Just In
Don't Miss
- Lifestyle
ಪ್ರತಿದಿನ ಲವಂಗ ಹಾಕಿದ ಬಿಸಿನೀರನ್ನು ಕುಡಿದರೆ ಸಿಗುವುದು ಈ ಆರೋಗ್ಯಕರ ಲಾಭಗಳು
- News
ಏಪ್ರಿಲ್ 24ರವರೆಗೂ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ
- Finance
ಲಾಕ್ಡೌನ್ ಪರಿಹಾರವಲ್ಲ, ಹೆಚ್ಚಿನ ಕೋವಿಡ್-19 ಲಸಿಕೆ ಪರವಾನಗಿ ಪಡೆಯಬೇಕಿದೆ: ಚಂದ್ರಶೇಖರನ್
- Automobiles
ಹೊಸ ಇನ್ಪೋಟೈನ್ ಸಿಸ್ಟಂ ಸೌಲಭ್ಯ ಪಡೆದುಕೊಳ್ಳಲಿವೆ ಫೋಕ್ಸ್ವ್ಯಾಗನ್ ಟೈಗನ್ ಮತ್ತು ಸ್ಕೋಡಾ ಕುಶಾಕ್!
- Sports
ಬ್ರಿಟನ್ನ ಕೆಂಪು ಪಟ್ಟಿಗೆ ಭಾರತ ಸೇರ್ಪಡೆ, WTC ಫೈನಲ್ಗೆ ತೊಡಕು?!
- Movies
ತಂದೆ-ತಾಯಿಯ ಮದುವೆ ರಹಸ್ಯ ಬಿಚ್ಚಿಟ್ಟ ನಟಿ ಕಂಗನಾ ರಣಾವತ್
- Education
International Labour Day 2021: ಮೇ 1ರಂದು ಕಾರ್ಮಿಕರ ದಿನವನ್ನಾಗಿ ಏಕೆ ಆಚರಿಸಲಾಗುತ್ತೆ ?
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಬಿಡುಗಡೆ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಇತ್ತೀಚಿಗೆ ಗ್ಯಾಲಕ್ಸಿ A ಮತ್ತು ಗ್ಯಾಲಕ್ಸಿ M ಸರಣಿಯುಲ್ಲಿ ಕೆಲವು ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ A ಸರಣಿಯಲ್ಲಿ ಇಂದು (ಜೂನ್ 4) ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P65 ಪ್ರೊಸೆಸರ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಸಂಸ್ಥೆಯು ಇಂದು ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ಹಿಂಬದಿಯಲ್ಲಿ ಕ್ವಾಡ್ ಕ್ಯಾಮೆರಾ ರಚನೆ ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. 4GB ಮತ್ತು 6GB RAMನ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿರುವ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಹಾಗಾದರೆ ಗ್ಯಾಲಕ್ಸಿ A31 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ 6.4-ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದೆ. ಜೊತೆಗೆ ಇದು ಇನ್‌ಡಿಸ್‌ಪ್ಲೇ ಫಿಂಗರ್ ಪ್ರಿಂಟರ್‌ಅನ್ನು ಒಳಗೊಂಡಿದೆ. ಅಲ್ಲದೆ ಇದು ಉತ್ತಮ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದ್ದು, ಉತ್ತಮ ಅನುಭವ ನೀಡುವ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್ ಶಕ್ತಿ
ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P65 ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಫೋನ್ 4GB RAM + 64GB ಹಾಗೂ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ
ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ಸೆನ್ಸಾರ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸಾರ್, ಮೂರು ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 20 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ. ಸ್ಯಾಮ್‌ಸಂಗ್ ಪೇ, ಸ್ಯಾಮ್‌ಸಂಗ್ ಹೆಲ್ತ್ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಗ್ಯಾಲಕ್ಸಿ A31 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದೆ. ಅವುಗಳಲ್ಲಿ 6GB RAM ಮತ್ತು 128GB ವೇರಿಯಂಟ್ ಬೆಲೆಯು 21,999 ರೂ. ಆಗಿದೆ. ಈ ಫೋನ್‌ಗಳು ಪ್ರಿಸ್ಮ್ ಕ್ರಷ್ ಬ್ಲ್ಯಾಕ್, ಪ್ರಿಸ್ಮ್ ಕ್ರಷ್ ಬ್ಲೂ, ಪ್ರಿಸ್ಮ್ ಕ್ರಷ್ ರೆಡ್, ಪ್ರಿಸ್ಮ್ ಕ್ರಷ್ ವೈಟ್ ಬಣ್ಣಗಳ ಆಯ್ಕೆಗಳನ್ನು ಹೊಂದಿವೆ. ಜೂನ್ 4 ರಿಂದ ಅಮೆಜಾನ್, ಫ್ಲಿಪ್‌ಕಾರ್ಟ್, ಸ್ಯಾಮ್‌ಸಂಗ್ ಇ-ಸ್ಟೋರ್ ಹಾಗೂ ಪ್ರಮುಖ ಆಫ್‌ಲೈನ್ ಸ್ಟೋರ್‌ಗಳಲ್ಲಿಯೂ ಖರೀದಿಗೆ ಲಭ್ಯವಾಗುತ್ತದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999