Just In
- 2 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 3 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 4 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 4 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- Sports
Ind vs NZ 1st ODI: ಟೀಮ್ ಇಂಡಿಯಾಗೆ ಗೆಲ್ಲಲು ಸವಾಲಿನ ಗುರಿ ನೀಡಿದ ನ್ಯೂಜಿಲೆಂಡ್
- Movies
3 ನಿಮಿಷದ ಐಟಂ ಸಾಂಗ್ಗೆ 'ಐರಾವತ'ನ ಅರಗಿಣಿ ಪಡೆದಿದ್ದು ಎಷ್ಟು ಕೋಟಿ?
- News
ವಿಧಾನಸಭಾ ಚುನಾವಣೆ: ಮತ್ತೆ ರಾಜ್ಯಕ್ಕೆ ಅಮಿತ್ ಶಾ, ಮತ ಬೇಟೆಗೆ ಕುಂದಗೋಳದಲ್ಲಿ ಬೃಹತ್ ಸಾರ್ವಜನಿಕ ಸಭೆ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ? ಈ ಬಗೆಯ ಆಹಾರ ಸೇವನೆ ಒಳ್ಳೆಯದು
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಡಿಸೈನ್ ಹೇಗಿದೆ ಗೊತ್ತಾ? ನೀವು ವಾವ್ಹ್ ಅನ್ನೊದು ಪಕ್ಕಾ!
ಸ್ಯಾಮ್‌ಸಂಗ್ ಕಂಪೆನಿಯ ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಇದೇ ಕಾರಣಕ್ಕೆ ಸ್ಯಾಮ್‌ಸಂಗ್ ಫೋನ್‌ಗಳು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತವೆ. ಸದ್ಯ ಇದೀಗ ಸ್ಯಾಮ್‌ಸಂಗ್ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ A34 5G ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇನ್ನೇನು ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡುವ ಸಾದ್ಯತೆಯಿದೆ. ಇದರ ನಡುವೆಯೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಹೇಗಿರಲಿದೆ ಅನ್ನೊದು ಇದೀಗ ಬಹಿರಂಗವಾಗಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತನ್ನ ಗ್ಯಾಲಕ್ಸಿ A34 5G ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ನ ಡಿಸೈನ್ ಹೇಗಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಇದೀಗ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್ ವಾಟರ್ ಡ್ರಾಪ್ ನಾಚ್ ವಿನ್ಯಾಸವನ್ನು ಪಡೆದಿದ್ದು, ಸಾಕಷ್ಟು ತೆಳುವಾದ ಬೆಜೆಲ್‌ಗಳನ್ನು ಹೊಂದಿದೆ. ಇನ್ನು ಫೋನ್ ಕ್ಲಾಸಿಕ್ ಗ್ರ್ಯಾಫೈಟ್ ಮತ್ತು ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸೈನ್ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ ದಪ್ಪಗಲ್ಲವನ್ನು ಹೊರತುಪಡಿಸಿ, ಸಾಕಷ್ಟು ತೆಳುವಾದ ಬೆಜೆಲ್‌ಗಳನ್ನು ಹೊಂದಿದೆ. ಹಿಭಾಗದಲ್ಲಿ ಕ್ಯಾಮೆರಾ ಸೆನ್ಸಾರ್‌ಗಳಿಗಾಗಿ ಮೂರು ವೃತ್ತಾಕಾರದ ಕಟೌಟ್‌ಗಳನ್ನು ಹೊಂದಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಷ್ ಕ್ಯಾಮೆರಾ ಸೆನ್ಸಾರ್ ಅನ್ನು ಸಹ ನೀಡಲಾಗಿದೆ. ಈ ಡಿವೈಸ್‌ನ ಪವರ್ ಮತ್ತು ವಾಲ್ಯೂಮ್ ಬಟನ್‌ಗಳು ಬಲಭಾಗದಲ್ಲಿ ಇರಲಿದೆ ಎನ್ನಲಾಗಿದೆ. ಇನ್ನು ಫೋನ್ ಕ್ಲಾಸಿಕ್ ಗ್ರ್ಯಾಫೈಟ್ ಮತ್ತು ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.

ಫೀಚರ್ಸ್ ಏನಿರಬಹುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ 6.5-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್ ವೇಗವನ್ನು ಹೊಂದಿರುವ ಸಾಧ್ಯತೆಯಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 MP ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 13MPಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಹಾಗೂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಅನ್ನು ಕೂಡ ಹೊಂದಿರುವ ಸಾಧ್ಯತೆಯಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 2023 ರ ಮೊದಲಾರ್ಧದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದು ಭಾರತದಲ್ಲಿ ಸುಮಾರು 30,000 ರೂ. ಬೆಲೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಆದರೆ ಈ ಸ್ಮಾರ್ಟ್‌ಫೋನ್ ನಿಜವಾದ ಬೆಲೆ ಹಾಗೂ ಫೀಚರ್ಸ್ ಕುರಿತ ವಿವರಗಳನ್ನು ಸ್ಯಾಮ್‌ಸಂಗ್ ಕಂಪೆನಿ ಶೀಘ್ರದಲ್ಲೇ ಹಂಚಿಕೊಳ್ಳುವ ಸಾಧ್ಯತೆಯಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470