ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಹೆಚ್ಚಳ!
ದಕ್ಷಿಣ ಕೋರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಭಾರತದಲ್ಲಿ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಡೀರ್ ಹೇರಿಕೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಮೂಲ ಬೆಲೆಯಲ್ಲಿ 1,000 ರೂ, ಗಳ ಏರಿಕೆಯನ್ನು ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ವರ್ಷ ಮಾರ್ಚ್ ತಿಂಗಳಿನಲ್ಲಿ ಲಾಂಚ್ ಆಗಿತ್ತು. ಈ ಫೋನ್ 90Hz ಡಿಸ್‌ಪ್ಲೇ, ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್ ಬಲವನ್ನು ಹೊಂದಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ದಿಡೀರ್ ಅಂತಾ ತನ್ನ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಬೆಲೆ ಹೆಚ್ಚಿಸಿದೆ. ಗ್ರಾಹಕರಿಂದ ಸಾಕಷ್ಟು ಮೆಚ್ಚುಗೆ ಗಳಿಸಿರುವ 8GB RAM ಮಾದರಿಯಲ್ಲಿ ಬೆಲೆ ಹೆಚ್ಚಿಸಲಾಗಿದೆ. ಇನ್ನು ಗ್ಯಾಲಕ್ಸಿ A-ಸರಣಿಯ ಈ ಫೋನ್ ಅನ್ನು ಗ್ಯಾಲಕ್ಸಿ A72 ಜೊತೆಗೆ ಬಿಡುಗಡೆ ಮಾಡಲಾಗಿತ್ತು. ಸದ್ಯ A52 ಬೆಲೆ ಮಾತ್ರ ಹೆಚ್ಚಿಸಲಾಗಿದೆ. ಹಾಗಾದ್ರೆ ಬೆಲೆ ಏರಿಕೆ ನಂತರ ಈ ಸ್ಮಾರ್ಟ್‌ಫೋನ್ ಬೆಲೆ ಎಷ್ಟು? ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದ್ದು, ಇದು 6.46 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸೂಪರ್ AMOLED ಇನ್‌ಫೀನಿಟಿ O ಡಿಸ್‌ಪ್ಲೇಯನ್ನು ಪಡೆದಿದೆ. ಈ ಡಿಸ್‌ಪ್ಲೇ 90Hz ಸಾಮರ್ಥ್ಯದ ಸ್ಕ್ರೀನ್ ರಿಫ್ರೇಶ್ ರೇಟ್ ಅನ್ನು ಪಡೆದಿದೆ.

ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720G ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ. ಇದು ಆಂಡ್ರಾಯ್ಡ್ 11 ಓಎಸ್ ಹಾಗೂ ಓನ್ UI 3.1.ಸಪೋರ್ಟ್‌ನೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆಟಪ್ ಹೇಗಿದೆ?
ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಕ್ವಾಡ್-ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿದೆ.

ಬ್ಯಾಟರಿ ಪವರ್
ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಇತ್ತೀಚಿಗಿನ ಕನೆಕ್ಟಿವಿಟಿ ಆಯ್ಕೆಗಳಾದ 4ಜಿ, ವೈ-ಫೈ, ಬ್ಲೂಟೂತ್, ಜಿಪಿಎಸ್ /ಎ-ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಈಗ 6GB + 128GB ಸ್ಟೋರೇಜ್ ರೂಪಾಂತರಕ್ಕೆ 27,499ರೂ ಬೆಲೆಯನ್ನು ಪಡೆದುಕೊಂಡಿದೆ. ಈ ಫೋನ್ ಪ್ರಾರಂಭದಲ್ಲಿ 26,499.ರೂ ಬೆಲೆಗೆ ಲಾಂಚ್ ಮಾಡಲಾಗಿತ್ತು. ಅದರ ಮೂಲ ರೂಪಾಂತರದಂತೆಯೇ, 8GB + 128GB ಸಂಗ್ರಹ ಆಯ್ಕೆಯು ಈಗ 28,999ರೂ. ಬೆಲೆಯನ್ನು ಪಡೆದುಕೊಂಡಿದೆ.


Click it and Unblock the Notifications








