ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಫೋನ್ ಬಿಡುಗಡೆ!..ಬೆಲೆ ಎಷ್ಟು?.ಫೀಚರ್ಸ್ ಏನು?
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ A52 ಮತ್ತು ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಅನಾವರಣ ಮಾಡಿದೆ. ಅವುಗಳಲ್ಲಿ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಡಸ್ಟ್ ಹಾಗೂ ವಾಟರ್ ರೆಸಿಸ್ಟೆನ್ಸ್ ವಿನ್ಯಾಸವನ್ನು ಪಡೆದಿದೆ. ಜೊತೆಗೆ ಕ್ವಾಡ್ ಕ್ಯಾಮೆರಾ ರಚನೆ ಹಾಗೂ ಬಿಗ್ ಬ್ಯಾಟರಿ ಆಯ್ಕೆ ಹೊಂದಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ರಿಯರ್ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 5G ಮಾದರಿಯ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದ್ದು, 6.46 ಇಂಚಿನ ಸೂಪರ್ AMOLED ಇನ್‌ಫೀನಿಟಿ O ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನು ಈ ಫೋನ್ 90Hz ಸಾಮರ್ಥ್ಯದ ಸ್ಕ್ರೀನ್ ರೀಫೇಶ್ ರೇಟ್ ಅನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ
ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720G ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಹಾಗೂ ಓನ್ UI 3.1.ಸಪೋರ್ಟ್ ಸಹ ಪಡೆದಿದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಆಯ್ಕೆಗಳಿರಲಿವೆ.

ಕ್ವಾಡ್ ಕ್ಯಾಮೆರಾ ರಚನೆ
ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಕ್ವಾಡ್-ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿದೆ. ತೃತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ.

ಬ್ಯಾಟರಿ ಪವರ್ ಏನು
ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಇತ್ತೀಚಿಗಿನ ಕನೆಕ್ಟಿವಿಟಿ ಆಯ್ಕೆಗಳಾದ 4 ಜಿ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ. ಫೋನ್ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಎಷ್ಟು?
ಭಾರತದಲ್ಲಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಫೋನಿನ ಬೆಲೆಯು ಯುರೋಪ್‌ನಲ್ಲಿ EUR 349 (ಭಾರತದಲ್ಲಿ ಅಂದಾಜು 30,200ರೂ. ಎನ್ನಲಾಗಿದೆ). ಹಾಗೆಯೇ ಗ್ಯಾಲಕ್ಸಿ A52 5G ವೇರಿಯಂಟ್ ದರವು EUR 429 (ಭಾರತದಲ್ಲಿ ಅಂದಾಜು 37,100ರೂ. ಊಹಿಸಲಾಗಿದೆ.)


Click it and Unblock the Notifications








