ಸ್ಯಾಮ್‌ಸಂಗ್ ಗ್ಯಾಲಕ್ಸಿ A53 ಈಗ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ!
ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯ ಜನಪ್ರಿಯ ಫೋನ್‌ಗಳ ಪೈಕಿ ಒಂದಾದ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ ಈಗಾಗಲೇ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರ ಗಮನ ಸೆಳೆದಿದೆ.
ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ 128GB ವೇರಿಯಂಟ್ 31,999ರೂ.ಗಳ ಆಕರ್ಷಕ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 1,000ರೂ. ಗಳ ರಿಯಾಯಿತಿ ಸಹ ಸಿಗಲಿದೆ.

ಇನ್ನು ಈ ಫೋನ್ 6GB + 128 GB ಮತ್ತು 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಗ್ಯಾಲಕ್ಸಿ A53 5G : ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ O ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನಿನ ಡಿಸ್‌ಪ್ಲೇಯು 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಪಡೆದಿದೆ. ಡಿಸ್‌ಪ್ಲೇಯು 85.4% ಅನುಪಾತವನ್ನು ಪಡೆದಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 405pp ಆಗಿದೆ.

ಗ್ಯಾಲಕ್ಸಿ A53 5G : ಪ್ರೊಸೆಸರ್ ಮತ್ತು ಮೆಮೊರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ Exynos 1280 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 6GB + 128 GB ಮತ್ತು 8GB + 128GB ಸ್ಟೋರೇಜ್‌ನ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಗ್ಯಾಲಕ್ಸಿ A53 5G : ಕ್ಯಾಮೆರಾ ಮತ್ತು ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 25W ವೇಗದ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.

ಗ್ಯಾಲಕ್ಸಿ A53 5G : ಕನೆಕ್ಟಿವಿಟಿ ಆಯ್ಕೆಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, ಮತ್ತು USB ಟೈಪ್ C ಪೋರ್ಟ್ ಸೇರಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಫಿಂಗರ್‌ಪ್ರಿಂಟ್ ಸೆನ್ಸಾರ್, ಗೈರೊ ಮೀಟರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಬ್ಲ್ಯಾಕ್, ವೈಟ್, ಬ್ಲೂ ಹಾಗೂ ಪಿಚ್ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ.


Click it and Unblock the Notifications








