Home
ಸುದ್ದಿಜಾಲ

ಭಾರತಕ್ಕೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G: ಫೀಚರ್ಸ್‌ ಹೇಗಿದೆ

ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಫೋನ್‌ 120Hz ರಿಫ್ರೆಶ್ ರೇಟ್ ಬೆಂಬಲಿಸುವ ಡಿಸ್‌ಪ್ಲೇಯನ್ನು ಹೊಂದಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ 8GB + 128GB, 8GB + 256GB, ಮತ್ತು 12GB + 256GB RAM ಮತ್ತು ಸ್ಟೋರೇಜ್ ಆಯ್ಕೆಗಳಲ್ಲಿ ಬರಲಿದೆ. ಹಾಗಾದ್ರೆ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತಕ್ಕೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G: ಫೀಚರ್ಸ್‌ ಹೇಗಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್, 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇಯು ವಿಷನ್ ಬೂಸ್ಟರ್ ಫೀಚರ್ಸ್‌ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ Exynos 1480 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14-ಆಧಾರಿತ One UI 6.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM + 128GB, 8GB RAM + 256GB, ಮತ್ತು 12GB RAM + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಅನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಇಂಡಿಯಾ ವೆಬ್‌ಸೈಟ್‌ನಲ್ಲಿ ಲೈವ್‌ ಆಗಿದೆ. ಆದರೆ ಇನ್ನು ಕೂಡ ಫೋನ್‌ನ ಬೆಲೆ ವಿವರಗಳು ಬಹಿರಂಗವಾಗಿಲ್ಲ. ಈ ಫೋನ್‌ನ ಬೆಲೆ ವಿವರಗಳು ಇದೇ ಮಾರ್ಚ್ 14 ರಂದು 12:00 PM ಗೆ ನಡೆಯುವ ಸ್ಯಾಮ್‌ಸಂಗ್‌ ಲೈವ್ ಈವೆಂಟ್‌ನಲ್ಲಿ ಬಹಿರಂಗವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ Awesome Iceblue, Awesome Navy, and Awesome Lilac colours ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ವರದಿಯಾಗಿದೆ.

Best Mobiles in India

English summary
Samsung Galaxy A55 5G With Triple Rear Cameras Debut in India: Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+