ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ದಕ್ಷಿಣ ಕೊರಿಯಾದ ಸ್ಮಾರ್ಟ್‌ಫೋನ್ ದೈತ್ಯ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸದ್ಯ ಸ್ಯಾಮ್‌ಸಂಗ್ ತನ್ನ ಹೊಸ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ A32 ಅನ್ನು ಮಾರ್ಚ್ 5 ರಂದು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗೆ ಮೀಸಲಾಗಿರುವ ಮೈಕ್ರೊಸೈಟ್ ಮೂಲಕ ಗ್ರಾಹಕರು ಸ್ಮಾರ್ಟ್‌ಫೋನ್ ಖರೀದಿಸಲು ಸಾಧ್ಯವಾಗುತ್ತದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇದು 4G ಮತ್ತು 5G ಸಂಪರ್ಕವನ್ನು ಹೊಂದಿರುವ ಎರಡು ರೂಪಾಂತರಗಳಲ್ಲಿ ಡಿವೈಸ್ ಅನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸೂಪರ್ ಅಮೋಲೆಡ್ ಫುಲ್‌ಹೆಚ್‌ಡಿ + ಇನ್ಫಿನಿಟಿ-ಯು ಪ್ಯಾನಲ್ ಆಗಿದೆ. ಇನ್ನು ಈ ಡಿಸ್‌ಪ್ಲೇ 9080 ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ ಆದರೆ ನಿಜವಾದ ಆವೃತ್ತಿಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾದ ಮಾದರಿಯು ಹಿಲಿಯೊ G80 SoC ಜೊತೆಗೆ 4GB RAM ಅನ್ನು ಹೊಂದಿದೆ. ಆದಾಗ್ಯೂ, ಸ್ಮಾರ್ಟ್‌ಫೋನ್‌ನ ಭಾರತೀಯ ಆವೃತ್ತಿಯು 6GB RAM ಮತ್ತು 128GB ಆಂತರಿಕ ಸಂಗ್ರಹಣೆಯೊಂದಿಗೆ ಬರಲಿದೆ. ಇದನ್ನು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಇದು 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ,ಯನ್ನು ಬೆಂಬಲಿಸಲಿದೆ. ಜೊತೆಗೆ ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿರಲಿದೆ. ಇನ್ನು ಸ್ಮಾರ್ಟ್‌ಫೋನ್ ಬೆಲೆ ಏನು ಅನ್ನೊದು ಇನ್ನು ಬಹಿರಂಗವಾಇಲ್ಲ. ಆದರೆ ಇದು ಕಪ್ಪು, ನೀಲಿ, ನೇರಳೆ ಮತ್ತು ಬಿಳಿ ಎಂಬ ನಾಲ್ಕು ಬಣ್ಣ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ.


Click it and Unblock the Notifications








