ಜೋರಾಯ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಅಬ್ಬರ! ಲಾಂಚ್‌ಗೂ ಮುನ್ನವೇ ಯಾಕಿಷ್ಟು ನಿರೀಕ್ಷೆ!
ಸ್ಯಾಮ್‌ಸಂಗ್ ಕಂಪೆನಿಯ ಫೋನ್‌ಗಳಿಗೆ ಭಾರತದಲ್ಲಿ ಉತ್ತಮವಾದ ಮಾರುಕಟ್ಟೆಯಿದೆ. ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಫೋನ್ ವಿವರಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಕೂಡ ಬಿಡುಗಡೆ ದಿನಾಂಕ ಅಧಿಕೃತವಾಗಿಲ್ಲದಿದ್ದರೂ ಫೋನ್‌ನ ಡಿಸೈನ್ ವಿವರಗಳು ಬಹಿರಂಗಗೊಂಡಿದೆ. ಈ ಮೂಲಕ ಮೊಬೈಲ್ ಪ್ರಿಯರ ಕುತೂಹಲವನ್ನು ಹೆಚ್ಚುವಂತೆ ಮಾಡಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್ ವಿವರಗಳನ್ನು ಆನ್‌ಲೈನ್ ಹಲ್‌ಚಲ್ ಎಬ್ಬಿಸಿದೆ. ಇದು A54 ಗಿಂತ ಸ್ವಲ್ಪ ಎತ್ತರ ಮತ್ತು ಅಗಲವಾಗಿದ್ದು, 6.5-ಇಂಚಿನ ಇನ್ಫಿನಿಟಿ-O ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇನ್ನು ಸ್ಮಾರ್ಟ್‌ಫೋನ್ ಎಕ್ಸಿನೋಸ್ 1480 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿರಲಿದೆ. ಇನ್ನು ಡಿಸ್‌ಪ್ಲೇ 390 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರುವ ನಿರೀಕ್ಷೆಯಿದ್ದು, 120 Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ ಪಂಚ್ ಹೋಲ್ ವಿನ್ಯಾಸದೊಂದಿಗೆ ಬರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್ ಎಕ್ಸಿನೋಸ್ 1480 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಪ್ರೊಸೆಸರ್ ಅನ್ನು ಬಳಸುವ ಮೊದಲ ಫೋನ್ ಇದಾಗಿರಲಿದೆ ಎಂದು ಅಂದಾಜಿಸಲಾಗಿದೆ. ಇದು Xclipse 530 GPU ಜೊತೆಗೆ 2.05GHz ನಲ್ಲಿ 4 x ದಕ್ಷತೆಯ ಕೋರ್‌ಗಳನ್ನು ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿರಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಕ್ಯಾಮೆರಾ ಸೆಟ್‌ಅಪ್ ಏನಿರಬಹುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾದೊಂದಿಗೆ ಬರುವ ಸಾಧ್ಯತೆಯಿದೆ. ಅದರಂತೆ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ ಎನ್ನಲಾಗಿದೆ. ಎರಡು ಮತ್ತು ಮೂರನೇ ಕ್ಯಾಮೆರಾ ವಿವರಗಳು ಬಹಿರಂಗವಾಗಿಲ್ಲ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನಿರೀಕ್ಷಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಬ್ಯಾಟರಿ ಮತ್ತು ಇತರೆ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯಲ್ಲಿರಲಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಹಾಗೂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿರಲಿದೆ ಎಂಬ ನಿರೀಕ್ಷೆಯನ್ನು ಇಡಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್ 2024ರ ಆರಂಭದಲ್ಲಿ ಬರುವ ನಿರೀಕ್ಷೆಯಿದೆ. ಇದರ ಬೆಲೆ ವಿವರಗಳು ಇನ್ನು ಸಹ ಬಹಿರಂಗವಾಗಿಲ್ಲ, ಆದರೆ ಫೀಚರ್ಸ್‌ಗಳನ್ನು ಗಮನಿಸುವುದಾದರೆ ಇದು ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಾಗುವ ಸಾಧ್ಯತೆಯನ್ನು ಇಡಲಾಗಿದೆ. ಇನ್ನು ಸ್ಮಾರ್ಟ್‌ಫೋನ್ ಮೊದಲಿಗೆ ಜಾಗತಿಕ ಮಾರುಕಟ್ಟೆಗೆ ಬರಲಿದೆಯಾ, ಇಲ್ಲ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆಯಾ ಅನ್ನೊದನ್ನ ಕಾದು ನೋಡಬೇಕಿದೆ.


Click it and Unblock the Notifications








