ಬಿಡುಗಡೆಗೂ ಮುನ್ನವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A55 ಬೆಲೆ ವಿವರ ಬಹಿರಂಗ
ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲು ಸ್ಯಾಮ್‌ಸಂಗ್ ಗ್ಯಾಲಕ್ಸಿ A55 ಮತ್ತು ಗ್ಯಾಲಕ್ಸಿ A35 ಸ್ಮಾರ್ಟ್‌ಫೋನ್‌ಗಳು ತಯಾರಿ ನಡೆಸಿವೆ. ಈಗಾಗಲೇ ಈ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಅನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಇದೀಗ ಈ ಸ್ಮಾರ್ಟ್‌ಫೋನ್‌ಗಳ ಬೆಲೆ ವಿವರಗಳು ಬಹಿರಂಗವಾಗಿದ್ದು, ಭಾರತದಲ್ಲಿ ಮಾರ್ಚ್ 11 ರಂದು ಬಿಡುಗಡೆ ಅಗುವುದು ಪಕ್ಕಾ ಆಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A55 ಮತ್ತು ಗ್ಯಾಲಕ್ಸಿ A35 ಭಾರತಕ್ಕೆ ಎಂಟ್ರಿ ನೀಡುವ ಮುನ್ನವೇ ಬೆಲೆ ವಿವರಗಳು ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ಗಳು ಪ್ರೀಮಿಯಂ ಹಾಗೂ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್ ಅಡಿಯಲ್ಲಿ ಬರಲಿದೆ ಎನ್ನಲಾಗಿದೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ಬೆಲೆ ಎಷ್ಟಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A55 ಬೆಲೆ ನಿರೀಕ್ಷೆ ಏನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್ 8GB + 128GB ರೂಪಾಂತರದ ಆಯ್ಕೆಗೆ 479 ಯುರೋಗಳು ( ಅಂದಾಜು 43,190ರೂ) ಬೆಲೆಯಲ್ಲಿ ಬರಲಿದೆ ಎನ್ನಲಾಗಿದೆ. ಆದರೆ ಇದರ 8GB + 256GB ರೂಪಾಂತರದ ಅಯ್ಕೆಯು 529 ಯುರೋಗಳು (ಅಂದಾಜು 47,700ರೂ) ಬೆಲೆಯಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಇದನ್ನು ನೀವು ನೇವಿ ಬ್ಲೂ, ಲೆಮನ್, ಲಿಲಾಕ್ ಮತ್ತು ಐಸ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 ಬೆಲೆ ನಿರೀಕ್ಷೆ ಏನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಸ್ಮಾರ್ಟ್‌ಫೋನ್ 8GB + 128GB ರೂಪಾಂತರದ ಆಯ್ಕೆಗೆ 379 ಯುರೋ (ಅಂದಾಜು 34,180ರೂ) ಬೆಲೆಯಲ್ಲಿ ಬರಲಿದೆ. ಆದರೆ 8GB + 256GB ರೂಪಾಂತರದ ಬೆಲೆ 449 ಯುರೋ (ಅಂದಾಜು 40,490ರೂ) ಇರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್ ಕೂಡ ನೇವಿ ಬ್ಲೂ, ಲೆಮನ್, ಲಿಲಾಕ್ ಮತ್ತು ಐಸ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.
Samsung Galaxy A55 ಫೀಚರ್ಸ್ ನಿರೀಕ್ಷೆ
Samsung Galaxy A55 ಸ್ಮಾರ್ಟ್‌ಫೋನ್ 6.6 ಇಂಚಿನ FHD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2340 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇದು ಇನ್ಫಿನಿಟಿ-O HDR ಡಿಸ್‌ಪ್ಲೇ ಜೊತೆಗೆ 120Hz ರಿಫ್ರೆಶ್ ರೇಟ್ ಅನ್ನು ನೀಡಲಿದೆ. ಈ ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 1480 ಪ್ರೊಸೆಸರ್ ಸಾಮರ್ಥ್ಯದಲ್ಲಿ ಬರಲಿದೆ. ಹಾಗೆಯೆ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿರಲಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಇರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

Samsung Galaxy A35 ಫೀಚರ್ಸ್ ಸಾಧ್ಯತೆ ಏನು?
Samsung Galaxy A35 ಸ್ಮಾರ್ಟ್‌ಫೋನ್ 6.6 ಇಂಚಿನ ಪುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2340 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಆಯ್ಕೆಯಲ್ಲಿ ಬರಲಿದೆ. ಇದು Exynos 1380 ಪ್ರೊಸೆಸರ್ ವೇಗವನ್ನು ಹೊಂದಿರಲಿದ್ದು, ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G68 MP5 GPU ಸಪೋರ್ಟ್ ಅನ್ನು ಪಡೆದುಕೊಂಡಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಇರಲಿದೆ. ಜೊತೆಗೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ. ಇನ್ನು ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್‌ನೊಂದಿಗೆ ಬರಲಿದೆ.


Click it and Unblock the Notifications








