ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಫೋನ್ ಲಾಂಚ್!..ಫೀಚರ್ಸ್ ಏನು?..ಬೆಲೆ ಎಷ್ಟು?
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯ ಬಹುನಿರೀಕ್ಷಿತ ಗ್ಯಾಲಕ್ಸಿ A54 5G ಮತ್ತು ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಿವೆ. ಈ ಎರಡು ನೂತನ 5G ಫೋನ್‌ಗಳು ಮೀಡ್‌ರೇಂಜ್ ಪ್ರೈಸ್‌ಟ್ಯಾಗ್ ಪಡೆದಿವೆ. ಆ ಪೈಕಿ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ.
ಹೌದು, ಭಾರತೀಯ ಮಾರುಕಟ್ಟೆಯಲ್ಲಿ ಹೊಸದಾಗಿ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ ಲಾಂಚ್ ಆಗಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಅವು ಕ್ರಮವಾಗಿ 8GB + 128GB ಮತ್ತು 8GB + 256GB ಸ್ಟೋರೇಜ್ ಆಗಿವೆ. ಹಾಗೆಯೇ ಈ ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ.

ಇಲ್ಲದೇ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಒಳಗೊಂಡಿದೆ. ಇನ್ನು ಈ ಫೋನ್ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿದ್ದು, 48 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಫೋನಿನ ಇತರ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ 1080 × 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, 1000 nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಜೊತೆಗೆ ಮಾಲಿ-G68 MC4 GPU ಸಪೋರ್ಟ್ ಪಡೆದಿದೆ. ಹಾಗೆಯೇ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದ್ದು, 8 GB + 128 GB ಮತ್ತು 8 GB + 256 GB ಸ್ಟೋರೇಜ್ ಆಯ್ಕೆ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಹಾಗೂ ತೃತೀಯ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಆಯ್ಕೆಗಳನ್ನು ಇದು ಪಡೆದಿದೆ. ಜೊತೆಗೆ ಧೂಳು ಮತ್ತು ನೀರು ನಿರೋಧಕ (IP67) ಸೌಲಭ್ಯ ಹೊಂದಿದೆ. ಬ್ಲೂಟೂತ್ 5.2, ಎನ್‌ಎಫ್‌ಸಿ ಆಯ್ಕೆಗಳು ಸಹ ಇವೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಫೋನ್ 8GB + 128GB ಬೆಲೆ 30,999ರೂ. ಆಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G ಫೋನ್ 8GB + 256GB ಬೆಲೆ 32,999ರೂ. ಆಗಿದೆ
ಫೋನ್ ಇದೇ ಮಾರ್ಚ 28ರಿಂದ ಖರೀದಿಗೆ ಲಭ್ಯವಾಗಲಿದೆ. ಮುಂಗಡ ಬುಕಿಂಗ್ ಇಂದಿನಿಂದ ಪ್ರಾರಂಭ. ಇನ್ನು ಈ ಫೋನ್ ಲೈಮ್, ಗ್ರಾಫೈಟ್ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








