ಸ್ಯಾಮ್‌ಸಂಗ್ ಗ್ಯಾಲಕ್ಸಿ A23e ಫೋನಿನ ಫೀಚರ್ಸ್‌ ಲೀಕ್!..ಇದು 5G ಫೋನಾ?

|

ಮೊಬೈಲ್ ಮಾರುಕಟ್ಟೆಗೆ ಸ್ಯಾಮ್‌ಸಂಗ್ ನೂತನವಾಗಿ ಸ್ಮಾರ್ಟ್‌ಫೋನ್ ಒಂದನ್ನು ಪರಿಚಯಿಸಲು ತಯಾರಿ ನಡೆಸಿದೆ. ಈಗಾಗಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯಲ್ಲಿ ಹಲವು ಬಜೆಟ್‌ ದರದ ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಆ ಸಾಲಿಗೆ ಈಗ ಗ್ಯಾಲಕ್ಸಿ A23e ಸ್ಮಾರ್ಟ್‌ಫೋನ್‌ ಸೇರ್ಪಡೆ ಮಾಡಲಿದ್ದು, ಇದು A23 5G ಫೋನಿನ ಯಶಸ್ಸಿನ ಮುಂದುವರಿದ ಭಾಗವಾಗಿ ಕಾಣಿಸಿಕೊಳ್ಳಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರಲಿದೆ ಎಂದು ಹೇಳಲಾಗ್ತಿದೆ.

ಹೊರಹಾಕಿಲ್ಲ

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A23e ಸ್ಮಾರ್ಟ್‌ಫೋನ್‌ ಅನಾವರಣ ಮಾಡುವ ತಯಾರಿಯಲ್ಲಿದೆ ಎನ್ನಲಾಗಿದೆ. ಆದ್ರೆ ಈ ಬಗ್ಗೆ ಕಂಪನಿಯಿಂದ ಯಾವುದೇ ಅಧಿಕೃತವಾದ ಹೇಳಿಕೆ ಹೊರಹಾಕಿಲ್ಲ. ಇನ್ನು ಈ ಫೋನಿನ ಕೆಲವು ಫೀಚರ್ಸ್‌ಗಳು ಲೀಕ್ ಆಗಿದ್ದು, ಬಜೆಟ್‌ ದರದಲ್ಲಿ ಗ್ರಾಹಕರ ಕುತೂಹಲ ಹೆಚ್ಚಿಸಿದೆ. ಮುಂಬರಲಿರುವ ಈ ಹೊಸ ಫೋನ್ 5.8 ಇಂಚಿನ ಇನ್ಫಿನಿಟಿ ವಿ ಸ್ಕ್ರೀನ್‌ ಅನ್ನು ಒಳಗೊಂಡಿರಲಿದೆ.

ಹಿಂಭಾಗದಲ್ಲಿ

ಸೋರಿಕೆಯ ಮಾಹಿತಿ ಪ್ರಕಾರ, ಈ ಫೋನ್ ಕಪ್ಪು ಮತ್ತು ಬಿಳಿ ಬಣ್ಣಗಳ ಆಯ್ಕೆಯಲ್ಲಿ ಬರಲಿದ್ದು, ಹಿಂಭಾಗದಲ್ಲಿ ಸಂಸ್ಥೆಯ ಬ್ರ್ಯಾಂಡಿಂಗ್ ರಚನೆಯನ್ನು ಹೊಂದಿರಲಿದೆ. ಹಾಗೆಯೇ ಈ ಫೋನ್‌ನ ಎಲ್ಇಡಿ ಫ್ಲ್ಯಾಷ್ ಜೊತೆಗೆ ಸಾಧನದ ಮೇಲಿನ ಎಡ ಮೂಲೆಯಲ್ಲಿ ಹಿಂಭಾಗದಲ್ಲಿ ಒಂದೇ ಕ್ಯಾಮೆರಾ ಸಂವೇದಕವನ್ನು ಇರಲಿದೆ. One UI 5.1 ಆಧಾರಿತ ಆಂಡ್ರಾಯ್ಡ್‌ 12 ನಲ್ಲಿ ಈ ಫೋನ್ ಕಾರ್ಯ ನಿರ್ವಹಿಸಲಿದೆ ಎನ್ನಲಾಗಿದೆ.

ಚಾರ್ಜಿಂಗ್

ಹಾಗೆಯೇ ಈ ಫೋನ್ ಅನ್ನು ಅಧಿಕೃತವಾಗಿ ಘೋಷಿಸುವ ಮೊದಲು, ಅದರ ರೆಂಡರ್‌ಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A23e ಫೋನಿನ ಸೋರಿಕೆಯಾದ ರೆಂಡರ್‌ಗಳ ಪ್ರಕಾರ, ಈ ಹ್ಯಾಂಡ್‌ಸೆಟ್‌ನಲ್ಲಿ ವಾಟರ್‌ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇ ಇರುತ್ತದೆ. ಹಾಗೆಯೇ ಈ ಫೋನ್ 25W ವೇಗದ ವೈರ್ಡ್ ಚಾರ್ಜಿಂಗ್ ಸೌಲಭ್ಯ ಹೊಂದಿರುವ ಸಾಧ್ಯತೆಗಳಿವೆ. ಹೆಚ್ಚುವರಿಯಾಗಿ, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಅಲ್ಲಿ ಹೊಂದಿಕೊಳ್ಳುತ್ತದೆ. ಒಟ್ಟಾರೆ ಇದು ಗ್ಯಾಲಕ್ಸಿ A23 5G ಫೋನಿಗೆ ಅಪ್‌ಗ್ರೇಡ್ ಆಗಿದೆ ಎನ್ನುತ್ತಿವೆ ವದಂತಿಗಳಿವೆ. ಹಾಗಾದರೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ A23 5G ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A23 5G ಫೋನಿನ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ A23 5G ಫೋನಿನ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 5G ಸ್ಯಾಮ್‌ಸಂಗ್‌ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಕೂಡ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅನಿರ್ದಿಷ್ಟ ಆಕ್ಟಾ ಕೋರ್‌ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ಆಧಾರಿತ One UI 4.1 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಬಲವನ್ನು ಹೊಂದಿದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ.

ಸಾಮರ್ಥ್ಯದ

ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರು ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ v5.0, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

Best Mobiles in India

English summary
Samsung Galaxy A23e Renders Leaked, Smartphone details revealed.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X