Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A32 4G ಸ್ಮಾರ್ಟ್‌ಫೋನ್‌ ಬಿಡುಗಡೆ!..ವಿಶೇಷತೆ ಏನು?

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A32 4G ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಸಪೋರ್ಟ್ ಪೇಜ್ ಈಗ ಸ್ಯಾಮ್‌ಸಂಗ್ ಇಂಡಿಯಾ ವೆಬ್‌ಸೈಟ್‌ನಲ್ಲಿ ಲೈವ್ ಆಗಿರುವುದರಿಂದ ಸ್ಮಾರ್ಟ್‌ಫೋನ್ ಈಗಾಗಲೇ ಭಾರತದ ಮಾರುಕಟ್ಟೆಗೂ ಎಂಟ್ರಿ ಕೊಡಲಿದೆ ಎನ್ನಲಾಗಿದೆ. ಆದರೆ ಉಡಾವಣೆಗೆ ಮುಂಚಿತವಾಗಿ, ಸ್ಯಾಮ್‌ಸಂಗ್ ಮಧ್ಯ ಶ್ರೇಣಿಯ ಗ್ಯಾಲಕ್ಸಿ ಸ್ಮಾರ್ಟ್‌ಫೋನ್‌ನ ಸ್ವಲ್ಪ ಟ್ರಿಮ್ ಡೌನ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು 6.4 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಕ್ವಾಡ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸ್ಯಾಮ್‌ಸಂಗ್ ಗ್ಯಾಲಕ್ಸಿ A32 4G ಇನ್ಫಿನಿಟಿ-U ನಾಚ್-ಶೈಲಿಯ ವಿನ್ಯಾಸದೊಂದಿಗೆ 6.4-ಇಂಚಿನ ಎಸ್-ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌, FHD+ ಪ್ಯಾನೆಲ್‌ ಅನ್ನು ಹೊಂದಿದೆ. ಜೊತೆಗೆ ಇದು 90Hz ಡಿಸ್‌ಪ್ಲೇ ಹೊಂದಿರುವ ಮೊದಲ ಗ್ಯಾಲಕ್ಸಿ ಎ-ಸರಣಿ ಸ್ಮಾರ್ಟ್‌ಫೋನ್ ಆಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು 2.0GHz ಗಡಿಯಾರದ ವೇಗವನ್ನು ಹೊಂದಿರುವ ಆಕ್ಟಾ-ಕೋರ್ ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಹಾಗೆಯೇ ಇದು 4GB RAM, 6GB RAM, 8GB RAM ಮತ್ತು 64GB / 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಗ್ಯಾಲಕ್ಸಿ A31 4G ರೂಪಾಂತರವು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಮತ್ತು ನಾಲ್ಕನೇ ಕ್ಯಾಮೆರಾ 5ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ A32 4G ರೂಪಾಂತರವು 5,000mAh ಸಾಮರ್ಥ್ತದ ಬ್ಯಾಟರಿಯನ್ನು ಹೊಂದಿದ್ದು, ಇದು 15W ಸ್ಟ್ಯಾಂಡರ್ಡ್ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಂಡರ್‌ ವೈಲೆಟ್, ವಂಡರ್‌ ಬ್ಲ್ಯಾಕ್‌, ವಂಡರ್‌ ಬ್ಲೂ ಮತ್ತು ವಂಡರ್‌ ವೈಟ್‌ ಎಂಬ ನಾಲ್ಕು ಬಣ್ಣ ಆಯ್ಕೆಗಳಲ್ಲಿ ಬರಲಿದೆ. ಇನ್ನೂ ಈ ಸ್ಮಾರ್ಟ್‌ಫೋನ್‌ ಯಾವುದೇ ಬೆಲೆ ಮತ್ತು ಲಭ್ಯತೆಯ ವಿವರಗಳನ್ನು ನಿರ್ದಿಷ್ಟಪಡಿಸಿಲ್ಲ.

Best Mobiles in India

English summary
Samsung Galaxy A32 4G with 5,000mAh battery launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+