ಭಾರತದಲ್ಲಿ ಸ್ಯಾಮ್‌ಸಂಗ್‌ ಸಂಸ್ಥೆಯ ಈ ಫೋನ್‌ ಬೆಲೆಯಲ್ಲಿ ಭಾರಿ ಕಡಿತ!

|

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಭಾರತದ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದೆ. ಭಾರತದ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆ ಇದೆ. ಇದಕ್ಕೆ ತಕ್ಕಂತೆ ಸ್ಯಾಮ್‌ಸಂಗ್‌ ಕಂಪೆನಿ ಕೂಡ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಅಲ್ಲದೆ ವಿಶೇಷ ದಿನಗಳಲ್ಲಿ ತನ್ನ ಸ್ಮಾರ್ಟ್‌ಫೋನ್‌ಗಳ ಬೆಲೆಯನ್ನು ಕಡಿತ ಮಾಡುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಾ ಬಂದಿದೆ. ಅದರಂತೆ ಇದೀಗ ತನ್ನ ಗ್ಯಾಲಕ್ಸಿ A32 ಫೋನಿನ ಮೇಲೆ ಬೆಲೆ ಕಡಿತವನ್ನು ಘೋಷಿಸಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಈ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಸ್ಯಾಮ್‌ಸಂಗ್‌ ಕಂಂಪೆನಿ ಗುಡ್‌ ನ್ಯೂಸ್‌ ನೀಡಿದೆ. ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 3,500ರೂ.ಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ 3,500ರೂ. ಗಳಷ್ಟು ಉಳಿತಾಯ ಮಾಡಲು ಸಾಧ್ಯವಾಗಲಿದೆ. ಹಾಗಾದ್ರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A32 ಬೆಲೆ ಕಡಿತದ ನಂತರದ ಬೆಲೆ ಎಷ್ಟು? ಈ ಫೋನಿನ ವಿಶೇಷತೆ ಏನಿದೆ? ಇದೆಲ್ಲದರ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಬೆಲೆ ಕಡಿತದ ನಂತರದ ಬೆಲೆ ಹೇಗಿದೆ?

ಬೆಲೆ ಕಡಿತದ ನಂತರದ ಬೆಲೆ ಹೇಗಿದೆ?

ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನಿನ ಬೆಲೆಯಲ್ಲಿ ದಿಡೀರ್‌ ಇಳಿಕೆಯನ್ನು ಮಾಡಿದೆ. ಈ ಮೂಲಕ ತನ್ನ ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಗುಡ್‌ ನ್ಯೂಸ್‌ ನೀಡಿದೆ. ಅದರಂತೆ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನಿನ ಬೆಲೆಯಲ್ಲಿ 3,500ರೂ. ಗಳಷ್ಟು ಕಡಿತವನ್ನು ಮಾಡಿದೆ. 23,499ರೂ. ಆರಂಭಿಕ ಬೆಲೆಯಲ್ಲಿ ಬಿಡುಗಡೆ ಆಗಿದ್ದ ಈ ಸ್ಮಾರ್ಟ್‌ಪೋನ್‌ ಬೆಲೆ ಕಡಿತದ ನಂತರ 19,999ರೂ. ಬೆಲೆಯಲ್ಲಿ ಲಭ್ಯವಾಗುತ್ತಿದೆ. ಇದನ್ನು ಸ್ಯಾಮ್‌ಸಂಗ್ ಆನ್‌ಲೈನ್ ಅಥವಾ ಚಿಲ್ಲರೆ ಅಂಗಡಿಗಳಿಂದ ಅಥವಾ ಅಮೆಜಾನ್‌ನಿಂದ ಖರೀದಿಸಬಹುದಾಗಿದೆ.

ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ!

ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ!

ಡಿಸ್‌ಪ್ಲೇ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸೂಪರ್ ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್ ಎಲ್ಲಾ ಬದಿಗಳಲ್ಲಿ ಕನಿಷ್ಠ ಬೆಜೆಲ್‌ಗಳನ್ನು ಹೊಂದಿದೆ, ಇನ್ಫಿನಿಟಿ-ಯು ನಾಚ್ ಡಿಸ್‌ಪ್ಲೇ ಇದಾಗಿದೆ.

ಪ್ರೊಸೆಸರ್ ಕಾರ್ಯವೈಖರಿ ಹೇಗಿದೆ?

ಪ್ರೊಸೆಸರ್ ಕಾರ್ಯವೈಖರಿ ಹೇಗಿದೆ?

ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ ಅಕ್ಟಾ-ಕೋರ್‌ ಮೀಡಿಯಾ ಟೆಕ್‌ ಹಿಲಿಯೊ G85 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM+128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ , ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 20ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬಲವೇನು?

ಬ್ಯಾಟರಿ ಬಲವೇನು?

ಸ್ಯಾಮ್‌ಸಂಗ್‌ A32 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಅಲ್ಲದೆ ಸಿಂಗಲ್‌ ಚಾರ್ಜ್‌ನಲ್ಲಿ ಫೋನ್ 20 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌, ಯುಎಸ್‌ಬಿ ಟೈಪ್‌ C 2.0 ಅನ್ನು ಬೆಂಬಲಿಸಲಿದೆ.

Best Mobiles in India

English summary
Samsung Galaxy A32 receives massive price cut in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X