Home
ಸುದ್ದಿಜಾಲ

ಸ್ಯಾಮ್‌ಸಂಗ್ 'ಗ್ಯಾಲಕ್ಸಿ A51' ಫೋನ್ ಬಿಡುಗಡೆ!..ಬೆಲೆ ಎಷ್ಟು ಗೊತ್ತೆ?

ಸ್ಯಾಮ್‌ಸಂಗ್ ಸಂಸ್ಥೆಯ ಬಹುನಿರೀಕ್ಷಿತ 'ಗ್ಯಾಲಕ್ಸಿ A51' ಸ್ಮಾರ್ಟ್‌ಫೋನ್ ನೆನ್ನೆ ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಆಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಕಳೆದ ತಿಂಗಳು ವಿಯಟ್ನಂನಲ್ಲಿ ಬಿಡುಗಡೆ ಆಗಿತ್ತು. ಇದೀಗ ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ಬ್ಯಾಟರಿ, ಪ್ರೊಸೆಸರ್, ಕ್ಯಾಮೆರಾ ಸೇರಿದಂತೆ ಹಲವು ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರ ಮನಗೆದ್ದಿರುವ ಈ ಫೋನ್‌ ಉತ್ತಮ ಮಾರಾಟ ಕಾಣುವ ನಿರೀಕ್ಷೆ ಮೂಡಿಸಿದೆ.

ಗ್ಯಾಲಕ್ಸಿ A51

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಇಂದು (ಜ.29ರಂದು) ದೇಶಿಯ ಮಾರುಕಟ್ಟೆಗೆ ಹೊಸದಾಗಿ 'ಗ್ಯಾಲಕ್ಸಿ A51' ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ಸೂಪರ್ AMOLED ಇನ್ಫಿನಿಟಿ O ಡಿಸ್‌ಪ್ಲೇ ಮಾದರಿಯನ್ನು ಹೊಂದಿದ್ದು, 4GB RAM + 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇದರೊಂದಿಗೆ 4,000mAh ಬ್ಯಾಟರಿ ಹೊಂದಿದ್ದು, ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A51

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A51 ಸ್ಮಾರ್ಟ್‌ಫೋನ್ ಬೆಲೆಯು 23,999ರೂ. ಆಗಿದೆ. ಇದೇ ಜನೆವರಿ 31ರಿಂದ ಪ್ರಮುಖ ಇ-ಕಾಮರ್ಸ್‌ ತಾಣಗಳಲ್ಲಿ, ಅಧಿಕೃತ ಸ್ಯಾಮ್‌ಸಂಗ್ ತಾಣದಲ್ಲಿ, ಓಪೆರಾ ಹೌಸ್‌, ಹಾಗೂ ಆಫ್‌ಲೈನ್ ಮಾರುಕಟ್ಟೆಯಲ್ಲಿ ಸೇಲ್ ಆರಂಭಿಸಲಿದೆ. ಇನ್ನು ಈ ಫೋನ್ ಬ್ಲ್ಯಾಕ್‌, ವೈಟ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ದೊರೆಯಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A51 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು ಸೂಪರ್ AMOLED ಇನ್‌ಫಿನಿಟಿ-O ಮಾದರಿಯಲ್ಲಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಡಿಸ್‌ಪ್ಲೇಯಲ್ಲಿಯೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ 2.3GHz ವೇಗದಲ್ಲಿ Exynos 9611 ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ 4GB RAM + 128GB ಮತ್ತು 8GB RAM+128GB ಆಯ್ಕೆಯ ಎರಡು ವೇರಿಯಂಟ್ ಮಾದರಿಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 512GB ವರೆಗೂ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಕ್ವಾಡ್‌ ಕ್ಯಾಮೆರಾ ವಿಶೇಷತೆ

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಇದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಹೊಂದಿದ್ದು, ಉಳಿದಂತೆ ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 5ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿವೆ. ಇದರೊಂದಿಗೆ 32ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನ ಬ್ಯಾಟರಿ ಸಾಮರ್ಥ್ಯವು 4,000mAh ಆಗಿದ್ದು, ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ ಯುಎಸ್‌ಬಿ ಸಿ ಪೋರ್ಟ್‌, ವೈಫೈ, ಬ್ಲೂಟೂತ್, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು

ಬೆಲೆ ಎಷ್ಟು

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನ್‌ ಲಾಂಚ್ ಆಗಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಆರಂಭಿಕ ವೇರಿಯಂಟ್ ಬೆಲೆಯು 23,999ರೂ. ಆಗಿದೆ. ಇನ್ನು ಈ ಫೋನ್ ಇದೇ ಜನೆವರಿ 31ರಿಂದ ಪ್ರಮುಖ ಇ-ಕಾಮರ್ಸ್‌ ತಾಣಗಳಲ್ಲಿ, ಅಧಿಕೃತ ಸ್ಯಾಮ್‌ಸಂಗ್ ತಾಣದಲ್ಲಿ, ಓಪೆರಾ ಹೌಸ್‌, ಹಾಗೂ ಆಫ್‌ಲೈನ್ ಮಾರುಕಟ್ಟೆಯಲ್ಲಿ ಸೇಲ್ ಆರಂಭಿಸಲಿದೆ.

Best Mobiles in India

English summary
Samsung will be shipping the new Galaxy A51 with Android 10 out of the box. The new Samsung Galaxy A51 comes with a price label of Rs 23,999. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+