Home
ಸುದ್ದಿಜಾಲ

ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನ್‌!

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ ಮೀಡ್‌ರೇಂಜ್‌ ಬೆಲೆಯಲ್ಲಿ ಆಕರ್ಷಕ ಫೀಚರ್ಸ್‌ಗಳೊಂದಿಗೆ ಹೈ ಎಂಡ್‌ ಫೋನ್ ಪ್ರಿಯರನ್ನು ಆಕರ್ಷಿಸಿದೆ. ಆದ್ರೆ, ಗ್ಯಾಲಕ್ಸಿ A53 5G ಇದೀಗ ದೊಡ್ಡ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದ್ದು, ಮತ್ತಷ್ಟು ಗ್ರಾಹಕರನ್ನು ಆಕರ್ಷಿಸಿದೆ.

ಸಾಮರ್ಥ್ಯವನ್ನು

ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನ್‌ 120Hz ರಿಫ್ರೆಶ್ ಹೆಚ್‌ಡಿ + ಸೂಪರ್ ಅಮೋಲೆಡ್‌ ಇನ್ಫಿನಿಟಿ O ಪ್ಲಸ್ ಡಿಸ್‌ಪ್ಲೇಯನ್ನು ಒಳಗೊಂಡಿದ್ದು, ಆಕ್ಟಾ ಕೋರ್ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ರನ್ ಆಗುತ್ತದೆ. ಹಾಗೆಯೇ ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 6GB + 128 GB ಮತ್ತು 8GB + 128GB ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ವೈಟ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನ್‌ 3,000ರೂ. ಗಳ ಬೆಲೆ ಇಳಿಕೆ ಆಗಿದೆ. ಬೆಲೆ ಕಡಿತದ ಬಳಿಕ 6GB + 128GB ವೇರಿಯಂಟ್‌ ಫೋನ್ 31,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಅದೇ ರೀತಿ 8GB + 128GB ಸ್ಟೋರೇಜ್‌ ವೇರಿಯಂಟ್‌ 32,999ರೂ. ಗಳ ದರದಲ್ಲಿ ದೊರೆಯಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್‌, ವೈಟ್‌, ಬ್ಲೂ ಹಾಗೂ ಪಿಚ್‌ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗುತ್ತದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಂಡ್ರಾಯ್ಡ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಹೊಂದಿರುವ 6.5 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಇನ್ಫಿನಿಟಿ O ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8 GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸೆನ್ಸಾರ್

ಇನ್ನು ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಫಿಂಗರ್‌ಪ್ರಿಂಟ್

ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, ಮತ್ತು USB ಟೈಪ್ C ಪೋರ್ಟ್ ಸೇರಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಫಿಂಗರ್‌ಪ್ರಿಂಟ್ ಸೆನ್ಸಾರ್‌, ಗೈರೊ ಮೀಟರ್‌, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನ್‌ ಬೆಲೆ ಇಳಿಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನ್‌ ಬೆಲೆ ಇಳಿಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನ್‌ ಇದೀಗ 2000 ರೂ. ಗಳ ಭರ್ಜರಿ ರಿಯಾಯಿತಿ ಪಡೆದಿದೆ. ಡಿಸ್ಕೌಂಟ್‌ ಬಳಿಕ 4GB RAM ಮತ್ತು 64GB ವೇರಿಯಂಟ್ ಫೋನ್‌ 12,999 ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ 6GB RAM ಮತ್ತು 128GB ವೇರಿಯಂಟ್‌ ಮಾಡೆಲ್‌ 14,999 ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ ಬ್ರೈಟ್‌ನೆಸ್‌ ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಸಹ ಬೆಂಬಲಿಸುತ್ತದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB RAM ಮತ್ತು 64GB ಹಾಗೂ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಇದೆ.

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಕೆಲವು ಉಪಯುಕ್ತ ಫೋಟೊ ಎಡಿಟಿಂಗ್ ಆಯ್ಕೆಗಳು ಸೇರಿವೆ.

Best Mobiles in India

English summary
Samsung Galaxy A53 5G receives a Price Cut in India: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+