ಹೊಸ ವರ್ಷದ ಹೊಸ್ತಿಲಲ್ಲಿ ಸ್ಯಾಮ್‌ಸಂಗ್‌ನಿಂದ ನ್ಯೂ ಫೋನ್ ಲಾಂಚ್! ಫೀಚರ್ಸ್ ಚಿಂದಿ!
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಸ್ಯಾಮ್‌ಸಂಗ್ ಕಂಪೆನಿ ಕೂಡ ಹಲವು ಆಕರ್ಷಕ ಹಾಗೂ ಗುಣಮಟ್ಟದ ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಅದೇ ಹಾದಿಯಲ್ಲಿ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಅನಾವರಣಗೊಳಿಸಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಾಪ್ ಅನ್ನು ಒಳಗೊಂಡಿದೆ. ಇದು Exynos 1280 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸೂಪರ್ ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ನೀಡಲಿದೆ. ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ವಿನ್ಯಾಸವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ ಎಕ್ಸಿನೋಸ್ 1280 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ One UI 5 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು Samsung ಐದು ವರ್ಷಗಳವರೆಗೆ ಭದ್ರತಾ ನವೀಕರಣಗಳನ್ನು ಮತ್ತು ಹೊಸ ಹ್ಯಾಂಡ್‌ಸೆಟ್‌ಗಳಿಗಾಗಿ ನಾಲ್ಕು ವರ್ಷಗಳ OS ಅಪ್‌ಗ್ರೇಡ್‌ಗಳನ್ನು ಭರವಸೆ ನೀಡುತ್ತಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಕ್ಯಾಮೆರಾ ಸೆಟಅಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಪರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್, GPS, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಸೇರಿದೆ. ಇದಲ್ಲದೆ ಡಾಲ್ಬಿ ಅಟ್ಮಾಸ್ ತಂತ್ರಜ್ಞಾನದೊಂದಿಗೆ ಸ್ಪೀಕರ್‌ಗಳನ್ನು ಹೊಂದಿದೆ. ಇದರೊಂದಿಗೆ ಅಕ್ಸೆಲೆರೊಮೀಟರ್‌ಗಳು, ಗೈರೊ ಸೆನ್ಸಾರ್, ಲೈಟ್ ಸೆನ್ಸಾರ್ ಮತ್ತು ವರ್ಚುವಲ್ ಪ್ರಾಕ್ಸಿಮಿಟಿ ಸೆನ್ಸಾರ್ ಒಳಗೊಂಡಿದೆ.

ಭಾರತದಲ್ಲಿ Samsung Galaxy A25 5G ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ಆಯ್ಕೆಯು 26,999ರೂ ಬೆಲೆಯನ್ನು ಹೊಂದಿದೆ. ಇನ್ನು 8GB + 256GB ಸ್ಟೋರೇಜ್ ಆಯ್ಕೆಯು 29,999ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಇದನ್ನು SBI ಕಾರ್ಡ್‌ಗಳನ್ನು ಬಳಸಿಕೊಂಡು ಖರೀದಿಸುವ ಗ್ರಾಹಕರಿಗೆ 3,000 ರಿಯಾಯಿತಿ ಕೂಡ ದೊರೆಯಲಿದೆ. ಈ ಫೋನ್ ತಿಳಿ ನೀಲಿ, ತಿಳಿ ಕಪ್ಪು, ನೀಲಿ ಮತ್ತು ಹಳದಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








