ಸ್ಯಾಮ್‌ಸಂಗ್ ಗ್ಯಾಲಕ್ಸಿ A51 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರಿ ಇಳಿಕೆ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆ ಕಂಡಿದ್ದು, ಗ್ರಾಹಕರು ಮತ್ತೆ ತಿರುಗಿ ನೋಡುವಂತೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A51 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 2000ರೂ.ವರೆಗೂ ಕಡಿತ ಆಗಿದೆ. 6GB RAM + 128GB ವೇರಿಯಂಟ್ 1500ರೂ. ಡಿಸ್ಕೌಂಟ್ ಪಡೆದಿದ್ದು, 22,499ರೂ.ಗೆ ಲಭ್ಯ. ಹಾಗೆಯೇ 8GB RAM + 128GB ವೇರಿಯಂಟ್ 2000ರೂ. ಬೆಲೆ ಇಳಿಕೆ ಆಗಿದ್ದು, ಈಗ 25,999ರೂ. ಪ್ರೈಸ್‌ಟ್ಯಾಗ್ ಹೊಂದಿದೆ. ಇನ್ನು ಈ ಫೋನ್ ಬ್ಲ್ಯಾಕ್, ವೈಟ್, ಸಿಲ್ವರ್ ಹಾಗೂ ಬ್ಲೂ ಬಣ್ಣಗಳ ಆಯ್ಕೆ ಹೊಂದಿದೆ. ಹಾಗಾದರೆ ಗ್ಯಾಲಕ್ಸಿ A31 ಫೋನಿನ ಇನ್ನಿತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ಡಿಸೈನ್
ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು ಸೂಪರ್ AMOLED ಇನ್‌ಫಿನಿಟಿ-O ಮಾದರಿಯಲ್ಲಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಡಿಸ್‌ಪ್ಲೇಯಲ್ಲಿಯೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ
ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ 2.3GHz ವೇಗದಲ್ಲಿ Exynos 9611 ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ 4GB RAM + 128GB ಮತ್ತು 8GB RAM+128GB ಆಯ್ಕೆಯ ಎರಡು ವೇರಿಯಂಟ್ ಮಾದರಿಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 512GB ವರೆಗೂ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಕ್ವಾಡ್ ಕ್ಯಾಮೆರಾ ವಿಶೇಷತೆ
ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನಲ್ಲಿ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಇದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಹೊಂದಿದ್ದು, ಉಳಿದಂತೆ ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 5ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿವೆ. ಇದರೊಂದಿಗೆ 32ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಲೈಫ್
ಸ್ಯಾಮ್‌ಸಂಗ್ ಗ್ಯಾಲಾಕ್ಸಿ A51 ಸ್ಮಾರ್ಟ್‌ಫೋನಿನ ಬ್ಯಾಟರಿ ಸಾಮರ್ಥ್ಯವು 4,000mAh ಆಗಿದ್ದು, ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ ಯುಎಸ್‌ಬಿ ಸಿ ಪೋರ್ಟ್, ವೈಫೈ, ಬ್ಲೂಟೂತ್, ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.


Click it and Unblock the Notifications








