Home
ಸುದ್ದಿಜಾಲ

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫಸ್ಟ್‌ ಸೇಲ್‌!.ಬೆಲೆ ಎಷ್ಟು?

ಸ್ಯಾಮ್‌ಸಂಗ್ ಕಂಪೆನಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಮೊಬYಲ್ ಪ್ರಿಯರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು (ಮಾರ್ಚ್ 25) ಮಧ್ಯಾಹ್ನ 12 ಗಂಟೆಗೆ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಮೂಲಕ ಮೊದಲ ಬಾರಿಗೆ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6GB + 128GB ಬೇಸ್‌ ವೇರಿಯೆಂಟ್‌ ಬೆಲೆ 34,499 ರೂ. ಆಗಿದೆ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫಸ್ಟ್‌ ಸೇಲ್‌!.ಬೆಲೆ ಎಷ್ಟು?
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಇಂದು (ಮಾರ್ಚ್ 25) ಫ್ಲಿಪ್‌ಕಾರ್ಟ್‌ ಹಅಗೂ ಅಮೆಜಾನ್ ಮೂಲಕ ಸೇಲ್ ಪ್ರಾರಂಭಿಸಲಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ ನಾಲ್ಕು ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫಸ್ಟ್‌ ಸೇಲ್‌!.ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಫೀಚರ್ಸ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಹೊಂದಿರುವ 6.5 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಇನ್ಫಿನಿಟಿ O ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8 GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫಸ್ಟ್‌ ಸೇಲ್‌!.ಬೆಲೆ ಎಷ್ಟು?

ಇನ್ನು ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ.

ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, ಮತ್ತು USB ಟೈಪ್ C ಪೋರ್ಟ್ ಸೇರಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಫಿಂಗರ್‌ಪ್ರಿಂಟ್ ಸೆನ್ಸಾರ್‌, ಗೈರೊ ಮೀಟರ್‌, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಎರಡು ಮಾದರಿ ಗಳಲ್ಲಿ ಬರುತ್ತದೆ. ಬೇಸ್ 6 GB + 128 GB ಆಂತರೀಕ ಸ್ಟೋರೇಜ್ ಬೆಲೆಯು 34,499 ರೂ. ಆಗಿದೆ. ಹಾಗೂ 8 GB + 128 GB ಆಂತರೀಕ ಸ್ಟೋರೇಜ್ ರೂಪಾಂತರದ ಬೆಲೆ 35,999 ರೂ. ಆಗಿದೆ. ಇನ್ನು ಈ ಫೋನ್ ಇಂದು (ಮಾರ್ಚ್ 25) ಫ್ಲಿಪ್‌ಕಾರ್ಟ್‌ ಹಾಗೂ ಅಮೆಜಾನ್ ಮೂಲಕ ಸೇಲ್ ಪ್ರಾರಂಭಿಸಲಿದೆ. ಆರಂಭಿಕ ಕೊಡುಗೆ ಯಾಗಿ, ಸ್ಯಾಮ್‌ಸಂಗ್ ಐಸಿಐಸಿಐ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳೊಂದಿಗೆ 3000ರೂ. ತ್ವರಿತ ಕ್ಯಾಶ್‌ಬ್ಯಾಕ್ ಅನ್ನು ತಿಳಿಸಿದೆ.

Best Mobiles in India

English summary
Samsung Galaxy A53 Goes for First Sale Today: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+