Home
ಸುದ್ದಿಜಾಲ

ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿವೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಮತ್ತು ಗ್ಯಾಲಕ್ಸಿ A72!

ದಕ್ಷಿಣ ಕೊರಿಯಾ ಟೆಕ್‌ ದೈತ್ಯ ಸ್ಯಾಮ್‌ಸಂಗ್ ಕಂಪನಿಯ ಬಹುನಿರೀಕ್ಷಿತ ಗ್ಯಾಲಕ್ಸಿ A52 ಮತ್ತು ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ಗಳು ಇಂದು ಮಾರುಕಟ್ಟೆಗೆ ಎಂಟ್ರಿ ಕೊಡಲಿವೆ. ಗ್ಯಾಲಕ್ಸಿ A ಸರಣಿಯಲ್ಲಿ ಬಿಡುಗಡೆ ಆಗುವ ಈ ಎರಡು ಫೋನ್‌ಗಳು ಈಗಾಗಲೇ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿವೆ. ಇನ್ನು ಈ ಫೋನ್‌ಗಳ ಲಾಂಚ್ ಕಾರ್ಯಕ್ರಮವು ಸಂಜೆ 7:30ಕ್ಕೆ ಪ್ರಾರಂಭವಾಗಲಿದ್ದು, ಕಂಪನಿಯು ಯೂಟ್ಯೂಬ್ ಚಾನೆಲ್‌ ಮೂಲಕ ವೀಕ್ಷಿಸಬಹುದಾಗಿದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಹೊಸ ಗ್ಯಾಲಕ್ಸಿ A52 ಮತ್ತು ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ ಗಳನ್ನು ಇಂದು ಅನಾವರಣ ಮಾಡಲಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರಲಿದ್ದು, ಮುಖ್ಯ ಕ್ಯಾಮೆರಾವು ಹೈ ರೆಸಲ್ಯೂಶನ್ ಹೊಂದಿರಲಿದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಸಾಮರ್ಥ್ಯದ ಎರಡು ವೇರಿಯಂಟ್‌ ಆಯ್ಕೆಗಳು ಇರುವ ನಿರೀಖ್ಷೆಗಳಿವೆ. ಇನ್ನುಳಿದಂತೆ ಲೀಕ್ ಮಾಹಿತಿ ಪ್ರಕಾರ ಗ್ಯಾಲಕ್ಸಿ A52 ಮತ್ತು ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಗ್ಯಾಲಕ್ಸಿ A52-ಡಿಸ್‌ಪ್ಲೇ ಹಾಗೂ ಪ್ರೊಸೆಸರ್

ಗ್ಯಾಲಕ್ಸಿ A52-ಡಿಸ್‌ಪ್ಲೇ ಹಾಗೂ ಪ್ರೊಸೆಸರ್

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.46 ಇಂಚಿನ ಡಿಸ್‌ಪ್ಲೇಯನ್ನು ಪಡೆದಿರಲಿದೆ. ಇನ್ನು ಈ ಫೋನ್‌ ಸ್ಯಾಮ್‌ಸಂಗ್‌ನ ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಸಹ ಪಡೆದಿರಲಿದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಆಯ್ಕೆಗಳಿರಲಿವೆ ಎನ್ನಲಾಗಿದೆ.

ಗ್ಯಾಲಕ್ಸಿ A52- ಕ್ಯಾಮೆರಾ ರಚನೆ

ಗ್ಯಾಲಕ್ಸಿ A52- ಕ್ಯಾಮೆರಾ ರಚನೆ

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಕ್ವಾಡ್-ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿರಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇರುವ ನಿರೀಕ್ಷೆಗಳಿವೆ.

ಗ್ಯಾಲಕ್ಸಿ A52-ಬ್ಯಾಟರಿ ಪವರ್ ಏನು

ಗ್ಯಾಲಕ್ಸಿ A52-ಬ್ಯಾಟರಿ ಪವರ್ ಏನು

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರಲಿದೆ. ಇದರೊಂದಿಗೆ ಇತ್ತೀಚಿಗಿನ ಕನೆಕ್ಟಿವಿಟಿ ಸೌಲಭ್ಯಗಳು ಇರಲಿವೆ ಎನ್ನಲಾಗಿದೆ.

ಗ್ಯಾಲಕ್ಸಿ A72 -ಫೀಚರ್ಸ್‌

ಗ್ಯಾಲಕ್ಸಿ A72 -ಫೀಚರ್ಸ್‌

ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್‌ ಸಫೋರ್ಟ್‌ ಸಹ ಇರಲಿದೆ. ಕ್ವಾಡ್‌ ಕ್ಯಾಮೆರಾ ರಚನೆ ಜೊತೆಗೆ ಅಧಿಕ ಸಾಮರ್ಥ್ಯದ ಬ್ಯಾಟರಿ ಪವರ್‌ ಸಹ ಒಳಗೊಂಡಿರಲಿದೆ ಎನ್ನಲಾಗಿದೆ.

ನಿರೀಕ್ಷಿತ ಬೆಲೆ ಎಷ್ಟು?

ನಿರೀಕ್ಷಿತ ಬೆಲೆ ಎಷ್ಟು?

ಭಾರತದಲ್ಲಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಫೋನಿನ 6GB RAM ಮತ್ತು 128GB ಸ್ಟೋರೇಜ್‌ನ ಬೆಲೆಯು 26,499ರೂ. ಇರಲಿದೆ ಎನ್ನಲಾಗಿದೆ. ಹಾಗೆಯೇ 8GB RAM ವೇರಿಯಂಟ್ ದರವು 27,999ರೂ. ಎಂದು ಅಂದಾಜಿಸಲಾಗಿದೆ. ಹಾಗೆಯೇ ಗ್ಯಾಲಕ್ಸಿ A72 ಫೋನಿನ ಆರಂಭಿಕ ವೇಋಇಯಂಟ್ ದರವು 34,999ರೂ. ಪ್ರೈಸ್‌ಟ್ಯಾಗ್ ಹೊಂದಿರಬಹುದು ಎಂದು ಊಹಿಸಲಾಗಿದೆ.

Best Mobiles in India

English summary
Here's how you can watch the Samsung Galaxy A52 and Samsung Galaxy A72 launch event online.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+