ದಿಢೀರ್ ಮತ್ತೆ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನ್!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ ಸರಣಿಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಆ ಪೈಕಿ ಮೀಡ್‌ರೇಂಜ್ ಪ್ರೈಸ್ ಟ್ಯಾಗ್‌ನ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳೊಂದಿಗೆ ಮೊಬೈಲ್ ಪ್ರಿಯರನ್ನು ತನ್ನತ್ತ ಸೆಳೆದಿದೆ. ಇದೀಗ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ ದರದಲ್ಲಿ ಭರ್ಜರಿ ಇಳಿಕೆ ಆಗಿದ್ದು, ಈ ಮೂಲಕ ಮತ್ತೊಮ್ಮೆ ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನ್ ಈಗ ಮತ್ತೆ 3,000ರೂ. ಗಳ ಬೆಲೆ ಇಳಿಕೆ ಆಗಿದೆ. ಬೆಲೆ ಕಡಿತದ ಬಳಿಕ 6GB + 128GB ವೇರಿಯಂಟ್ ಫೋನ್ 31,499ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅದೇ ರೀತಿ 8GB + 128GB ಸ್ಟೋರೇಜ್ ವೇರಿಯಂಟ್ 32,999ರೂ. ಗಳ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್, ವೈಟ್, ಬ್ಲೂ ಹಾಗೂ ಪಿಚ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗುತ್ತದೆ.

ಗ್ರಾಹಕರು ಅಮೆಜಾನ್, ಕ್ರೋಮಾ, ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಈ ಫೋನ್ ಖರೀದಿಸಬಹುದಾಗಿದೆ. ಇನ್ನು ಗ್ಯಾಲಕ್ಸಿ A53 5G ಫೋನ್ 120Hz ರಿಫ್ರೆಶ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ O ಪ್ಲಸ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 6GB + 128 GB ಮತ್ತು 8GB + 128GB ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ O ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನಿನ ಡಿಸ್‌ಪ್ಲೇಯು 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದಿದೆ. ಡಿಸ್‌ಪ್ಲೇಯು 85.4% ಅನುಪಾತವನ್ನು ಪಡೆದಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 405pp ಆಗಿದೆ.

ಪ್ರೊಸೆಸರ್ ಮತ್ತು ಮೆಮೊರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ Exynos 1280 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 6GB + 128 GB ಮತ್ತು 8GB + 128GB ಸ್ಟೋರೇಜ್‌ನ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮತ್ತು ಬ್ಯಾಟರಿ ಬ್ಯಾಕ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 25W ವೇಗದ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.

ಕನೆಕ್ಟಿವಿಟಿ ಆಯ್ಕೆಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, ಮತ್ತು USB ಟೈಪ್ C ಪೋರ್ಟ್ ಸೇರಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಫಿಂಗರ್‌ಪ್ರಿಂಟ್ ಸೆನ್ಸಾರ್, ಗೈರೊ ಮೀಟರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಬ್ಲ್ಯಾಕ್, ವೈಟ್, ಬ್ಲೂ ಹಾಗೂ ಪಿಚ್ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ.


Click it and Unblock the Notifications








