ಸ್ಯಾಮ್‌ಸಂಗ್ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನಿನ ಫೀಚರ್ಸ್ ಲೀಕ್!..ಕ್ಯಾಮೆರಾ ಎಷ್ಟು?
ಮೊಬೈಲ್ ಮಾರುಕಟ್ಟೆಗೆ ಸ್ಯಾಮ್‌ಸಂಗ್ ನೂತನವಾಗಿ ಸ್ಮಾರ್ಟ್‌ಫೋನ್ ಒಂದನ್ನು ಪರಿಚಯಿಸಲು ತಯಾರಿ ನಡೆಸಿದೆ. ಈಗಾಗಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯಲ್ಲಿ ಹಲವು ಬಜೆಟ್ ದರದ ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಆ ಸಾಲಿಗೆ ಈಗ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್ ಸೇರ್ಪಡೆ ಮಾಡಲಿದ್ದು, ಇದು A23 ಫೋನಿನ ಯಶಸ್ಸಿನ ಮುಂದುವರಿದ ಆವೃತ್ತಿಯಾಗಿ ಕಾಣಿಸಿಕೊಳ್ಳಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರಲಿದೆ ಎಂದು ಹೇಳಲಾಗ್ತಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A24 ಸ್ಮಾರ್ಟ್‌ಫೋನ್ ಅನಾವರಣ ಮಾಡುವ ತಯಾರಿಯಲ್ಲಿದೆ ಎನ್ನಲಾಗಿದೆ. ಆದ್ರೆ ಬಿಡುಗಡೆ ಮುನ್ನವೇ ಈ ಫೋನಿನ ಕೆಲವು ಫೀಚರ್ಸ್‌ಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಇನ್ನು ಲೀಕ್ ಮಾಹಿತಿಯ ಪ್ರಕಾರ ಈ ಫೋನ್ ಆರಂಭಿಕ ಮೀಡ್‌ರೇಂಜ್ ಪ್ರೈಸ್ ಟ್ಯಾಗ್‌ನಲ್ಲಿ ಎಂಟ್ರಿ ಕೊಡುಗ ಸಾಧ್ಯತೆಗಳಿವೆ ಎನ್ನಲಾಗಿದೆ.

ಹಾಗೆಯೇ ಈ ಫೋನ್ 6.4 ಇಂಚಿನ ಡಿಸ್‌ಪ್ಲೇ ಒಳಗೊಂಡಿರಲಿದ್ದು, ಡಿಸ್‌ಪ್ಲೇಯು ಸೂಪರ್ AMOLED ಮಾದರಿಯಲ್ಲಿ ಇರಲಿದೆ. ಈ ಡಿಸ್‌ಪ್ಲೇಯು 90Hz ರಿಫ್ರೇಶ್ ರೇಟ್ ಪಡೆದಿರಲಿದ್ದು, ಹೆಚ್‌ಡಿ ಪ್ಲಸ್ ರೆಸಲ್ಯೂಶನ್ ಹೊಂದಿರಲಿದೆ. ಇನ್ನು ಈ ಫೋನ್ ಎಕ್ಸಿನೋಸ್ 7904 (Exynos 7904) ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿರುವ ಸಾಧ್ಯತೆಗಳು ಇವೆ.

ಇನ್ನು ಈ ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿರಲಿದ್ದು, ಮುಖ್ಯ ಕ್ಯಾಮೆರಾ ಸೆನ್ಸಾರ್ 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಸೆಲ್ಫಿಗಾಗಿ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಒಳಗೊಂಡಿರಲಿದೆ ಎನ್ನಲಾಗಿದೆ.

ಲೀಕ್ ಮಾಹಿತಿ ಪ್ರಕಾರ, ಈ ಫೋನ್ ಆರಂಭಿಕ 6GB RAM ಮತ್ತು 64GB ಆಂತರೀಕ ಸ್ಟೋರೇಜ್ ಆಯ್ಕೆಯನ್ನು ಹೊಂದಿರಲಿದೆ. ಹಾಗೆಯೇ 6GB RAM ಮತ್ತು 128 GB ವೇರಿಯಂಟ್‌ನ ಆಯ್ಕೆಯಲ್ಲಿಯೂ ಕಾಣಿಸಿಕೊಳ್ಳಬಹುದು. ಇನ್ನು ಈ ಸ್ಮಾರ್ಟ್‌ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿರಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A23 5G ಫೋನಿನ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A23 5G ಸ್ಯಾಮ್‌ಸಂಗ್ ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್ ಕೂಡ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅನಿರ್ದಿಷ್ಟ ಆಕ್ಟಾ ಕೋರ್ ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ One UI 4.1 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಬಲವನ್ನು ಹೊಂದಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು ಮೂರು ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ v5.0, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.


Click it and Unblock the Notifications








