Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ A32 5G ಸ್ಮಾರ್ಟ್‌ಫೋನ್‌ ಲಾಂಚ್‌! ವಿಶೇಷತೆ ಏನು?

ದಕ್ಷಿಣ ಕೋರಿಯಾ ಮೂಲದ ಸ್ಮಾರ್ಟ್‌ಫೋನ್‌ ಧೈತ್ಯ ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ A32 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಅಗ್ಗದ ಬೆಲೆಯಲ್ಲಿ ಲಭ್ಯವಾಗುವ 5G ಸ್ಮಾರ್ಟ್‌ಫೋನ್ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬದಿಗಳಲ್ಲಿ ಮತ್ತು ಮೇಲ್ಭಾಗದಲ್ಲಿ ತುಲನಾತ್ಮಕವಾಗಿ ದಪ್ಪ ಬೆಜೆಲ್‌ಗಳನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಫೋನ್‌ನ ಹಿಂಭಾಗದಲ್ಲಿ ಫ್ಲಶ್ ಆಗಿ ಕುಳಿತುಕೊಳ್ಳುತ್ತದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A 32 5G ಸ್ಮಾರ್ಟ್‌ಫೋನ್‌ ಯುರೋಪಿಯನ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಇದು ಎರಡು RAM ಮತ್ತು ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ನಾಲ್ಕು ಬಣ್ಣಗಳ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರುವ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸ್ಯಾಮ್‌ಸಂಗ್ ಗ್ಯಾಲಕ್ಸಿ A32 5G ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು TFT ಇನ್ಫಿನಿಟಿ-Vಡಿಸ್ಪ್ಲೇ ಆಗಿದೆ.
ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 82.82% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ SoC ಪ್ರೊಸೆಸರ್‌ ವೇಗವನ್ನು ಪಡೆದಿಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A32 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಗ್ಯಾಲಕ್ಸಿ A32 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈ-ಫೈ, ಬ್ಲೂಟೂತ್ ಮತ್ತು ಜಿಪಿಎಸ್ ಅನ್ನು ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸ್ಕ್ಯಾನರ್ ಮತ್ತು ಡಾಲ್ಬಿ ಅಟ್ಮೋಸ್ ತಂತ್ರಜ್ಞಾನದಿಂದ ಸಕ್ರಿಯಗೊಳಿಸಲಾದ ಸರೌಂಡ್ ಸೌಂಡ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A32 5G ಸ್ಮಾರ್ಟ್‌ಫೋನ್‌ 64GB ರೂಪಾಂತರಕ್ಕೆ ಯುರೋ 279 (ಸುಮಾರು ರೂ. 24,800) ಮತ್ತು 128GB ರೂಪಾಂತರಕ್ಕೆ ಯುರೋ 299 (ಸರಿಸುಮಾರು ರೂ. 26,600) ಬೆಲೆಯನ್ನು ಹೊಂದಿದೆ. ಸದ್ಯ ಸ್ಯಾಮ್‌ಸಂಗ್ ಫೋನ್‌ನ ನಿಖರವಾದ ಸಂರಚನೆಗಳನ್ನು ಇನ್ನೂ ಹಂಚಿಕೊಂಡಿಲ್ಲ, ಆದರೆ ಅಧಿಕೃತ ಪ್ರಕಟಣೆಯಲ್ಲಿ 4GB, 6GB ಮತ್ತು 8GB - ಪ್ರದೇಶವನ್ನು ಅವಲಂಬಿಸಿ ಲಭ್ಯತೆಯೊಂದಿಗೆ ಮೂರು RAM ಮಾದರಿಗಳನ್ನು ಉಲ್ಲೇಖಿಸಲಾಗಿದೆ. ಇದು ಕಪ್ಪು, ನೀಲಿ, ವೈಲೆಟ್ ಮತ್ತು ವೈಟ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Samsung Galaxy A32 5G has been launched in the European market its cheapest 5G smartphone.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+