Just In
Don't Miss
- Sports
ದೇಶಕ್ಕಿಂತ ಹೆಚ್ಚಿನದಾಗಿ ಆತನಿಗೋಸ್ಕರ ಕ್ರಿಕೆಟ್ ಆಡಿದ್ದೇನೆ ಎಂದ ಸುರೇಶ್ ರೈನಾ!
- News
Railway Station: ಅಮೃತ್ ಭಾರತ್ ಯೋಜನೆಯಡಿ ಕರ್ನಾಟಕದ 52 ರೈಲು ನಿಲ್ದಾಣ ಅಭಿವೃದ್ಧಿ: ಸರ್ಕಾರ
- Movies
Saregamapa: ಹಳ್ಳಿ Vs ನಗರದ ಕಥೆ ಹೇಳಿ ನೆಟ್ಟಿಗರಿಂದ ಭೇಷ್ ಎನಿಸಿಕೊಂಡ 'ಸರಿಗಮಪ'ದ ಪುಟಾಣಿ ದಿಯಾ !
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೇನ್ಸ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Lifestyle
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸ್ಯಾಮ್‌ಸಂಗ್ ಕಂಪೆನಿಯಿಂದ ಬರಲಿದೆಯಾ ಅಚ್ಚರಿಯ ಸ್ಮಾರ್ಟ್‌ಫೋನ್!
ಸ್ಯಾಮ್‌ಸಂಗ್ ಕಂಪೆನಿಯ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದ್ದೆ ಇರುತ್ತದೆ. ಇದಕ್ಕೆ ತಕ್ಕಂತೆ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳು ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಆಯ್ಕೆಗಳಲ್ಲಿ ಒಂದೆನಿಸಿಕೊಂಡಿವೆ. ಅದರಂತೆ ಸ್ಯಾಮ್‌ಸಂಗ್ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ನಿರೀಕ್ಷೆಯನ್ನು ಇಡಲಾಗಿದೆ. ಸದ್ಯ ಇದೀಗ ಸ್ಯಾಮ್‌ಸಂಗ್ ಕಂಪೆನಿ ತನ್ನ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಗ್ಯಾಲಕ್ಸಿ A24 ಫೋನ್ ಬಿಡುಗಡೆ ಮಾಡಲು ತಯಾರಿ ನಡೆಸಿದೆ ಎಂದು ವರದಿಯಾಗಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡುವ ಸಾಧ್ಯತೆಯಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಪ್ರಮಾಣೀಕರಣ ಡೇಟಾಬೇಸ್‌ನಲ್ಲಿ ಗುರುತಿಸಲ್ಪಟ್ಟಿದೆ ಎಂದು ವರದಿಯಾಗಿದೆ. ಇದು ಬಜೆಟ್ ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ? ಏನೆಲ್ಲಾ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಫೀಚರ್ಸ್ ನಿರೀಕ್ಷೆ ಏನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್ 4G ಸ್ಮಾರ್ಟ್‌ಫೋನ್ ಆಗಿರಬಹುದು ಎಂದು ವರದಿಯಾಗಿದೆ. ಈ ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಬಹುದು ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಬಹುದು. ಅಲ್ಲದೆ ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಬಹುದು ಎಂದು ಅಂದಾಜಿಸಲಾಗಿದೆ. ಡಿಸ್‌ಪ್ಲೇ 20:9 ರಚನೆಯ ಅನುಪಾತದಲ್ಲಿ ಬರುವ ಸಾಧ್ಯತೆಯಿದೆ.

ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ವೇಗವನ್ನು ಹೊಂದಿರಬಹುದು. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಹಾಗೆಯೇ 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಹೊಂದಿರಲಿದೆ. ಜೊತೆಗೆ ಮೆಮೊರಿ ಕಾರ್ಡ್ ಬಳಸಿಕೊಂಡು 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶ ನೀಡಲಿದೆ.
ಕ್ಯಾಮೆರಾ ಸೆಟ್‌ಅಪ್?
ಸ್ಯಾಮ್‌ಸಂಗ್ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಬಹುದು. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್ 4,000mAh ಬ್ಯಾಟರಿಯನ್ನು ಹೊಂದಿರಬಹುದು. ಇದು 15W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ ನಿರೀಕ್ಷೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಬೆಂಬಲಿಸಬಹುದು. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಬರುವ ಸಾಧ್ಯತೆಯಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಇನ್ನು ಬಹಿರಂಗವಾಗಿಲ್ಲ. ಆದರಿಂದ ಈ ಸ್ಮಾರ್ಟ್‌ಫೋನ್ ವಿನ್ಯಾಸ ಹಾಗೂ ಫೀಚರ್ಸ್ ಇನ್ನಷ್ಟು ಬದಲಾಗುವ ಸಾಧ್ಯತೆ ಕೂಡ ಇದೆ.
ಇದಲ್ಲದೆ ಸ್ಯಾಮ್‌ಸಂಗ್ ಕಂಪೆನಿ ಇತ್ತೀಚಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದು 6.5 ಇಂಚಿನ HD+ ಇನ್ಫಿನಿಟಿ-ವಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1560 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ ಹೈ ಡೆಫಿನಿಷನ್ ವ್ಯೂವಿಂಗ್ ಎಕ್ಸ್‌ಪಿರಿಯನ್ಸ್ ಅನ್ನು ನೀಡಲಿದೆ. ಇದು ವಾಟರ್‌ಡ್ರಾಪ್ ನಾಚ್ ವಿನ್ಯಾಸ ಮತ್ತು ಸ್ಲಿಮ್ ಬೆಜೆಲ್‌ಗಳೊಂದಿಗೆ ಪ್ಯಾಕ್ ಮಾಡಲ್ಪಟ್ಟಿದೆ. ಈ ಫೋನ್ ಮೀಡಿಯಾ ಟೆಕ್ P35 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470