Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಫೀಚರ್ಸ್‌ ಬಹಿರಂಗ! ಅತ್ಯದ್ಬುತ ಫೀಚರ್ಸ್‌!

ಸ್ಯಾಮ್‌ಸಂಗ್‌ ಕಂಪೆನಿ ಹೊಸ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದ್ದು, ಆನ್‌ಲೈನ್‌ನಲ್ಲಿ ಫೀಚರ್ಸ್‌ ಸೋರಿಕೆಯಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ವರದಿಯಾಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್‌ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದು, ಆನ್‌ಲೈನ್‌ನಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಫೀಚರ್ಸ್‌ ಬಹಿರಂಗ! ಅತ್ಯದ್ಬುತ ಫೀಚರ್ಸ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಫೀಚರ್ಸ್‌ ಹೇಗಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್‌ 6.5 ಇಂಚಿನ ಸೂಪರ್‌ ಅಮೋಲೆಡ್‌ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 80.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೂ 4GB RAM ಮತ್ತು 128GB ಇಂಟರ್‌ ಸ್ಟೋರೇಜ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಮೈಕ್ರೋ SD ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಫೀಚರ್ಸ್‌ ಬಹಿರಂಗ! ಅತ್ಯದ್ಬುತ ಫೀಚರ್ಸ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಕ್ಯಾಮೆರಾ ಸೆಟ್‌ಅಪ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ವರದಿಯಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಬ್ಯಾಟರಿ ಸಾಮರ್ಥ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್‌ 25W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ ಸಾಧ್ಯತೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಫೀಚರ್ಸ್‌ ಬಹಿರಂಗ! ಅತ್ಯದ್ಬುತ ಫೀಚರ್ಸ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್‌ ಸುಮಾರು $285 (ಅಂದಾಜು 23,500ರೂ) ಎಂದು ನಿರೀಕ್ಷಿಸಲಾಗಿದೆ.

ಇದಲ್ಲದೆ ಇತ್ತೀಚಿಗೆ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ PLS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408x1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ Exynos 1330 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Samsung Galaxy A24 4G smartphone features Leaked: details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+