ಸ್ಯಾಮ್‌ಸಂಗ್ ಗ್ಯಾಲಕ್ಸಿ A51 ಮತ್ತು ಗ್ಯಾಲಕ್ಸಿ A71 ಬೆಲೆಯಲ್ಲಿ ಭಾರಿ ಇಳಿಕೆ!
ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲಕ್ಸಿ A ಸರಣಿಯಲ್ಲಿ ಭಿನ್ನ ಪ್ರೈಸ್‌ಟ್ಯಾಗ್‌ನ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಗ್ಯಾಲಕ್ಸಿ A51 ಮತ್ತು ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್‌ಗಳು ಹೆಚ್ಚು ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿವೆ. ಸ್ಯಾಮ್‌ಸಂಗ್ ಇದೀಗ ಈ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದ್ದು, ಗ್ರಾಹಕರಿಗೆ ಸರ್‌ಪ್ರೈಸ್ ಅನಿಸಿದೆ.

ಹೌದು, ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ A51 ಮತ್ತು ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್‌ಗಳು ಕ್ವಾಡ್ ಕ್ಯಾಮೆರಾ ಫೀಚರ್ ಹೊಂದಿದ್ದು, ಹಾಗೆಯೇ ವೇಗದ ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿವೆ. ಇದೀಗ ಗ್ಯಾಲಕ್ಸಿ A51 ಮತ್ತು ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್‌ಗಳ ದರದಲ್ಲಿ ಗರಿಷ್ಠ 2000ರೂ.ವರೆಗೂ ಕಡಿತ ಆಗಿದೆ. ಹೀಗಾಗಿ ಗ್ಯಾಲಕ್ಸಿ A51 ಫೋನ್ ಬೇಸ್ ವೇರಿಯಂಟ್ 23,999ರೂ. ಆಗಿದೆ. ಹಾಗೆಯೇ ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ ದರವು 30,999ರೂ. ಆಗಿದೆ. ಹಾಗಾದರೆ ಗ್ಯಾಲಕ್ಸಿ A51 ಮತ್ತು ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಗ್ಯಾಲಾಕ್ಸಿ A51-ಡಿಸೈನ್
ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು ಸೂಪರ್ AMOLED ಇನ್‌ಫಿನಿಟಿ-O ಮಾದರಿಯಲ್ಲಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಡಿಸ್‌ಪ್ಲೇಯಲ್ಲಿಯೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಪಡೆದಿದೆ.

ಗ್ಯಾಲಾಕ್ಸಿ A51- ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ 2.3GHz ವೇಗದಲ್ಲಿ Exynos 9611 ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ 4GB RAM + 128GB ಮತ್ತು 8GB RAM+128GB ಆಯ್ಕೆಯ ಎರಡು ವೇರಿಯಂಟ್ ಮಾದರಿಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 512GB ವರೆಗೂ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಗ್ಯಾಲಾಕ್ಸಿ A51-ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಇದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಹೊಂದಿದ್ದು, ಉಳಿದಂತೆ ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 5ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿವೆ. ಇದರೊಂದಿಗೆ 32ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಗ್ಯಾಲಾಕ್ಸಿ A51-ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನ ಬ್ಯಾಟರಿ ಸಾಮರ್ಥ್ಯವು 4,000mAh ಆಗಿದ್ದು, ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ ಯುಎಸ್‌ಬಿ ಸಿ ಪೋರ್ಟ್, ವೈಫೈ, ಬ್ಲೂಟೂತ್, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಗ್ಯಾಲಕ್ಸಿ A71-ಡಿಸ್‌ಪ್ಲೇ
ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 393 ppi ಆಗಿದ್ದು, ಹಾಗೆಯೇ ಡಿಸ್‌ಪ್ಲೇಯ ಅನುಪಾತವು 20:9 ರಷ್ಟಾಗಿದೆ. ಬಾಹ್ಯ ಬಾಡಿಯಿಂದ ಸ್ಕ್ರೀನ್‌ನ ನಡುವಿನ ಅಂತರವು ಶೇ.87.2% ಪರ್ಸೆಂಟ್ ಆಗಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್ ಪಡೆದಿದೆ.

ಗ್ಯಾಲಕ್ಸಿ A71-ಪ್ರೊಸೆಸರ್
ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಸಫೋರ್ಟ್ ಪಡೆದುಕೊಂಡಿದೆ. ಇದರೊಂದಿಗೆ 8GB RAM ಮತ್ತು 128GB ವೇರಿಯಂಟ್ ಆಯ್ಕೆಯನ್ನು ಹೊಂದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ಹೆಚ್ಚಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಗ್ಯಾಲಕ್ಸಿ A71-ಕ್ಯಾಮೆರಾ
ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿಯ ಅಲ್ಟ್ರಾ ವೈಲ್ಡ್ ಆಂಗಲ್ ಲೆನ್ಸ್ ಇದ್ದು, ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 5ಎಂಪಿಯ ಸೆನ್ಸಾರ್ ಹೊಂದಿವೆ. ಇದರೊಂದಿಗೆ 32ಎಂಪಿ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಗ್ಯಾಲಕ್ಸಿ A71-ಬ್ಯಾಟರಿ
ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಲೈಫ್ ಅನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ಹಾಗೆಯೇ ಒನ್ UI ಓಎಸ್ ಕಾರ್ಯನಿರ್ವಹಿಸುತ್ತದೆ. ಜೊತೆಗೆ ವೈಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ-ಸಿ-ಪೋರ್ಟ್ ಸೌಲಭ್ಯಗಳು ಸಹ ಇವೆ.


Click it and Unblock the Notifications








