Home
ಸುದ್ದಿಜಾಲ

ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಲಾಂಚ್‌; ಬೊಂಬಾಟ್‌ ಫೀಚರ್ಸ್‌!

ಪ್ರಮುಖ ಸ್ಮಾರ್ಟ್‌ಫೋನ್‌ ತಯಾರಿಕಾ ಕಂಪೆನಿಗಳಲ್ಲಿ ಒಂದಾಗಿರುವ ಸ್ಮಾಮ್‌ಸಂಗ್‌ ಇದೀಗ ಅಭಿಮಾನಿಗಳು ಅತ್ಯಂತ ಕಾತುರದಿಂದ ಕಾಯುತ್ತಿದ್ದ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಅನಾವರಣ ಮಾಡಿದೆ. ಈ ಫೋನ್‌ ಎಕ್ಸಿನೋಸ್ 1380 SoC ಪ್ರೊಸೆಸರ್‌ ಬಲ ಪಡೆದುಕೊಂಡಿದೆ.

ಹೌದು, ಸ್ಮಾರ್ಟ್‌ಫೋನ್‌ ವಲಯದಲ್ಲಿ ಹಲವು ನಿರೀಕ್ಷೆಯೊಂದಿಗೆ ಭಾರೀ ಕುತೂಹಲ ಹುಟ್ಟಿಸಿದ್ದ ಸ್ಯಾಮ್‌ಸಂಗ್‌ ಇದೀಗ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಹಾಗೂ A54 5G ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಲಾಗಿದ್ದು, ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G (Samsung Galaxy A54 5G) ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್‌ ಕ್ಯಾಮೆರಾ ಹೊಂದಿದ್ದು, 25W ವೇಗದ ಚಾರ್ಜಿಂಗ್‌ ಬೆಂಬಲ ನೀಡಲಿದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್‌, ಭಾರತದಲ್ಲಿ ಇದರ ಬೆಲೆ ಎಷ್ಟೆಂದು ತಿಳಿದುಕೊಳ್ಳೋಣ.

ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಲಾಂಚ್‌; ಬೊಂಬಾಟ್‌ ಫೀಚರ್ಸ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಡಿಸ್‌ಪ್ಲೇ ವಿವರ: ಈ A54 5G ಸ್ಮಾರ್ಟ್‌ಫೋನ್ 6.4 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್‌ ನೀಡಲಿದೆ. ಇದರೊಂದಿಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದುಕೊಂಡಿದೆ. ಹಾಗೆಯೇ ಕ್ಯಾಮೆರಾ ಉದ್ದೇಶಕ್ಕಾಗಿ ಪಂಚ್‌ಹೋಲ್‌ಶೈಲಿ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಪ್ರೊಸೆಸರ್‌ ಯಾವುದು? : ಸ್ಯಾಮ್‌ಸಂಗ್‌ನ ಈ ಬಹುನಿರೀಕ್ಷಿತ ಫೋನ್ ಎಕ್ಸಿನೋಸ್ 1380 SoC ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್‌ UI 5.1 ರನ್‌ ಮಾಡಲಿದೆ. ಹಾಗೆಯೇ 8GB ಯ RAM ಹಾಗೂ 256GB ಇಂಟರ್‌ ಸ್ಟೋರೇಜ್‌ನಲ್ಲಿ ಕಾಣಿಸಿಕೊಂಡಿದ್ದು, ಈ ಸ್ಟೋರೇಜ್‌ ಅನ್ನು ಹೆಚ್ಚಿಗೆ ಮಾಡಿಕೊಳ್ಳಲು ಎಸ್‌ಡಿ ಕಾರ್ಡ್‌ ಸ್ಲಾಟ್‌ ಆಯ್ಕೆ ನೀಡಲಾಗಿದೆ.


ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಕ್ಯಾಮೆರಾ ರಚನೆ: ಸ್ಯಾಮ್‌ಸಂಗ್‌ ಫೋನ್‌ನ ಕ್ಯಾಮೆರಾಗಳು ಯಾವಾಗಲು ಒಂದು ಕೈ ಮೇಲೆಯೇ ಇರುತ್ತವೆ. ಅದರಂತೆ ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರಲ್ಲಿ ಓಐಎಸ್‌ ಬೆಂಬಲದ 50MP ಪ್ರಾಥಮಿಕ ಕ್ಯಾಮೆರಾ, 12MP ಅಲ್ಟ್ರಾ ವೈಡ್ ಲೆನ್ಸ್ ಹಾಗೂ 5MP ಮ್ಯಾಕೋ ಲೆನ್ಸ್ ಕ್ಯಾಮೆರಾ ಆಯ್ಕೆಯನ್ನು ನೀಡಲಾಗಿದೆ. ಹಾಗೆಯೇ ಸೆಲ್ಫಿ ಉದ್ದೇಶಕ್ಕೆ 32 MP ಕ್ಯಾಮೆರಾ ಸೆನ್ಸರ್‌ ನೀಡಲಾಗಿದೆ.

ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಲಾಂಚ್‌; ಬೊಂಬಾಟ್‌ ಫೀಚರ್ಸ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ : ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಇನ್ನುಳಿದಂತೆ ಈ ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಡಾಲ್ಬಿ ಅಟ್ಮಾಸ್‌ ಸ್ಟೀರಿಯೋ ಸ್ಪೀಕರ್‌ ಸೌಲಭ್ಯವನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್‌ನ 8GB+128GB ವೇರಿಯಂಟ್‌ಗೆ 38,999 ರೂ. ಗಳು ಹಾಗೂ 8GB+256GB ನ ವೇರಿಯಂಟ್‌ಗೆ 40,999 ರೂ. ಗಳ ಬೆಲೆ ನಿಗದಿ ಮಾಡಲಾಗಿದ್ದು, ಈ ಫೋನ್ ಲೈಮ್, ಗ್ರ್ಯಾಫೈಟ್ ಮತ್ತು ವೈಲೆಟ್ ಬಣ್ಣದ ಆಯ್ಕೆಗಳಲ್ಲಿ ಕಂಡುಬರುತ್ತದೆ.

ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಲಾಂಚ್‌; ಬೊಂಬಾಟ್‌ ಫೀಚರ್ಸ್‌!

ಈ ಫೋನ್‌ ಅನ್ನು ಪ್ರೀ ಬುಕಿಂಗ್‌ ಮಾಡಬಹುದಾಗಿದ್ದು, ಮಾರ್ಚ್ 28 ರಿಂದ ಸ್ಯಾಮ್‌ಸಂಗ್‌ನ ಆನ್‌ಲೈನ್ ಸ್ಟೋರ್ ಸೇರಿದಂತೆ ಪ್ರಮುಖ ಇ-ಕಾಮರ್ಸ್ ಸೈಟ್‌ಗಳಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ. ಅದರಂತೆ ಕೆಲವು ಬ್ಯಾಂಕ್‌ ಕಾರ್ಡ್‌ಗಳನ್ನು ಬಳಕೆ ಮಾಡಿಕೊಂಡು ಖರೀದಿ ಮಾಡಿದರೆ 3,000 ರೂ. ಗಳ ಕ್ಯಾಶ್‌ಬ್ಯಾಕ್ ಅನ್ನು ಸಹ ಪಡೆಯಬಹುದಾಗಿದ್ದು, ಈ ಫೋನ್‌ ಖರೀದಿಯ ಮೇಲೆ ವಿನಿಮಯ ಆಫರ್‌ ಅನ್ನು ಸಹ ನೀಡಲಾಗಿದೆ.

Best Mobiles in India

English summary
Samsung Galaxy A54 5G smartphone has been launched in India and this phone has a 50 megapixel primary camera.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+