ಸ್ಯಾಮ್ಸಂಗ್ ಗ್ಯಾಲಕ್ಸಿ A25 5G ಫೋನ್‌ನ ಅಧಿಕೃತ ವಿನ್ಯಾಸ ಬಹಿರಂಗ! ಹೇಗಿದೆ ಇದರ ಡಿಸೈನ್!
ಸ್ಯಾಮ್‌ಸಂಗ್ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಹಲವು ಭಾರಿ ಈ ಸ್ಮಾರ್ಟ್‌ಫೋನ್‌ನ ವಿನ್ಯಾಸ ಬಹಿರಂಗವಾಗಿದೆ. ಇದೀಗ ಈ ಸ್ಮಾರ್ಟ್‌ಫೋನ್‌ನ ನಿರೀಕ್ಷಿತ ಫೀಚರ್ಸ್‌ಗಳು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಈ ಮೂಲಕ ಸ್ಮಾರ್ಟ್‌ಫೋನ್ ಬಿಡುಗಡೆಗೂ ಮುನ್ನವೇ ಟೆಕ್‌ವಲಯದಲ್ಲಿ ಹೊಸ ಸಂಚಲನ ಕ್ರಿಯೆಟ್ ಆಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ ಅಧಿಕೃತ ವಿನ್ಯಾಸ ಬಹಿರಂಗವಾಗಿದೆ. ಸೋರಿಕೆಯಾದ ಮಾಹಿತಿಯಂತೆ ಈ ಫೋನ್‌ನ ಹಿಂಭಾಗದಲ್ಲಿ ಮೂರು ಕ್ಯಾಮೆರಾ ಸೆನ್ಸಾರ್‌ಗಳನ್ನು ಲಂಬವಾಗಿ ಜೋಡಿಸಲಾಗಿದೆ. ಇನ್ನು ಕ್ಯಾಮೆರಾಗಳ ಪಕ್ಕದಲ್ಲಿ ಎಲ್ಇಡಿ ಫ್ಲ್ಯಾಷ್ ಹಾಗೂ ಕೆಳಭಾಗದಲ್ಲಿ ಸ್ಯಾಮ್ಸಂಗ್ ಬ್ರ್ಯಾಂಡಿಂಗ್ ಹೊಂದಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ನಿರೀಕ್ಷಿಸಬಹುದಾದ ಫೀಚರ್ಸ್‌ಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ 6.44 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರುವ ನಿರೀಕ್ಷೆಯಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇದು 19.5:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, 80.91 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 90 Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 1280SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ v13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು ಎಂದು ಹೇಳಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ವೈಡ್ ಆಂಗಲ್ ಲೆನ್ಸ್ ಅನ್ನು ಹೊಂದಿರಲಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಹೊಂದಿರಲಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ 13ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಬಹುದು ಎನ್ನಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್, ಕಂಪಾಸ್, ಗೈರೋಸ್ಕೋಪ್ ಅನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಇದು ಲೈಮ್ ಗ್ರೀನ್, ಲೈಟ್ ಬ್ಲೂ, ಬ್ಲೂ-ಗ್ರೇ ಮತ್ತು ಕಪ್ಪು ಬಣ್ಣಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗುತ್ತದೆ.
ಇನ್ನು ಇತ್ತೀಚಿಗೆ ಸ್ಯಾಮ್‌ಸಂಗ್ ಕಂಪೆನಿ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 7.6 ಇಂಚಿನ ಇನರ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,176 x 1,812 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು AMOLED 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ಜೊತೆಗೆ 1Hz ಮತ್ತು 120Hz ನಡುವಿನ ಅಡಾಪ್ಟಿವ್ ರಿಫ್ರೆಶ್ ರೇಟ್ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಕವರ್ ಡಿಸ್‌ಪ್ಲೇ 6.2 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಆಗಿದೆ. ಇದು 2,316 x 904 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನಬ್ ಸಾಮರ್ಥ್ಯವನ್ನು ನೀಡಲಿದೆ. ಈ ಡಿಸ್‌ಪ್ಲೇ 48Hz ಮತ್ತು 120Hz ನಡುವಿನ ಅಡಾಪ್ಟಿವ್ ರಿಫ್ರೆಶ್ ರೇಟ್ ಮತ್ತು 412ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.


Click it and Unblock the Notifications








