ಗ್ಯಾಲಕ್ಸಿ ಎ51, ಗ್ಯಾಲಕ್ಸಿ ಎ71 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದ ಸ್ಯಾಮ್‌ಸಂಗ್‌!

|

ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳನ್ನ ವಿಯೆಟ್ನಾಂನಲ್ಲಿ ಲಾಂಚ್‌ ಮಾಡಿದೆ. ಬಳಕೆದಾರರಿಗೆ ಸದಾ ಹೊಸತನದ ಅನುಭವ ನೀಡುವ ಸ್ಯಾಮ್‌ಸಂಗ್‌ ಈಗ ಹೊಸದಾಗಿ ಗ್ಯಾಲಕ್ಸಿ ಎ51 ಮತ್ತು ಗ್ಯಾಲಕ್ಸಿ ಎ71 ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು ಪಂಚ್‌ಹೋಲ್‌ ಡಿಸ್‌ಪ್ಲೇ, ಕ್ವಾಡ್‌ಕ್ಯಾಮೆರಾ ಹೊಂದಿದ್ದು ಸ್ಮಾರ್ಟ್‌ಫೋನ್‌ ಪ್ರಿಯರ ನಿರೀಕ್ಷೆಯಂತೆ ಹೊಸ ಅನುಭವವನ್ನ ನೀಡಲಿವೆ.

ಸ್ಯಾಮ್‌ಸಂಗ್

ಹೌದು, ನಿರೀಕ್ಷೆಯಂತೆ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ ಎ 51 ಮತ್ತು ಗ್ಯಾಲಕ್ಸಿ ಎ 71 ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಗ್ಯಾಲಕ್ಸಿ ಎ-ಸರಣಿಯನ್ನು ಮತ್ತಷ್ಟು ವಿಸ್ತರಿಸಲು ಯೋಜನೆ ರೂಪಿಸುತ್ತಿರೋ ಸ್ಯಾಮ್‌ಸಂಗ್‌ ಕಂಪನಿಯು ಮುಂದಿನ ಕೆಲವು ತಿಂಗಳುಗಳಲ್ಲಿ ಇನ್ನಷ್ಟು ಎ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಲಿದ್ದೆವೆ ಎಂದು ಹೇಳಿಕೊಂಡಿದೆ. ಹಾಗಾದ್ರೆ ಗ್ಯಾಲಕ್ಸಿ ಎ 51 ಮತ್ತು ಗ್ಯಾಲಕ್ಸಿ ಎ 71 ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ನೋಡಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಗ್ಯಾಲಕ್ಸಿ ಎ 51, ಸ್ಮಾರ್ಟ್‌ಫೋನ್‌ 2040 × 1080 ಫಿಕ್ಸೆಲ್‌ ರೆಸಲ್ಯೂಸನ್‌ಹೊಂದಿರುವ 6.5-ಇಂಚಿನ ಫುಲ್‌ ಎಚ್ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್ಪ್ಲೇಯನ್ನು ಹೊಂದಿದೆ,ಪಂಚ್ ಹೋಲ್‌ ಮಾದರಿಯ ಡಿಸ್‌ಪ್ಲೇ ಇದಾಗಿದೆ. ಇನ್ನು ಗ್ಯಾಲಕ್ಸಿ ಎ 71 ಸ್ಮಾರ್ಟ್‌ಫೋನ್‌ ಕೂಡ 2400 × 1080 ಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ 6.7-ಇಂಚಿನ ಫುಲ್‌ ಎಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್ಪ್ಲೇಯನ್ನು ಹೊಂದಿದ್ದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್‌ ಒಳಗೊಂಡಿದೆ.

