ಸ್ಯಾಮ್‌ಸಂಗ್‌ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!

|

ಜನಪ್ರಿಯ ಮೊಬೈಲ್‌ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಸ್ಯಾಮ್‌ಸಂಗ್ ಇತ್ತೀಚಿಗೆ A ಸರಣಿಯಲ್ಲಿ ಹಲವು ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಆ ಪೈಕಿ ಒಮ್ಮೆ ದರ ಇಳಿಕೆ ಕಂಡು ಗಮನ ಸೆಳೆದಿದ್ದ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಇದೀಗ ಭರ್ಜರಿ ಇಳಿಕೆ ಆಗಿದ್ದು, ಗ್ರಾಹಕರನ್ನು ಆಕರ್ಷಿಸಿದೆ. ಕ್ವಾಡ್‌ ಕ್ಯಾಮೆರಾ ರಚನೆ ಮತ್ತು 5,000mAh ಬ್ಯಾಟರಿ ಬ್ಯಾಕ್‌ಅಪ್ ಈ ಫೋನಿನ ಪ್ರಮುಖ ಹೈಲೈಟ್‌ಗಳಾಗಿವೆ.

ಸ್ಮಾರ್ಟ್‌ಫೋನ್

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 2,000ರೂ. ಕಡಿತ ಆಗಿದೆ. 6GB + 128GB ವೇರಿಯಂಟ್‌ ಮಾಡೆಲ್‌ 17,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೊ P65 ಪ್ರೊಸೆಸರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್‌ 10 ಓಎಸ್‌ ಹೊಂದಿದೆ. ಅಮೆಜಾನ್ ತಾಣ, ಸ್ಯಾಮ್‌ಸಂಗ್ ವೆಬ್‌ಸೈಟ್‌ ಹಾಗೂ ಸ್ಯಾಮ್‌ಸಂಗ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಗ್ಯಾಲಕ್ಸಿ A31 ಫೋನಿನ ಇನ್ನಿತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್‌ 6.4-ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದೆ. ಜೊತೆಗೆ ಇದು ಇನ್‌ಡಿಸ್‌ಪ್ಲೇ ಫಿಂಗರ್‌ ಪ್ರಿಂಟರ್‌ಅನ್ನು ಒಳಗೊಂಡಿದೆ. ಅಲ್ಲದೆ ಇದು ಉತ್ತಮ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿದ್ದು, ಉತ್ತಮ ಅನುಭವ ನೀಡುವ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್‌ ಶಕ್ತಿ

ಪ್ರೊಸೆಸರ್‌ ಶಕ್ತಿ

ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P65 ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಫೋನ್ 4GB RAM + 64GB ಹಾಗೂ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ ವೈಡ್‌ ಆಂಗಲ್‌ ಸೆನ್ಸಾರ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 20 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಸ್ಯಾಮ್‌ಸಂಗ್ ಪೇ, ಸ್ಯಾಮ್‌ಸಂಗ್ ಹೆಲ್ತ್ ಆಯ್ಕೆಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy A31 comes in Prism Crush Black, Prism Crush Blue, and Prism Crush White colour options.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X