ಸ್ಯಾಮ್‌ಸಂಗ್‌ನ ಈ ಹೊಸ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!..ಉಳಿತಾಯ ಪಕ್ಕಾ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಗ್ಯಾಲಕ್ಸಿ A ಸರಣಿಯಲ್ಲಿ ಪರಿಚಯಿಸಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್ ಫೀಚರ್ಸ್‌ಗಳಿಂದ ಫೋನ್ ಪ್ರಿಯರನ್ನು ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆ ಕಂಡು ಗ್ರಾಹಕರನ್ನು ಆಕರ್ಷಿಸಿದೆ.
ಹೌದು, ಸ್ಯಾಮ್‌ಸಂಗ್ ತನ್ನ ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ಮಾರುಕಟ್ಟೆಯಲ್ಲಿ ಈಗ 7% ನಷ್ಟು ಡಿಸ್ಕೌಂಟ್ ದರದಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 128GB ಸ್ಟೋರೇಜ್‌ನ ವೇರಿಯಂಟ್ 41,999ರೂ. ಗಳ ಪ್ರೈಸ್ ಟ್ಯಾಗ್ ಹೊಂದಿದ್ದು, 38,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಕೊಡುಗೆ ಹಾಗೂ ನೋ ಕಾಸ್ಟ್ ಇಎಮ್‌ಐ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಲೈಮ್, ಗ್ರ್ಯಾಫೈಟ್ ಮತ್ತು ವೈಲೆಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಡಿಸ್‌ಪ್ಲೇ ಮಾಹಿತಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್ 6.4 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ನೀಡಲಿದೆ. ಇದರೊಂದಿಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದುಕೊಂಡಿದೆ. ಹಾಗೆಯೇ ಕ್ಯಾಮೆರಾ ಉದ್ದೇಶಕ್ಕಾಗಿ ಪಂಚ್‌ಹೋಲ್‌ಶೈಲಿ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಪ್ರೊಸೆಸರ್ ಕಾರ್ಯ ವೈಖರಿ : ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ A54 5G ಫೋನ್ ಎಕ್ಸಿನೋಸ್ 1380 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್ UI 5.1 ರನ್ ಮಾಡಲಿದೆ. ಹಾಗೆಯೇ 8GB ಯ RAM ಹಾಗೂ 256 GB ಇಂಟರ್ ಸ್ಟೋರೇಜ್‌ನಲ್ಲಿ ಕಾಣಿಸಿಕೊಂಡಿದ್ದು, ಈ ಸ್ಟೋರೇಜ್ ಅನ್ನು ಹೆಚ್ಚಿಗೆ ಮಾಡಿಕೊಳ್ಳಲು ಎಸ್‌ಡಿ ಕಾರ್ಡ್ ಸ್ಲಾಟ್ ಆಯ್ಕೆ ನೀಡಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಕ್ಯಾಮೆರಾ ರಚನೆ: ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರಲ್ಲಿ ಓಐಎಸ್ ಬೆಂಬಲದ 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ, 12 ಮೆಗಾ ಪಿಕ್ಸಲ್ ಅಲ್ಟ್ರಾ ವೈಡ್ ಲೆನ್ಸ್ ಹಾಗೂ 5 ಮೆಗಾ ಪಿಕ್ಸಲ್ ಮ್ಯಾಕೋ ಲೆನ್ಸ್ ಕ್ಯಾಮೆರಾ ಆಯ್ಕೆಯನ್ನು ನೀಡಲಾಗಿದೆ. ಹಾಗೆಯೇ ಸೆಲ್ಫಿ ಉದ್ದೇಶಕ್ಕೆ 32 ಮೆಗಾ ಪಿಕ್ಸಲ್ ಕ್ಯಾಮೆರಾ ಸೆನ್ಸರ್ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ ಸೌಲಭ್ಯ : ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಇನ್ನುಳಿದಂತೆ ಈ ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಡಾಲ್ಬಿ ಅಟ್ಮಾಸ್ ಸ್ಟೀರಿಯೋ ಸ್ಪೀಕರ್ ಸೌಲಭ್ಯವನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್‌ನ 8GB + 128GB ವೇರಿಯಂಟ್ ಹಾಗೂ 8GB + 256GB ವೇರಿಯಂಟ್ ಆಯ್ಕೆ ಪಡೆದಿವೆ. ಇನ್ನು ಈ ಸ್ಮಾರ್ಟ್‌ಫೋನ್ ಲೈಮ್, ಗ್ರ್ಯಾಫೈಟ್ ಮತ್ತು ವೈಲೆಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








