Home
ಸುದ್ದಿಜಾಲ

ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G!..ಗ್ರಾಹಕರು ಖುಷ್!

ಮೊಬೈಲ್‌ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಥಾನದಲ್ಲಿ ಕಾಣಿಸಿಕೊಂಡಿರುವ ಸ್ಯಾಮ್‌ಸಂಗ್‌ ಸಂಸ್ಥೆಯು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗಮನ ಸೆಳೆದಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್‌ ಇದೀಗ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಮತ್ತಷ್ಟು ಗ್ರಾಹಕರನ್ನು ಸೆಳೆದಿದೆ.

ಹೌದು, ಇ ಕಾಮರ್ಸ್‌ ದೈತ್ಯ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್‌ 13% ರಷ್ಟು ರಿಯಾಯಿತಿ ಹೊಂದಿದೆ. ಈ ಫೋನ್‌ 8GB + 128GB ವೇರಿಯಂಟ್‌ ಬೆಲೆಯು 35,499ರೂ. ಆಗಿದ್ದು, ಆದರೆ ಅಮೆಜಾನ್‌ ಆಫರ್‌ನಲ್ಲಿ 30,999ರೂ. ಗಳಿಗೆ ಗ್ರಾಹಕರು ಕೊಂಡುಕೊಳ್ಳಬಹುದಾಗಿದೆ. ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್‌ ಸಹ ದೊರೆಲಿದೆ. ಈ ಫೋನ್ ಲೈಮ್‌, ಗ್ರಾಫೈಟ್‌ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆ ಪಡೆದಿದೆ.

ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G!..ಗ್ರಾಹಕರು ಖುಷ್!

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್‌ ಸಾಮರ್ಥ್ಯದ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಫೋನಿನ ಇತರ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಡಿಸ್‌ಪ್ಲೇ ಹೇಗಿದೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಮೊಬೈಲ್‌ 1080 × 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದ್ದು, 1000 nits ಬ್ರೈಟ್ನೆಸ್‌ ಸಾಮರ್ಥ್ಯ ಸಹ ಪಡೆದಿದೆ. ಇದರ ಜೊತೆಗೆ ಗೊರಿಲ್ಲಾ ಗ್ಲಾಸ್‌ 5 ರಕ್ಷಣೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಪ್ರೊಸೆಸರ್‌ ಯಾವುದು : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಜೊತೆಗೆ ಮಾಲಿ-G68 MC4 GPU ಸಪೋರ್ಟ್ ಅನ್ನು ಪಡೆದಿದೆ. ಇದರೊಂದಿಗೆ ಇದು ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿದ್ದು, 8 GB + 128 GB ಮತ್ತು 8 GB + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಕ್ಯಾಮೆರಾ ಸ್ಪೆಷಲ್ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಮೊಬೈಲ್‌ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಹಾಗೂ ಮೂರನೇ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಬ್ಯಾಟರಿ ಬ್ಯಾಕ್‌ಅಪ್‌ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಆಯ್ಕೆಗಳನ್ನು ಇದು ಪಡೆದಿದೆ. ಜೊತೆಗೆ ಧೂಳು ಮತ್ತು ನೀರು ನಿರೋಧಕ (IP67) ಸೌಲಭ್ಯ ಪಡೆದಿದ್ದು, ಬ್ಲೂಟೂತ್ 5.2, ಎನ್‌ಎಫ್‌ಸಿ ಆಯ್ಕೆಗಳ ಸೌಲಭ್ಯ ಸಹ ಇವೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಮೆಮೊರಿ ಹಾಗೂ ಕಲರ್ ಆಯ್ಕೆ : ಈ ಮೊಬೈಲ್‌ 8 GB + 128 GB ಮತ್ತು 8 GB + 256 GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಲೈಮ್‌, ಗ್ರಾಫೈಟ್‌ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Samsung Galaxy A34 5G huge price cut on amazon. offers, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+