ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಅನಾವರಣ!
ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ A ಸರಣಿಯಲ್ಲಿ ಹಲವು ಮಾದರಿಯ ಸ್ಮಾರ್ಟ್‌ಫೋನ್ ಪರಿಚಯಿಸಿರುವ ಸ್ಯಾಮ್‌ಸಂಗ್ ಸದ್ಯ ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಅನ್ನು ಅನಾವರಣಗೊಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯನ್ನು ಹೊಂದಿದ್ದು, 6GB RAM ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಹೌದು, ಸ್ಯಾಮ್‌ಸಂಗ್ ತನ್ನ ಹೊಸ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಪರಿಚಯಿಸಿದೆ. ಇದು 90Hz ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸೂಪರ್ ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಅಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ , ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 20ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಸಿಂಗಲ್ ಚಾರ್ಜ್‌ನಲ್ಲಿ ಫೋನ್ 20 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್, ಬ್ಲೂಟೂತ್, ಯುಎಸ್‌ಬಿ ಟೈಪ್ C 2.0 ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಭಾರತದಲ್ಲಿ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ 21,999 ರೂ. ಬೆಲೆಯನ್ನು ಹೊಂದಿದೆ. ಇದು ಅವೆಸಮ್ ವೈಟ್, ಅವೆಸಮ್ ಬ್ಲೂ, ಅವೆಸಮ್ ಬ್ಲಾಕ್, ಅಂಡ್ ಅವೆಸಮ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








