ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಫೋನ್ ಬೆಲೆಯಲ್ಲಿ ಭಾರಿ ಇಳಿಕೆ!
ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಕ್ವಾಡ್ ಕ್ಯಾಮೆರಾ ಸೆಟ್‌ಅಪ್, 5,000mAh ಸಾಮರ್ಥ್ಯದ ಬ್ಯಾಟರಿ, ವೇಗದ ಪ್ರೊಸೆಸರ್ ಮತ್ತು ಆಕರ್ಷಕ ಡಿಸೈನ್ ಈ ಫೋನಿನ ಹೈಲೈಟ್ಸ್‌ಗಳಾಗಿವೆ. ಇದೀಗ ಈ ಫೋನಿಗೆ ಬೆಲೆ ಇಳಿಕೆ ಕೊಡುಗೆ ನೀಡಿದ್ದು, ಮತ್ತಷ್ಟು ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಫೋನ್ ಡಿಸ್ಕೌಂಟ್ ಕೊಡುಗೆ ನೀಡುತ್ತದೆ. ಈ ಫೋನಿನ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 21,999 ರೂ.ಗಳಾಗಿದೆ. ಆದರೆ ಕಂಪನಿಯು ಈ ವೇರಿಯಂಟ್ ಮೇಲೆ 1,000 ಕಡಿತ ಮಾಡಿದ್ದು, ಹೀಗಾಗಿ 20,999ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ ಐಸಿಐಸಿಐ ಕಾರ್ಡ್ ಮೂಲಕ ಫೋನ್ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿಯಾಗಿ 1000ರೂ. ಕ್ಯಾಶ್‌ಬ್ಯಾಕ್ ಸಹ ದೊರೆಯಲಿದೆ. ಇನ್ನುಳಿದಂತೆ ಗ್ಯಾಲಕ್ಸಿ A31 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ 6.4-ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದೆ. ಜೊತೆಗೆ ಇದು ಇನ್‌ಡಿಸ್‌ಪ್ಲೇ ಫಿಂಗರ್ ಪ್ರಿಂಟರ್‌ಅನ್ನು ಒಳಗೊಂಡಿದೆ. ಅಲ್ಲದೆ ಇದು ಉತ್ತಮ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದ್ದು, ಉತ್ತಮ ಅನುಭವ ನೀಡುವ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್ ಶಕ್ತಿ
ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P65 ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಫೋನ್ 4GB RAM + 64GB ಹಾಗೂ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ
ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ಸೆನ್ಸಾರ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸಾರ್, ಮೂರು ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 20 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ. ಸ್ಯಾಮ್‌ಸಂಗ್ ಪೇ, ಸ್ಯಾಮ್‌ಸಂಗ್ ಹೆಲ್ತ್ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ 6GB RAM ಮತ್ತು 128GB ವೇರಿಯಂಟ್ ಬೆಲೆಯಲ್ಲಿ ಇದೀಗ ಇಳಿಕೆ ಆಗಿದ್ದು, 20,999 ರೂ.ಗಳಿಗೆ ಫೋನ್ ಲಭ್ಯವಾಗಲಿದೆ. ಇನ್ನು ಈ ಫೋನ್ ಪ್ರಿಸ್ಮ್ ಕ್ರಷ್ ಬ್ಲ್ಯಾಕ್, ಪ್ರಿಸ್ಮ್ ಕ್ರಷ್ ಬ್ಲೂ, ಪ್ರಿಸ್ಮ್ ಕ್ರಷ್ ರೆಡ್, ಪ್ರಿಸ್ಮ್ ಕ್ರಷ್ ವೈಟ್ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ.


Click it and Unblock the Notifications








