Home
ಸುದ್ದಿಜಾಲ

Samsung: ಶೀಘ್ರದಲ್ಲೇ ಸದ್ದು ಮಾಡಲಿದೆ ಸ್ಯಾಮ್‌ಸಂಗ್‌ನ ಮತ್ತೊಂದು ಹೊಸ ಫೋನ್! ನಿರೀಕ್ಷಿತ ಫೀಚರ್ಸ್‌ ಏನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ (Samsung Galaxy) ಸ್ಮಾರ್ಟ್‌ಫೋನ್‌ಗಳು ವಿಶೇಷ ಫೀಚರ್ಸ್‌ ಆಯ್ಕೆಯ ಮೂಲಕ ಸ್ಮಾರ್ಟ್‌ಫೋನ್‌ ವಲಯದಲ್ಲಿ ದೊಡ್ಡ ಸ್ಥಾನ ಪಡೆದಿವೆ. ಅದರಲ್ಲೂ ಇತ್ತೀಚೆಗೆ ಅನಾವರಣ ಮಾಡಲಾದ ಹೊಸ ಫೋನ್‌ಗಳು ಎಐ ಫೀಚರ್ಸ್‌ ಅನ್ನು ಹೊಂದಿದ್ದು, ಬಳಕೆದಾರರಿಗೆ ವಿಶೇಷ ಅನುಭವ ನೀಡಲಿವೆ. ಈ ನಡುವೆ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲು ಸ್ಯಾಮ್‌ಸಂಗ್‌ ಮುಂದಾಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ (Samsung Galaxy A55 5G Smartphone) ಬಗ್ಗೆ ಈಗಾಗಲೇ ಕೆಲವು ಮಾಹಿತಿ ಲೀಕ್‌ ಆಗಿವೆ. ಅದರಂತೆ ಈ ಸ್ಮಾರ್ಟ್‌ಫೋನ್ TENAA ಪ್ರಮಾಣೀಕರಣವನ್ನು ಪಡೆದಿದೆ. ಜೊತೆಗೆ ಇದು SM-A5560 ಮಾದರಿ ಸಂಖ್ಯೆಯನ್ನು ಹೊಂದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ನಿರೀಕ್ಷಿತ ಫೀಚರ್ಸ್‌ ಏನು?, ಯಾವಾಗ ಅನಾವರಣ ಆಗಬಹುದು ಎಂಬಿತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಶೀಘ್ರದಲ್ಲೇ ಸದ್ದು ಮಾಡಲಿದೆ ಸ್ಯಾಮ್‌ಸಂಗ್‌ನ ಮತ್ತೊಂದು ಹೊಸ ಫೋನ್!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G: ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 ಸ್ಮಾರ್ಟ್‌ಫೋನ್‌ SM-A5560 ಮಾದರಿ ಸಂಖ್ಯೆಯನ್ನು ಹೊಂದಿದ್ದು, TENAA ನಲ್ಲಿನ ಫೋಟೋಗಳು ಈ ವರ್ಷದ ಆರಂಭದಲ್ಲಿ ಈ ಫೋನ್‌ ಬಗ್ಗೆ ಲೀಕ್‌ ಆದ ರೆಂಡರ್‌ಗಳೊಂದಿಗೆ ಹೊಂದಾಣಿಕೆಯಾಗುತ್ತಿವೆ. ಅದರಂತೆ ಈ ಫೋನ್ 6.5 ಇಂಚಿನ ಡಿಸ್ಪ್ಲೇ, 50 ಮೆಗಾಪಿಕ್ಸೆಲ್‌ನ ಟ್ರಿಪಲ್ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿರಬಹುದು ಎಂದು ನಂಬಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A-ಸರಣಿಯ ಫೋನ್‌ಗಳಾದ, ಗ್ಯಾಲಕ್ಸಿ A35 ಮತ್ತು ಗ್ಯಾಲಕ್ಸಿ A55 5G ಇತ್ತೀಚೆಗೆ ಆಗಾಗ್ಗೆ ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತಿವೆ. ಈ ಮೂಲಕ ಈ ಸ್ಮಾರ್ಟ್‌ಫೋನ್‌ಗಳು ಶೀಘ್ರದಲ್ಲೇ ಅನಾವರಣ ಆಗಬಹುದು ಎಂದು ತಿಳಿದುಬಂದಿದೆ. ಜೊತೆಗೆ ಗ್ಯಾಲಕ್ಸಿ A55 5G ಫೋನ್‌ಗೆ ವಾಲ್ಯೂಮ್ ರಾಕರ್ ಮತ್ತು ಪವರ್ ಬಟನ್ ಅನ್ನು ಬಲ ಅಂಚಿನಲ್ಲಿ ಇರಿಸಲಾಗಿರುವುದನ್ನು ಕಾಣಬಹುದಾಗಿದೆ.

