Home
ಸುದ್ದಿಜಾಲ

ಶೀಘ್ರದಲ್ಲೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್‌ ಲಾಂಚ್‌ !

ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತನ್ನದೆ ಆದ ಬ್ರ್ಯಾಂಡ್‌ ವಲಯವನ್ನು ಸೃಷ್ಟಿಸಿಕೊಂಡಿರುವ ಸ್ಯಾಮ್‌ಸಂಗ್‌ ಗ್ರಾಹಕರ ನೆಚ್ಚಿನ ಸ್ಮಾರ್ಟ್‌ಫೋನ್‌ ಕಂಪೆನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಸದಾ ಹೊಸತನ್ನೇ ನೀಡಬಯಸುವ ಸ್ಯಾಮ್‌ಸಂಗ್‌ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಸಹ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಮಧ್ಯಮ ಶ್ರೇಣಿಯ ಮತ್ತೊಂದು ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಹೌದು

ಹೌದು, ದಕ್ಷಿಣ ಕೋರಿಯಾದ ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್ ಮತ್ತೊಂದು ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಇದನ್ನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್‌ ಎಂದು ಗುರುತಿಸಲಾಗಿದೆ. ಈ ಹೊಸ ಸ್ಮಾರ್ಟ್‌ಫೋನ್‌ ಕಂಪೆನಿಯ ಅಧಿಕೃತ ವೆಬ್‌ಸೈಟ್ ನಲ್ಲಿ ಶೀಘ್ರದಲ ಬಿಡುಗಡೆ ಆಗಲಿದೆ ಎಂದು ಉಲ್ಲಖಿಸಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಸಹ ಕಂಪೆನಿ ಅಧಿಕೃತವಾಗಿ ತಿಳಿಸಿದೆ. ಸದ್ಯ ಕಂಪೆನಿ ಉಲ್ಲೇಖಿಸಿರುವ ಫೀಚರ್ಸ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ನು ಈ ಸ್ಮಾರ್ಟ್‌ಫೋನ್‌ 6.4-ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದೆ. ಜೊತೆಗೆ ಇದು ಇನ್‌ಡಿಸ್‌ಪ್ಲೇ ಫಿಂಗರ್‌ ಪ್ರಿಂಟರ್‌ಅನ್ನು ಒಳಗೊಂಡಿದೆ. ಅಲ್ಲದೆ ಇದು ಉತ್ತಮ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿದ್ದು, ಉತ್ತಮ ಅನುಭವ ನೀಡುವ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಪ್ರೊಸೆಸರ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್‌ ಯಾವ ಪ್ರೊಸೆಸರ್ ಅನ್ನು ಬಳಸುತ್ತಿದೆ ಎಂದು ಕಂಪೆನಿ ಎಲ್ಲಿಯೂ ಉಲ್ಲೇಖ ಮಾಡಿಲ್ಲ. ಆದರೆ ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಇದು ಮೀಡಿಯಾ ಟೆಕ್ ಹಿಲಿಯೊ P65 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು 4GB RAM + 64GB ಹಾಗೂ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೆರಿಯೆಂಟ್‌ ಆಯ್ಕೆಗಳನ್ನ ಹೊಂದಿರಲಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ಸೆನ್ಸಾರ್‌ ಅಲ್ಟ್ರಾ ವೈಡ್‌ ಆಂಗಲ್‌ ಸೆನ್ಸಾರ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 20 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ ಹೇಗಿರಲಿದೆ ಅನ್ನೊದು ಇನ್ನು ಅಧಿಕೃತವಾಗಿಲ್ಲ. ಆದರೆ ಇದು ಪ್ರಾರಂಭದಲ್ಲಿ 15,000 ರೂ ಹತ್ತಿರದಲ್ಲಿದೆ ಎಂದು ನಿರೀಕ್ಷಿಸಬಹುದಾಗಿದೆ. ಅಲ್ಲದೆ ಇದು ಪ್ರಿಸ್ಮ್ ಕ್ರಷ್ ಬ್ಲ್ಯಾಕ್, ಪ್ರಿಸ್ಮ್ ಕ್ರಷ್ ಬ್ಲೂ, ಪ್ರಿಸ್ಮ್ ಕ್ರಷ್ ರೆಡ್, ಪ್ರಿಸ್ಮ್ ಕ್ರಷ್ ವೈಟ್ ಕಲರ್‌ಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Samsung Galaxy A31 is now official with 48MP quad camera, 5,000mAh battery.to know more visit to kannada.gizbot.com s
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+