ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಬೆಲೆ ಘೋಷಣೆ; ಕೊಡುಗೆ ಇದೆಯಾ?
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೂತನ ಗ್ಯಾಲಕ್ಸಿ A53 5G ಫೋನ್ ಗ್ರಾಹಕರನ್ನು ಸೆಳೆದಿದೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಬೆಲೆ ಎಷ್ಟಿರಲಿದೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲಕ್ಸಿ A53 5G ಫೋನಿನ ಭಾರತೀಯ ಬೆಲೆ ಘೋಷಣೆ ಮಾಡಿದ್ದು, ಅದರೊಂದಿಗೆ ಸೇಲ್ ದಿನಾಂಕವನ್ನು ಸಹ ತಿಳಿಸಿದೆ.

ಹೌದು, ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನಿನ 6GB/128GB ಸ್ಟೋರೇಜ್ ವೇರಿಯಂಟ್ ಆರಂಭಿಕ ಬೆಲೆಯು 34,999ರೂ. ಆಗಿದೆ. 8GB/128GB ಸ್ಟೋರೇಜ್ ವೇರಿಯಂಟ್ ಬೆಲೆಯು 35,999ರೂ. ಆಗಿದೆ. ಇನ್ನು ಗ್ಯಾಲಕ್ಸಿ A53 5G ಮುಂಗಡ-ಆರ್ಡರ್ ಇಂದಿನಿಂದ ಮಾರ್ಚ್ 31 ರವರೆಗೆ ಸ್ಯಾಮ್‌ಸಂಗ್ ಇ-ಸ್ಟೋರ್ ಮೂಲಕ ಲಭ್ಯವಿದೆ. ಮುಂಗಡವಾಗಿ ಬುಕ್ ಮಾಡುವವರಿಗೆ ಇದೇ ಮಾರ್ಚ್ 25 ರಿಂದ ಮಾರಾಟವು ಲೈವ್ ಆಗಲಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನಿಗೆ ಕೆಲವು ಕೊಡುಗೆಗಳು ಲಭ್ಯ. ಮುಂಗಡವಾಗಿ ಬುಕ್ ಮಾಡುವ ಗ್ರಾಹಕರಿಗೆ ಸ್ಯಾಮ್‌ಸಂಗ್ 3,000ರೂ. ಬ್ಯಾಂಕ್ ಕ್ಯಾಶ್‌ಬ್ಯಾಕ್ ಅಥವಾ 2,000ರೂ. ಮೌಲ್ಯದ ಸ್ಯಾಮ್‌ಸಂಗ್ ಫೈನಾನ್ಸ್ + ಕ್ಯಾಶ್‌ಬ್ಯಾಕ್ ನೀಡುತ್ತಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ O ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8 GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ನು ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, ಮತ್ತು USB ಟೈಪ್ C ಪೋರ್ಟ್ ಸೇರಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಫಿಂಗರ್‌ಪ್ರಿಂಟ್ ಸೆನ್ಸಾರ್, ಗೈರೊ ಮೀಟರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A33 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ HD+ ಸೂಪರ್ ಅಮೋಲೆಡ್ ಇನ್ಫಿನಿಟಿ U ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ One UI 4.1 ನೊಂದಿಗೆ ಬರುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.


Click it and Unblock the Notifications