ಅಲ್ಲದೆ ಫೋನ್‌ನ ಹಿಂಭಾಗದಲ್ಲಿ ಮೂರು ಲಂಬವಾಗಿ ಜೋಡಿಸಲಾದ ಕ್ಯಾಮೆರಾಗಳು ರಚನೆ ಮತ್ತು ಎಲ್‌ಇಡಿ ಫ್ಲ್ಯಾಶ್‌ ಅನ್ನು ಕಾಣಬಹುದಾಗಿದೆ. ಜೊತೆಗೆ FCC, 3C ಮತ್ತು TUV ರೈನ್‌ಲ್ಯಾಂಡ್ ಡೇಟಾಬೇಸ್‌ಗಳು ಫೋನ್ 25W ವೇಗದ ಚಾರ್ಜಿಂಗ್ ಅನ್ನು ಹೊಂದಿರುತ್ತದೆ ಎಂದು ತೋರಿಸಿವೆ. ಇದರ ಜೊತೆಗೆ ಈ ಫೋನ್‌ BIS ಪ್ರಮಾಣೀಕರಣವನ್ನು ಸಹ ಪಡೆದುಕೊಂಡಿದೆ.

ಶೀಘ್ರದಲ್ಲೇ ಸದ್ದು ಮಾಡಲಿದೆ ಸ್ಯಾಮ್‌ಸಂಗ್‌ನ ಮತ್ತೊಂದು ಹೊಸ ಫೋನ್!

ಈ ಹ್ಯಾಂಡ್‌ಸೆಟ್ ಈಗಾಗಲೇ ಗೀಕ್‌ಬೆಂಚ್ ಪ್ಲಾಟ್‌ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದು, ಸಿಂಗಲ್-ಕೋರ್ ರೌಂಡ್‌ನಲ್ಲಿ 1,180 ಅಂಕಗಳನ್ನು ಮತ್ತು ಮಲ್ಟಿ-ಕೋರ್ CPU ವಿಭಾಗದಲ್ಲಿ 3,526 ಅಂಕಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಜೊತೆಗೆ 2.75GHz ಪೀಕ್ ಕ್ಲಾಕ್ ಸ್ಪೀಡ್ ಮತ್ತು RDNA2 ಆಧಾರಿತ ಎಕ್ಸ್ ಕ್ಲಿಪ್ಸ್ 530 GPU ಜೊತೆಗೆ ಎಕ್ಸಿನೋಸ್ 1480 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಈ ಫೋನ್‌ ಬರುವ ನಿರೀಕ್ಷೆಯಿದೆ. ಜೊತೆಗೆ ಇದು 8GB RAM ಮತ್ತು 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುವ ನಿರೀಕ್ಷೆಯಿದೆ ಎಂದು ಈಗಾಗಲೇ ಲೀಕ್‌ ಆದ ಮಾಹಿತಿಗಳಲ್ಲಿ ಉಲ್ಲೇಖ ಮಾಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 ಫೋನ್‌ನ ನಿರೀಕ್ಷಿತ ಫೀಚರ್ಸ್‌: ಈ ಸ್ಮಾರ್ಟ್‌ಫೋನ್ 6.5 ಇಂಚಿನ FHD+ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಜೊತೆಗೆ 120Hz ರಿಫ್ರೆಶ್ ರೇಟ್ ಮತ್ತು ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದುಕೊಂಡಿರಲಿದ್ದು, ವರ್ಧಿತ ಗ್ರಾಫಿಕ್ಸ್ ಕಾರ್ಯಕ್ಷಮತೆಗಾಗಿ AMD GPU ಜೊತೆಗೆ ಎಕ್ಸಿನೋಸ್ 1480 SoC ಪ್ರೊಸೆಸರ್ ಬಲ ಪಡೆದುಕೊಂಡಿರಲಿದೆ ಎನ್ನಲಾಗಿದ್ದು, 8GB RAM ಮತ್ತು 128GB/256GB ಸ್ಟೋರೇಜ್ ಆಯ್ಕೆಗಳನ್ನು ಈ ಫೋನ್‌ ಹೊಂದಿರಲಿದೆ ಎನ್ನಲಾಗಿದೆ.

ಶೀಘ್ರದಲ್ಲೇ ಸದ್ದು ಮಾಡಲಿದೆ ಸ್ಯಾಮ್‌ಸಂಗ್‌ನ ಮತ್ತೊಂದು ಹೊಸ ಫೋನ್!

ಇದರೊಂದಿಗೆ ಆಂಡ್ರಾಯ್ಡ್‌ 14 ಆಧಾರಿತ ಒನ್‌ ಯುಐ ಓಎಸ್‌ ಅನ್ನು ರನ್‌ ಮಾಡಲಿದ್ದು, 50 ಮೆಗಾಪಿಕ್ಸೆಲ್‌ ಪ್ರಾಥಮಿಕ ಕ್ಯಾಮೆರಾ, 12 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು 5 ಮೆಗಾಪಿಕ್ಸೆಲ್‌ ಮ್ಯಾಕ್ರೋ ಕ್ಯಾಮೆರಾದೊಂದಿಗೆ ಈ ಫೋನ್‌ ಕಾಣಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ ಜೊತೆಗೆ 32 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆಯನ್ನು ಈ ಫೋನ್‌ ಹೊಂದಿರಲಿದೆ ಎಂದು ಹೇಳಲಾಗಿದ್ದು, 25W ವೇಗದ ಚಾರ್ಜಿಂಗ್ ತಂತ್ರಜ್ಞಾನದೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿರಲಿದೆ.

Best Mobiles in India

English summary
Samsung Galaxy A55 5G Smartphone Some information about the has already been leaked. Accordingly, Samsung Galaxy A55 bears the model number no-5560.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+