ಮಾ.2ಕ್ಕೆ ಲಾಂಚ್; ಬರಲಿವೆ ಮೂರು ಹೊಸ Samsung 5G ಫೋನ್; ಬೆಲೆ ಎಷ್ಟು? ವಿಶೇಷತೆಗಳೇನು?
ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಇಲ್ಲಿದೆ ಒಳ್ಳೆಯ ಸುದ್ದಿ. ಕಂಪನಿಯು ಇತ್ತೀಚೆಗೆ ಭಾರತದಲ್ಲಿ ಮೂರು ಹೊಸ ಮೊಬೈಲ್‌ಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಇದೀಗ ಬಿಡುಗಡೆ ದಿನಾಂಕವನ್ನು ಘೋಷಿಸುವ ಮೂಲಕ ಎಲ್ಲಾ ನಿರೀಕ್ಷೆಗಳಿಗೂ ತೆರೆ ಎಳೆದಿದೆ. ಹೌದು, ಸ್ಯಾಮ್‌ಸಂಗ್ ಕಂಪನಿಯು ಮಾರ್ಚ್ 2 ರಂದು ಭಾರತದಲ್ಲಿ ಹೊಸ Galaxy A ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವುದಾಗಿ ಪ್ರಕಟಿಸಿದೆ. ಬನ್ನಿ, ಕಂಪನಿಯು ಯಾವೆಲ್ಲಾ ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ? ಇವುಗಳ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ A35 ಮತ್ತು A55 ಸ್ಮಾರ್ಟ್‌ಫೋನ್‌ಗಳ ಉತ್ತರಾಧಿಕಾರಿಯಾಗಿ ಈ ಹೊಸ ಫೋನ್‌ಗಳನ್ನು ತರುತ್ತಿದೆ. ಇವು ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G (Samsung Galaxy A56 5G), ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G (Samsung Galaxy A36 5G) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G (Samsung Galaxy A26 5G) ಹೆಸರಿನೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿವೆ. ಮಾರ್ಚ್ 2 ರಂದು ಬಿಡುಗಡೆಯಾಗಲಿರುವ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ ಗ್ಯಾಲಕ್ಸಿ A36 5G ಮತ್ತು ಗ್ಯಾಲಕ್ಸಿ A56 5G ಸೇರಿವೆ. ಈ ಎರಡು ಮಿಡ್ ಬಜೆಟ್ ಫೋನ್‌ಗಳ ಜೊತೆಗೆ, ಗ್ಯಾಲಕ್ಸಿ A26 5G ಫೋನ್ ಸಹ ಲಾಂಚ್ ಆಗುವ ನಿರೀಕ್ಷೆಯಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಬೆಲೆ
ಕಂಪನಿಯ ವೆಬ್‌ಸೈಟ್‌ನಲ್ಲಿ ಈಗಾಗಲೇ ಮುಂಬರುವ ಫೋನಿನ ಪುಟವನ್ನು ಲೈವ್ ಮಾಡಲಾಗಿದೆ. ಅದರಂತೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 41,999 ರೂ.ಗೆ ಬಿಡುಗಡೆ ಮಾಡಲಾಗುತ್ತದೆ. 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 44,999 ರೂ. ಆಗಿರಲಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ಮಾದರಿಯನ್ನು 47,999 ರೂ.ಗೆ ಪರಿಚಯಿಸಲಾಗುವುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಬೆಲೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ. ಈ ಮೊಬೈಲ್ ಬೆಲೆ 32,999 ರೂ.ನಿಂದ ಪ್ರಾರಂಭವಾಗುತ್ತದೆ. ಇದು 8GB RAM + 128GB ಸ್ಟೋರೇಜ್ ಆಯ್ಕೆ ಹೊಂದಿರುತ್ತದೆ. 8GB RAM + 256GB ಸ್ಟೋರೇಜ್ ಬೆಲೆ 35,999 ರೂ. ಆಗಿರಲಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ರೂಪಾಂತರವನ್ನು 38,999 ರೂ.ಗೆ ಬಿಡುಗಡೆಯಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿA56 5G ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿA56 5G ಫೋನ್ ಅಲ್ಯೂಮಿನಿಯಂ ಫ್ರೇಮ್‌ನಲ್ಲಿ ಬಿಡುಗಡೆಯಾಗಲಿದೆ. ಇದು ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇ ಹೊಂದಿರಲಿದೆ. ಈ ಸ್ಯಾಮ್‌ಸಂಗ್ ಫೋನ್ Exynos 1580 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ ಆಂಡ್ರಾಯ್ಡ್ 7 ಜೊತೆಗೆ OneUI 15 ಹೊಂದಿರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್, 8GB RAM + 128GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಫೋನ್ 5000mAh ಬ್ಯಾಟರಿಯನ್ನು ಹೊಂದಿರಲಿದೆ. ಇದನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು. ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರುತ್ತದೆ. ಹಾಗೆಯೇ 12 ಮೆಗಾಪಿಕ್ಸೆಲ್ ದ್ವಿತೀಯ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಇರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ,ಈ ಮೊಬೈಲ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನ್ 6.64 ಇಂಚಿನ ದೊಡ್ಡ ಡಿಸ್ಪ್ಲೇ ಹೊಂದಿರಲಿದೆ. ಇದು 120Hz ರಿಫ್ರೆಶ್ ದರದೊಂದಿಗೆ ಬರುತ್ತದೆ. ಈ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 ಜೆನ್ 3 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ OneUI 7 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 12GB RAM ಸಹ ಹೊಂದಿರುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರುತ್ತದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಸ್ಮಾರ್ಟ್‌ಫೋನ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿರುತ್ತದೆ. ಇದು 5000mAh ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.


Click it and Unblock the Notifications








