ಬರಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A41 ಸ್ಮಾರ್ಟ್‌ಫೋನ್!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ದಿನಕ್ಕೊಂದು ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಆಗುತ್ತಲೇ ಇರುತ್ತವೆ. ಹೊಸ ಮಾದರಿಯ ಆಕರ್ಷಕ ಫೀಚರ್ಸ್‌ಗಳನ್ನ ಹೊಂದಿರುವ ಸ್ಮಾರ್ಟ್‌ಫೋನ್‌ಗಳಿಗೆನೂ ಭರವಿಲ್ಲ. ಇನ್ನು ಟೆಕ್ ಮಾರುಕಟ್ಟೆಯಲ್ಲಿ ಹಲವಾರು ಸ್ಮಾರ್ಟ್‌ಫೋನ್ ಕಂಪೆನಿಗಳು ಪ್ರಾಬಲ್ಯ ಸಾಧಿಸಿದ್ದು, ಇವುಗಳಲ್ಲಿ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಕೂಡ ಒಂದಾಗಿದೆ. ಸದ್ಯ ಇದೀಗ ಸ್ಯಾಮ್‌ಸಂಗ್ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.

ಹೌದು ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ಗ್ಯಾಲಕ್ಸಿ ತನ್ನ ಜನಪ್ರಿಯ ಎ-ಸೀರೀಸ್‌ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದನ್ನು ಗ್ಯಾಲಕ್ಸಿ A41 ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡ್ ರೇಂಜ್ ನಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್ ಆಗಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಜೊತೆಗೆ 25 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಸ್ನ್ಯಾಪರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ A41 ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.1-ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಫುಲ್ ಹೆಚ್‌ಡಿ ಪ್ಲಸ್ ಇನ್ಫಿನಿಟಿ-ಯು ಸೂಪರ್ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆ ಅನುಪಾತವನ್ನು ಹೊಂದಿದೆ. ಜೊತೆಗೆ 89% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ನಿಡುವ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಅಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಆದರೆ ಮೆಮೊರಿ ಕಾರ್ಡ್ ಮೂಲಕ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯ ಬಗ್ಗೆ ಯಾವುದೇ ಮಾಹಿತಿಯನ್ನ ಕಂಪೆನಿ ಬಹಿರಂಗಪಡಿಸಿಲ್ಲ.

ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ ಎನ್ನಲಾಗ್ತಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ವೈಡ್-ಆಂಗಲ್ ಸ್ನ್ಯಾಪರ್ f/ 2.0 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಕ್ಯಾಮೆರಾ f/ 2.2 ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 25 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಗ್ಯಾಲಕ್ಸಿ A41 ಸ್ಮಾರ್ಟ್‌ಫೋನ್ 3500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದೆ. 15W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿಯಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಇನ್-ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಜೊತೆಗೆ ಅಂಬಿಯೆಂಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಸೇರಿವೆ.

ಬೆಲೆ ಮತ್ತು ಲಭ್ಯತೆ
ಗ್ಯಾಲಕ್ಸಿ A41 ಸ್ಮಾರ್ಟ್‌ಫೋನ್ ಯಾವ ಬೆಲೆಯನ್ನ ಹೊಂದಿದೆ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಲಬ್ಯವಾಗಿಲ್ಲ. ಆದರೆ ಪ್ರಸ್ತುತ ಫೋನ್ ಅನ್ನು ಜಪಾನ್‌ನ ಅಲ್ಲಿ ಬಿಡುಗಡೆ ಮಾಡಲಿದ್ದು, ಇದೇ ಜೂನ್ ತಿಂಗಳಿನಿಂದ ಮಾರಾಟವಾಗಲಿದೆ ಎಂದು ಸ್ಯಾಮ್‌ಸಂಗ್ ಕಂಪೆನಿ ಹೇಳಿಕೊಂಡಿದೆ.


Click it and Unblock the Notifications