ಪ್ರೊಸೆಸೆರ್‌ ಸಾಮರ್ಥ್ಯ

ಪ್ರೊಸೆಸೆರ್‌ ಸಾಮರ್ಥ್ಯ

ಇನ್ನು ಗ್ಯಾಲಕ್ಸಿ ಎ51 ಸ್ಮಾರ್ಟ್‌ಫೋನ್‌ ಎಕ್ಸಿನೋಸ್ ( Exynos) 9611 64-ಬಿಟ್ ಆಕ್ಟಾ-ಕೋರ್ ಪ್ರೊಸೆಸರ್‌ ಹೊಂದಿದ್ದು ಅಡ್ರಾಯ್ಡ್‌9ಒಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಗ್ಯಾಲಕ್ಸಿ ಎ71 ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 730 SoC ಪ್ರೊಸೆಸರ್‌ ಹೊಂದಿದ್ದು ಆಂಡ್ರಾಯ್ಡ್ 10 ಓಎಸ್‌ ಬೆಂಬಲದಿಂದ ಕಾರ್ಯ ನಿರ್ವಹಿಸುತ್ತದೆ.
ಗ್ಯಾಲಕ್ಸಿ ಎ51 4GB / 6GB / 8GB RAM ಮತ್ತು 64GB / 128GB ಶೇಖರಣಾ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನ ಹೊಂದಿದ್ದು, ಗ್ಯಾಲಕ್ಸಿ ಎ71 ಸ್ಮಾರ್ಟ್‌ಫೋನ್‌ 6GB / 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಇವುಗಳ ಸಂಗ್ರಹ ಸಾಮರ್ಥ್ಯವನ್ನ ಇನ್ನಷ್ಟು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಗ್ಯಾಲಕ್ಸಿ ಎ51 ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು ಹಿಂಭಾಗದಲ್ಲಿ ಕ್ಯಾಮೆರಾಗಳನ್ನು ಎಲ್-ಆಕಾರದಲ್ಲಿ ವಿನ್ಯಾಸಮಾಡಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಹೊಂದಿದ್ದರೆ , ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ, ಮೂರು ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಇದೆ.

ಗ್ಯಾಲಕ್ಸಿ ಎ71

ಗ್ಯಾಲಕ್ಸಿ ಎ71

ಗ್ಯಾಲಕ್ಸಿ ಎ71 ಸ್ಮಾರ್ಟ್‌ಫೋನ್‌ ಕೂಡ ಕ್ವಾಡ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರು ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಅಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದ್ದು ವಿಡಿಯೋ ಕರೆಗಳಿಂದ ಉತ್ತಮ ಅನುಭವ ಸಿಗುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 51 3.5 15W ವೇಗದ ವೈರ್ಡ್ ಚಾರ್ಜಿಂಗ್ ಆಯ್ಕೆಯನ್ನ ಹೊಂದಿದ್ದು 4,000mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದರೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 71 25,000 ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 4,000mAh ಬ್ಯಾಟರಿ ಸಾಮರ್ಥ್ಯವನ್ನ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಇದು ಇನ್-ಡಿಸ್ಪ್ಲೇ ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌ ಹೊಂದಿದೆ ಜೊತೆಗೆ ಎಂಎಂ ಹೆಡ್‌ಫೋನ್ ಜ್ಯಾಕ್, ಮತ್ತು ಡಾಲ್ಬಿ ಅಟ್ಮೋಸ್ ಆಡಿಯೊ ಬೆಂಬಲವನ್ನು ಸಹ ಪಡೆದುಕೊಂಡಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಗ್ಯಾಲಕ್ಸಿ ಎ 51 ಸ್ಮಾರ್ಟ್‌ಫೋನ್‌ ಬೆಲೆ ವಿಯೆಟ್ನಾಂನಲ್ಲಿ VND 7,990,990( ಅಂದಾಜು 25,000 ರೂ) , ಗ್ಯಾಲಕ್ಸಿ ಎ71ರ ಬೆಲೆ ಇನ್ನು ಲಭ್ಯವಾಗಿಲ್ಲ. ಬ್ಲಾಕ್‌, ಸಿಲ್ವರ್‌, ನೀಲಿ ಮತ್ತು ಗುಲಾಬಿ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.

Best Mobiles in India

English summary
As expected, Samsung has unveiled the first two of its Galaxy A 2020 smartphones in Vietnam. These include the Samsung Galaxy A51 and Galaxy A71. The company plans to expand the A-series further, and more devices will be unveiled over the next few months. The highlight of the new smartphones is the punch-hole (Infinity O) display, quad cameras and more. Here is all you need to know about the new Samsung phones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X