ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ದಕ್ಷಿಣ ಕೋರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಎ ಮತ್ತು ಎಂ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ಗ್ಯಾಲಕ್ಸಿ A52s 5G ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಪಂಚ್ ಹೋಲ್ ಡಿಸ್‌ಪ್ಲೇ ವಿನ್ಸಾಸವನ್ನು ಹೊಂದಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಹೊಸ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 120Hz ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೆ ಹೊಂದಿದೆ. ಇದು ಸೂಪರ್ ಅಮೋಲೆಡ್ ಇನ್ಫಿನಿಟಿ-O ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಒಂದು UI 3 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದುದು 25W ಸೂಪರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS/ A-GPS, NFC ಮತ್ತು USB Type-C ಪೋರ್ಟ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ 35,999ರೂ, ಬೆಲೆ ಹೊಂದಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯ ಬೆಲೆ 37,499ರೂ,ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೇಜಾನ್, ಸ್ಯಾಮ್‌ಸಂಗ್.ಕಾಮ್ ಮತ್ತು ಪ್ರಮುಖ ರಿಟೇಲ್ ಸೇಲ್ ಸೆಂಟರ್‌ಗಳಲ್ಲಿ ವಂಡರ್ ಬ್ಲಾಕ್, ವಂಡರ್ ವೈಲೆಟ್ ಮತ್ತು ವಂಡರ್ ವೈಟ್ ಬಣ್ಣಗಳಲ್ಲಿ ಲಭ್ಯವಾಗಲಿದೆ. ಈ ಫೋನ್ ಲಾಂಚ್ ಆಫರ್‌ನಲ್ಲಿ HDFC ಬ್ಯಾಂಕ್ ಕಾರ್ಡ್ ಬಳಸಿ ಖರೀದಿಸುವ ಗ್ರಾಹಕರು 3,000 ರೂ, ವರೆಗೆ ಕ್ಯಾಶ್‌ಬ್ಯಾಕ್ ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








