ಮತ್ತೆ ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಈಗಾಗಲೇ ಹಲವು ಶ್ರೇಣಿಗಳಲ್ಲಿ ಫೋನ್‌ಗಳನ್ನು ಬಿಡುಗಡೆ ಮಾಡಿ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಗ್ಯಾಲಕ್ಸಿ A ಸರಣಿಯ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಆ ಪೈಕಿ ಈಗಾಗಲೇ ಬೆಲೆ ಇಳಿಕೆ ಕಂಡು ಗ್ರಾಹಕರನ್ನು ಆಕರ್ಷಿಸಿರುವ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಇದೀಗ ಮತ್ತೊಮ್ಮೆ ಬೆಲೆ ಇಳಿಕೆ ಕಂಡು ಗ್ರಾಹಕರನ್ನು ಸೆಳೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಮತ್ತೊಮ್ಮೆ 1,000ರೂ. ಕಡಿತ ಆಗಿದೆ. 17,999 ರೂ.ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುವ 6GB RAM + 128GB ವೇರಿಯಂಟ್‌ನ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆಯಿಂದಾಗಿ 16,999 ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P65 ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಹೊಂದಿದೆ. 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ ಹಾಗಾದರೆ ಗ್ಯಾಲಕ್ಸಿ A31 ಫೋನಿನ ಇನ್ನಿತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ 6.4-ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದೆ. ಜೊತೆಗೆ ಇದು ಇನ್‌ಡಿಸ್‌ಪ್ಲೇ ಫಿಂಗರ್ ಪ್ರಿಂಟರ್‌ಅನ್ನು ಒಳಗೊಂಡಿದೆ. ಅಲ್ಲದೆ ಇದು ಉತ್ತಮ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದ್ದು, ಉತ್ತಮ ಅನುಭವ ನೀಡುವ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P65 ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಫೋನ್ 4GB RAM + 64GB ಹಾಗೂ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ ವಿಶೇಷತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸಾರ್, ಮೂರು ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 20 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ. ಸ್ಯಾಮ್‌ಸಂಗ್ ಪೇ, ಸ್ಯಾಮ್‌ಸಂಗ್ ಹೆಲ್ತ್ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ 6GB RAM + 128GB ವೇರಿಯಂಟ್‌ನ ಬೆಲೆಯು 16,999 ರೂ. ಆಗಿದೆ.


Click it and Unblock the Notifications








