Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ A51 ಫೋನ್ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!

ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ 'ಗ್ಯಾಲಕ್ಸಿ A' ಸರಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆ ಗಳಿಸಿದೆ. ಅವುಗಳಲ್ಲಿ ಗ್ಯಾಲಕ್ಸಿ A51 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಜೊತೆಗೆ ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದ್ದು, ಇದೀಗ ಭರ್ಜರಿ ರಿಯಾಯಿತಿ ಬೆಲೆಯಿಂದ ಗ್ರಾಹಕರನ್ನು ಇನ್ನಷ್ಟು ಅಟ್ರ್ಯಾಕ್ಟ್ ಮಾಡಿದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಸಂಸ್ಥೆಯ 'ಗ್ಯಾಲಕ್ಸಿ A51' ಸ್ಮಾರ್ಟ್‌ಫೋನ್ ಈಗ ಭಾರತದಲ್ಲಿ ಭಾರಿ ಡಿಸ್ಕೌಂಟ್ ಪಡೆದಿದೆ. ಈ ಫೋನ್ 4GB RAM ಮತ್ತು 8GB RAM ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಇದೀಗ 8GB RAM ವೇರಿಯಂಟ್‌ಗೆ ಮಾತ್ರ ಡಿಸ್ಕೌಂಟ್ ಘೋಷಿಸಲಾಗಿದೆ. ಈ ಫೋನಿನ 8GB+128GB ಸ್ಟೋರೇಜ್‌ನ ಬೆಲೆಯು 27,999ರೂ. ಇದ್ದು, ಹೆಚ್‌ಡಿಎಫ್‌ಸಿ, ಐಸಿಐಸಿಐ ಹಾಗೂ ಎಸ್‌ಬಿಐ ಬ್ಯಾಂಕ್ ಕಾರ್ಡ್‌ ಮೇಲೆ 1500ರೂ. ಕ್ಯಾಶ್‌ಬ್ಯಾಕ್‌ ಲಭ್ಯ ಇದೆ. ಬ್ಲ್ಯಾಕ್, ಬ್ಲೂ ಮತ್ತು ವೈಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ.

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು ಸೂಪರ್ AMOLED ಇನ್‌ಫಿನಿಟಿ-O ಮಾದರಿಯಲ್ಲಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಡಿಸ್‌ಪ್ಲೇಯಲ್ಲಿಯೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ 2.3GHz ವೇಗದಲ್ಲಿ Exynos 9611 ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ 4GB RAM + 128GB ಮತ್ತು 8GB RAM+128GB ಆಯ್ಕೆಯ ಎರಡು ವೇರಿಯಂಟ್ ಮಾದರಿಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 512GB ವರೆಗೂ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಇದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಹೊಂದಿದ್ದು, ಉಳಿದಂತೆ ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 5ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿವೆ. ಇದರೊಂದಿಗೆ 32ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನ ಬ್ಯಾಟರಿ ಸಾಮರ್ಥ್ಯವು 4,000mAh ಆಗಿದ್ದು, ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ ಯುಎಸ್‌ಬಿ ಸಿ ಪೋರ್ಟ್‌, ವೈಫೈ, ಬ್ಲೂಟೂತ್, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

Best Mobiles in India

English summary
Samsung Galaxy A51 (8GB+128GB) is available in India with a price tag of Rs. 27,999.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+