ಗ್ರ್ಯಾಂಡ್‌ ಎಂಟ್ರಿ ನೀಡಲು ಸಜ್ಜಾದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಫೋನ್!

|

ಟೆಕ್ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯ ಗ್ಯಾಲಕ್ಸಿ A ಸರಣಿಯ ಬಹುತೇಕ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಸೆಳೆದಿವೆ. ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯಲ್ಲಿ ಹೊಸದಾಗಿ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್ ಅನ್ನು ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಗೆ ಮಾಡುವ ಸೂಚನೆ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಲೀಕ್ ಫೀಚರ್ಸ್‌ಗಳು ಸ್ಮಾರ್ಟ್‌ಪೋನ್ ಪ್ರಿಯರಲ್ಲಿ ಭಾರೀ ಕುತೂಹಲ ಹುಟ್ಟು ಹಾಕಿವೆ. ಈ ಫೋನ್ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಗ್ರ್ಯಾಂಡ್‌ ಎಂಟ್ರಿ ನೀಡಲು ಸಜ್ಜಾದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಫೋನ್!

ಹೌದು, ಸ್ಯಾಮ್‌ಸಂಗ್‌ ಕಂಪನಿಯ ನೂತನ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಇದೇ ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡುವುದು ಬಹುತೇಕ ಖಚಿತ ಆಗಿದೆ. ಈ ಸ್ಮಾರ್ಟ್‌ಫೋನ್‌ 5000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP67 ರೇಟಿಂಗ್‌ನೊಂದಿಗೆ, ಈ ಫೋನ್ AMOLED ಡಿಸ್‌ಪ್ಲೇ ರಚನೆಯನ್ನು ಪಡೆದಿದೆ. ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ ಜೊತೆಗೆ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡುವ ಸಾಧ್ಯತೆಗಳಿವೆ.

ಗ್ರ್ಯಾಂಡ್‌ ಎಂಟ್ರಿ ನೀಡಲು ಸಜ್ಜಾದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಫೋನ್!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಈ ಡಿಸ್‌ಪ್ಲೇ 83.68% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 720 MT6853V ಪ್ರೊಸೆಸರ್‌ ಬಲವನ್ನು ಹೊಂದಿದೆ. ಈ ಫೋನ್ ಇತ್ತೀಚಿನ ನೂತನ ಆಂಡ್ರಾಯ್ಡ್‌ ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. 13 ಮೆಗಾ ಪಿಕ್ಸಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಅನ್ನು ಪಡೆದಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ ಎಂದು ಸೂಚಿಸಲಾಗಿದೆ.

ಗ್ರ್ಯಾಂಡ್‌ ಎಂಟ್ರಿ ನೀಡಲು ಸಜ್ಜಾದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಫೋನ್!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G
ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ A12 ಫೋನ್‌ನ ಮುಂದುವರೆದ ಆವೃತ್ತಿಯಾಗಿದೆ. ಈ ವರ್ಷ ಭಾರತಕ್ಕೆ ಎಂಟ್ರಿ ನೀಡಿದ್ದ ಜನಪ್ರಿಯ ಫೋನ್‌ಗಳಲ್ಲಿ ಗ್ಯಾಲಕ್ಸಿ A12 ಕೂಡ ಸೇರಿದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್‌ ಮೀಡಿಯಾ ಟೆಕ್‌ ಹಿಲಿಯೊ P35 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒಂದು ಯುಐ ಕೋರ್ 2.5 ರೊಂದಿಗೆ ಕಾರ್ಯನಿರ್ವಹಿಸುತ್ತದೆ.

ಇದರೊಂದಿಗೆ ಈ ಫೋನ್ 4GB RAM + 64GB 4GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Samsung Galaxy A33 5G Could Launch In India Soon: Check Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X