿಮ್ಮಿಷ್ಟದ ಫೋನ್‌ ಬೆಲೆಯಲ್ಲಿ ಇಳಿಕೆ!..ಸಸ್ತಾ ಬೆಲೆಗೆ ಲಭ್ಯ!

ಜನಪ್ರಿಯ ಸ್ಯಾಮ್‌ಸಂಗ್ ಮೊಬೈಲ್‌ ಕಂಪನಿಯು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಗ್ಯಾಲಕ್ಸಿ A ಸರಣಿಯಲ್ಲಿ ಪರಿಚಯಿಸಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳಿಂದ ಫೋನ್‌ ಪ್ರಿಯರನ್ನು ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆ ಕಂಡು ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಸ್ಯಾಮ್‌ಸಂಗ್‌ ತನ್ನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ಮಾರುಕಟ್ಟೆಯಲ್ಲಿ ಈಗ 21% ನಷ್ಟು ಡಿಸ್ಕೌಂಟ್‌ ದರದಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್‌ನ ವೇರಿಯಂಟ್‌ 28,990ರೂ. ಗಳ ಪ್ರೈಸ್‌ ಟ್ಯಾಗ್‌ ಹೊಂದಿದ್ದು, 22,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌ನ ನಿಮ್ಮಿಷ್ಟದ ಫೋನ್‌ ಬೆಲೆಯಲ್ಲಿ ಇಳಿಕೆ!..ಸಸ್ತಾ ಬೆಲೆಗೆ ಲಭ್ಯ!

ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲೂ, ಆರೆಂಜ್‌ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 5G ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಇನ್ಫಿನಿಟಿ ವಿ ಡಿಸ್‌ಪ್ಲೇ ಆಗಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಇದು 82.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ನ ನಿಮ್ಮಿಷ್ಟದ ಫೋನ್‌ ಬೆಲೆಯಲ್ಲಿ ಇಳಿಕೆ!..ಸಸ್ತಾ ಬೆಲೆಗೆ ಲಭ್ಯ!

ಪ್ರೊಸೆಸರ್‌ ಸಾಮರ್ಥ್ಯ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 5G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯಲ್ಲಿ ಬರುವ ನಿರೀಕ್ಷೆಯಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸಿಲೆರೋಮೀಟರ್‌, ಗ್ರಾವಿಟಿ ಸೆನ್ಸಾರ್‌ ಅನ್ನು ಹೊಂದಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8 GB RAM + 128GB ಸ್ಟೋರೇಜ್ ಹಾಗೂ 6 GB RAM + 128GB ಸ್ಟೋರೇಜ್ ಆಗಿವೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲೂ, ಆರೆಂಜ್‌ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Samsung Galaxy A23 5G Price Cut on Amazon; Offer Price, Specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+