Home
ಸುದ್ದಿಜಾಲ

ಸ್ಯಾಮ್‌ಸಂಗ್ ಸಂಸ್ಥೆಯ ಈ ದೈತ್ಯ ಫೋನಿಗೆ ಭಾರೀ ರಿಯಾಯಿತಿ!

ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಎಂದೇ ಗುರುತಿಸಿಕೊಂಡಿರುವ ಅಮೆಜಾನ್‌ ತಾಣವು ಈಗ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಆಯೋಜಿಸಿ ಗ್ರಾಹಕರನ್ನು ಸೆಳೆದಿದೆ. ಈ ಮಾರಾಟದಲ್ಲಿ ದುಬಾರಿ ಹಾಗೂ ಅಗ್ಗದ ಬೆಲೆಯ ಮೊಬೈಲ್‌ಗಳು ಭರ್ಜರಿ ರಿಯಾಯಿತಿ ಪಡೆದಿದ್ದು, ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಮೊಬೈಲ್‌ ಕೂಡಾ ಸಖತ್ ಡಿಸ್ಕೌಂಟ್‌ ಪಡೆದಿದೆ.

ಹೌದು, ಅಮೆಜಾನ್‌ ತಾಣದ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ ಶೇ. 15% ರಷ್ಟು ಡಿಸ್ಕೌಂಟ್‌ ಪಡೆದಿದ್ದು, 8 GB + 128 GB ವೇರಿಯಂಟ್‌ ಫೋನ್‌ 35,499 ರೂ. ಗಳ ಬೆಲೆಯಲ್ಲಿ ಲಭ್ಯ ಇದೆ. ಇದರೊಂದಿಗೆ ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ಕೊಡುಗೆ ಹಾಗೂ ಇತರೆ ಆಫರ್‌ ಸೇರಿದರೆ ಈ ಫೋನ್‌ ಅನ್ನು 7,999ರೂ. ಗಳಿಗೆ ಖರೀದಿಸಬಹುದು.

ಸ್ಯಾಮ್‌ಸಂಗ್ ಸಂಸ್ಥೆಯ ಈ ದೈತ್ಯ ಫೋನಿಗೆ ಭಾರೀ ರಿಯಾಯಿತಿ!

ಇನ್ನು ಈ ಆಕರ್ಷಕ ಕ್ಯಾಮೆರಾ ಫೋನ್‌ 8 GB + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ ಇದು ಸ್ಯಾಮ್‌ಸಂಗ್ Exynos 138 ಚಿಪ್‌ಸೆಟ್‌ ಪ್ರೊಸೆಸರ್ ಪವರ್‌ ಪಡೆದುಕೊಂಡಿದೆ. ಹಾಗಾದರೇ ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದ್ದು, 1000 nits ಬ್ರೈಟ್ನೆಸ್‌ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್‌ 5 ರಕ್ಷಣೆ ಪಡೆದಿದೆ.

ಪ್ರೊಸೆಸರ್ ಪವರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M54 5G ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್ Exynos 138 ಚಿಪ್‌ಸೆಟ್‌ ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಫೋನ್ 8 GB + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಕ್ಯಾಮೆರಾ ರಚನೆ ಹೀಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಈ ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಹಾಗೂ ಮೂರನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ.

ಬ್ಯಾಟರಿ ಬ್ಯಾಕ್‌ಅಪ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿಯ ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ ಆಯ್ಕೆಗಳನ್ನು ಇದು ಹೊಂದಿದೆ. ಇದರ ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಆಯ್ಕೆಗಳು ಕೂಡಾ ಹೊಂದಿದೆ.

ಸ್ಯಾಮ್‌ಸಂಗ್‌ ಕಂಪನಿಯ ಗ್ಯಾಲಕ್ಸಿ A54 5G ಫೋನ್‌ 8GB + 256GB ಒಳಗೊಂಡಿದ್ದು, ಈ ಫೋನ್ ಲೈಮ್‌, ಗ್ರಾಫೈಟ್‌ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರು ಖರೀದಿ ಮಾಡಬಹುದು. ಸದ್ಯ ಅಮೆಜಾನ್‌ ಹಬ್ಬದ ಮಾರಾಟದಲ್ಲಿ ಖರೀದಿಗೆ ಲಭ್ಯ ಇದೆ.

Best Mobiles in India

English summary
Samsung Galaxy A54 5G available at ultimate offer in amazon. know price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+