Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಮತ್ತು ಗ್ಯಾಲಕ್ಸಿ A33 5G ಫೋನ್‌ ಬಿಡುಗಡೆ!

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ A ಈವೆಂಟ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಮತ್ತು ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ. ಹಾಗೆಯೇ ಈ ಫೋನ್‌ಗಳು ಆಕ್ಟಾ-ಕೋರ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ. ಜೊತೆಗೆ 25W ವೇಗದ ಚಾರ್ಜಿಂಗ್‌ ಬೆಂಬಲಿಸಲಿವೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸದಾಗಿ ಗ್ಯಾಲಕ್ಸಿ A53 5G ಮತ್ತು ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಎರಡೂ ಫೋನ್‌ಗಳು ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ರನ್‌ ಆಗಲಿವೆ. ಇದರಲ್ಲಿ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ ಹೋಲ್-ಪಂಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಆದರೆ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಸ್ಟೈಲ್ ನಾಚ್‌ನೊಂದಿಗೆ ಬರುತ್ತದೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಹೊಂದಿರುವ 6.5 ಇಂಚಿನ ಫುಲ್‌ HD+ ಸೂಪರ್ ಅಮೋಲೆಡ್‌ ಇನ್ಫಿನಿಟಿ-O ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, ಮತ್ತು USB ಟೈಪ್ C ಪೋರ್ಟ್ ಸೇರಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಫಿಂಗರ್‌ಪ್ರಿಂಟ್ ಸೆನ್ಸಾರ್‌, ಗೈರೊ ಮೀಟರ್‌, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ HD+ ಸೂಪರ್ ಅಮೋಲೆಡ್ ಇನ್ಫಿನಿಟಿ U ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ One UI 4.1 ನೊಂದಿಗೆ ಬರುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ EUR 449 (ಅಂದಾಜು 37,800ರೂ), ಆದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಬೆಲೆ EUR 369 (ಅಂದಾಜು 31,000ರೂ) ಆರಂಭಿಕ ಬೆಲೆಯನ್ನು ಹೊಂದಿದೆ. ಇನ್ನು ಈ ಎರಡೂ ಫೋನ್‌ಗಳು 6GB + 128GB, 8GB + 128GB ಮತ್ತು 8GB + 256GB ಕಾನ್ಫಿಗರೇಶನ್‌ಗಳಲ್ಲಿ ಬರುತ್ತವೆ. ಸದ್ಯ ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಮತ್ತು ಗ್ಯಾಲಕ್ಸಿ A33 5G ಫೋನ್‌ ಬಿಡುಗಡೆಯ ವಿವರಗಳು ಇನ್ನೂ ಬಹಿರಂಗವಾಗಿಲ್ಲ. ಆದಾಗ್ಯೂ, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಏಪ್ರಿಲ್ 1 ರಿಂದ ಹಾಗೂ ಗ್ಯಾಲಕ್ಸಿ A33 5G ಫೋನ್‌ ಏಪ್ರಿಲ್ 22 ರಿಂದ ಲಭ್ಯವಿರುತ್ತದೆ. ಈ ಎರಡೂ ಮಾದರಿಗಳು ವಂಡರ್‌ ಬ್ಲ್ಕಾಕ್‌, ವಂಡರ್‌ ಬ್ಲ್ಯಾಕ್‌, ವಂಡರ್‌ ಪೀಚ್ ಮತ್ತು ವಂಡರ್‌ ವೈಟ್‌ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ.

Best Mobiles in India

English summary
Samsung Galaxy A53 5G and Galaxy A33 5G both have up to 256GB storage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+