ಸ್ಯಾಮ್‌ಸಂಗ್ ಗ್ಯಾಲಕ್ಸಿ A52 5G ವೇರಿಯಂಟ್ ಫೋನ್ ಫೀಚರ್ಸ್ ಬಹಿರಂಗ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಗ್ಯಾಲಕ್ಸಿ A ಸರಣಿಯಲ್ಲಿನ ಸ್ಮಾರ್ಟ್‌ಫೋನ್‌ಗಳು ಇತ್ತೀಚಿಗೆ ಹೆಚ್ಚು ಗಮನ ಸೆಳೆದಿವೆ. ಅದರ ಮುಂದುವರಿದ ಭಾಗವಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯಲ್ಲಿ ಈಗ ನೂತನವಾಗಿ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವ ಸೂಚನೆ ನೀಡಿದ್ದು, ಅದರೊಂದಿಗೆ ಗ್ಯಾಲಕ್ಸಿ A52 5G ವೇರಿಯಂಟ್ ಫೋನ್ ಅನ್ನು ಸಹ ಲಾಂಚ್ ಮಾಡಲಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಸದ್ಯದಲ್ಲೇ ಹೊಸದಾಗಿ ಗ್ಯಾಲಕ್ಸಿ A52 5G ಸ್ಮಾರ್ಟ್‌ಫೋನ್ ಅನಾವರಣ ಮಾಡಲಿದ್ದು, ಈ ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಕುತೂಹಲ ಹೆಚ್ಚಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM ಮತ್ತು 256GB ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳಲ್ಲಿ ಅನಾವರಣ ಆಗುವ ನಿರೀಕ್ಷೆಗಳಿವೆ. ಹಾಗೆಯೇ 4,370mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಹೊಂದಿರಲಿದೆ. ಇನ್ನುಳಿದಂತೆ ಲೀಕ್ ಮಾಹಿತಿ ಪ್ರಕಾರ ಗ್ಯಾಲಕ್ಸಿ A52 5G ವೇರಿಯಂಟ್ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹಾಗೂ ಪ್ರೊಸೆಸರ್
ಗ್ಯಾಲಕ್ಸಿ A52 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.46 ಇಂಚಿನ ಡಿಸ್‌ಪ್ಲೇಯನ್ನು ಪಡೆದಿರಲಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 750G ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಸಹ ಪಡೆದಿರಲಿದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಆಯ್ಕೆಗಳಿರಲಿವೆ ಎನ್ನಲಾಗಿದೆ.

ಕ್ಯಾಮೆರಾ ವಿನ್ಯಾಸ
ಗ್ಯಾಲಕ್ಸಿ A52 5G ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಕ್ವಾಡ್-ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿರಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇರುವ ನಿರೀಕ್ಷೆಗಳಿವೆ.

ಬ್ಯಾಟರಿ ಬ್ಯಾಕ್‌ಅಪ್
ಗ್ಯಾಲಕ್ಸಿ A52 5G ಸ್ಮಾರ್ಟ್‌ಫೋನ್ 4,370mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರಲಿದೆ. ಇದರೊಂದಿಗೆ ಇತ್ತೀಚಿಗಿನ ಕನೆಕ್ಟಿವಿಟಿ ಸೌಲಭ್ಯಗಳು ಇರಲಿವೆ ಎನ್ನಲಾಗಿದೆ. ಇನ್ನು ಈ ಫೋನಿನ 8GB RAM ಮತ್ತು 256GB ವೇರಿಯಂಟ್ ಬೆಲೆಯು ಯುರೋಪ್‌ನಲ್ಲಿ EUR 509 (ಭಾರತದಲ್ಲಿ ಅಂದಾಜು 44,700ರೂ. ಎನ್ನಲಾಗಿದೆ).


Click it and Unblock the Notifications








