Home
ಸುದ್ದಿಜಾಲ

ಸ್ಯಾಮ್‌ಸಂಗ್‌ನಿಂದ ಹೊಸ 5G ಫೋನ್‌ ಬಿಡುಗಡೆ! ಹೇಗಿದೆ ಫೀಚರ್ಸ್‌? ಏನಿದರ ವಿಶೇಷ?

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ಹೊಸ 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ತನ್ನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 5G ಫೋನ್‌ ಅನ್ನು ಇದೀಗ ಮಾರುಕಟ್ಟೆಗೆ ಪರಿಚಯಿಸಿದೆ. ಇದು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮರಾ ಹೊಂದಿರುವುದು ಪ್ರಮುಖ ಹೈಲೈಟ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸದಾಗಿ ಗ್ಯಾಲಕ್ಸಿ A23 5G ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಭಿನ್ನ ಮಾದರಿಯ ವಿನ್ಯಾಸವನ್ನು ಹೊಂದಿದ್ದು, ಮೂರು ರೀತಿಯ ಬಣ್ಣಗಳ ಆಯ್ಕೆಗಳಲ್ಲಿ ಬರಲಿದೆ. ಜೊತೆಗೆ ಕೇವಲ ಒಂದು RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68-ರೇಟೆಡ್ ನಿರ್ಮಾಣವನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇ‍ಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್‌ 5.8 ಇಂಚಿನ HD+ TFT ಡಿಸ್‌ಪ್ಲೇಯನ್ನು ಹೊಂದಿದೆ. ಇದು 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್ಪ್ಲೇ 16 ಮಿಲಿಯನ್ ಕಲರ್‌ಗಳನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಪಡೆದಿದೆ.

ಕ್ಯಾಮೆರಾ ಎಷ್ಟಿದೆ?

ಕ್ಯಾಮೆರಾ ಎಷ್ಟಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದ್ದು, f/1.8 ಲೆನ್ಸ್‌ ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G/LTE, ಬ್ಲೂಟೂತ್ v5.2, NFC, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 5G ಸ್ಮಾರ್ಟ್‌ಫೋನ್‌ ಪ್ರಸ್ತುತ ಜಪಾನ್‌ನಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ನ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಯು ಜಪಾನ್‌ನಲ್ಲಿ JPY 31,680 (ಅಂದಾಜು 18,200ರೂ.)ಬೆಲೆಯನ್ನು ಪಡೆದುಕೊಂಡಿದೆ. ಇದು ಕಪ್ಪು, ಕೆಂಪು ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌

ಇನ್ನು ಸ್ಯಾಮ್‌ಸಂಗ್‌ ಕಂಪೆನಿ ಇದೇ ವರ್ಷ ಮಾರ್ಚ್‌ ತಿಂಗಳಿನಲ್ಲಿ ಗ್ಯಾಲಕ್ಸಿ A23 4G ಫೋನ್‌ ಲಾಂಚ್‌ ಮಾಡಿತ್ತು. ಆದರೆ ಇದೀಗ ಬಿಡುಗಡೆ ಆಗಿರುವ ಗ್ಯಾಲಕ್ಸಿ A23 5G ಫೋನ್‌ಗೂ ಗ್ಯಾಲಕ್ಸಿ A23 4G ಫೋನ್‌ಗೆ ಸಾಕಷ್ಟು ವ್ಯತ್ಯಾಸವಿದೆ. ಯಾಕಂದ್ರೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳನ್ನು ವೈವಿಧ್ಯಮಯತೆಯನ್ನು ಕಾಣಬಹುದಾಗಿದೆ. ಅದರಂತೆ ಗ್ಯಾಲಕ್ಸಿ A23 4G ಸ್ಮಾರ್ಟ್‌ಫೋನ್‌ 6.6-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

Best Mobiles in India

English summary
Samsung Galaxy A23 5G With IP68 Rating Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+