ಸ್ಯಾಮ್‌ಸಂಗ್‌ ಗ್ಯಾಲಕ್ಸಿ A71 5G, ಮತ್ತು A51 5G ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಟೆಕ್‌ ವಲಯದಲ್ಲಿ ತನ್ನ ವಿಭಿನ್ನ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ಸ್ಯಾಮ್‌ಸಂಗ್‌ ಕಂಪೆನಿ ಈಗಾಗಲೇ ಟೆಕ್‌ ಮಾರುಕಟ್ಟೆಯ ದೈತ್ಯ ಎನಿಸಿಕೊಂಡಿದೆ. ಹಲವು ಹೊಸತುಗಳಿಗೆ ಕಾರಣವಾಗಿರುವ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಜನಪ್ರಿಯ ಸರಣಿಯ ಸ್ಮಾರ್ಟ್‌ಫೋನ್‌ಗಳಿಂದ ಜನಮಾನಸದಲ್ಲಿ ಅಚ್ಚೊತ್ತಿದೆ. ಸದ್ಯ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಸ್ಮಾರ್ಟ್‌ಫೋನ್‌ ಬ್ರಾಂಡ್‌ಗಳಲ್ಲಿ ಒಂದಾಗಿರುವ ಸ್ಯಾಮ್‌ಸಂಗ್‌ ಇದೀಗ ತನ್ನ ಜನಪ್ರಿಯ A ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ.

ಹೌದು

ಹೌದು, ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಜನಪ್ರಿಯ A ಸರಣಿಯಲ್ಲಿ ಮತ್ತೆ ಎರಡು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಈ ಬಾರಿ ಬಿಡುಗಡೆ ಆಗಿರುವ ಈ ಎರಡು ಸ್ಮಾರ್ಟ್‌ಫೋನ್‌ಗಳು 5G ನೆಟ್‌ವರ್ಕ್‌ ಬೆಂಬಲಿಸುವ ಸರಣಿಸ ಸ್ಮಾರ್ಟ್‌ಫೋನ್‌ಗಳಾಗಿವೆ. ಸದ್ಯ ಇದೀಗ ಬಿಡುಗಡೆ ಆಗಿರುವ ಸ್ಮಾರ್ಟ್‌ಫೋನ್‌ಗಳನ್ನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A51 5G ಮತ್ತು ಗ್ಯಾಲಕ್ಸಿ A71 5G ಎಂದು ಹೆಸರಿಸಲಾಗಿದೆ. ಇದೀಗ ಈ ಸ್ಮಾರ್ಟ್‌ಫೋನ್‌ಗಳು ಕೋರಿಯಾದಲ್ಲಿ ಬಿಡುಗಡೆ ಆಗಿದ್ದು, ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೊಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A71 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A71 5G

ಸದ್ಯ ಸ್ಯಾಮ್‌ಸಂಗ್‌ ಕಂಪೆನಿ ಗ್ಯಾಲಕ್ಸಿ A71, ಹಾಗೂ A51 ಸರಣಿಯ 5G ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಇದರಲ್ಲಿ ಗ್ಯಾಲಕ್ಸಿ A71 5G ಸ್ಮಾರ್ಟ್‌ಫೋನ್‌ ಇನ್ಫಿನಿಟಿ-ಒ ಕಟೌಟ್‌ ಹೊಂದಿರುವ 6.7-ಇಂಚಿನ ಡಿಸ್‌ಪ್ಲೆ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಫುಲ್‌ ಎಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಅನಿರ್ದಿಷ್ಟ ಆಕ್ಟಾ-ಕೋರ್ ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಅಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ ಇದು 6GB RAM ಮತ್ತು 8GB RAM ಜೊತೆಗೆ 128 GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಣೆ ಮಾಡುವ ಅವಕಾಶವನ್ನ ನಿಡಲಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಅಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್‌ಅನ್ನು ಬೆಂಬಲಿಸುತ್ತದೆ. ಜೊತೆಗೆ ಇದು ಆನ್-ಸ್ಕ್ರೀನ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ,ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವ ಬೆಲೆಗೆ ಲಭ್ಯವಾಗಲಿದೆ ಅನ್ನೊದು ಮಾತ್ರ ಇನ್ನು ಬಹಿರಂಗವಾಗಿಲ್ಲ. ಆದರೆ ‘ಪ್ರಿಸ್ಮ್ ಕ್ಯೂಬ್ ಬ್ಲ್ಯಾಕ್', ‘ಪ್ರಿಸ್ಮ್ ಕ್ಯೂಬ್ ಸಿಲ್ವರ್' ಮತ್ತು ‘ಪ್ರಿಸ್ಮ್ ಕ್ಯೂಬ್ ಬ್ಲೂ' ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ.

ಗ್ಯಾಲಕ್ಸಿ A51 5G

ಗ್ಯಾಲಕ್ಸಿ A51 5G

ಇನ್ನು ಗ್ಯಾಲಕ್ಸಿ A51 5G ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ ಕೂಡ ಇನ್ಫಿನಿಟಿ-ಒ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಈ ಇದು ಕೂಡ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ,ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಪ್ರಾಥಮಿಕ ಸಂವೇದಕವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್ 980 ಪ್ರೊಸೆಸರ್‌ ವೇಗವನ್ನ ಪಡೆದುಕೊಂಡಿದೆ. ಹಾಗೇಯೆ 4GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಇದು 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 15W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ‘ಪ್ರಿಸ್ಮ್ ಕ್ಯೂಬ್ ಬ್ಲ್ಯಾಕ್', ‘ಪ್ರಿಸ್ಮ್ ಕ್ಯೂಬ್ ವೈಟ್' ಮತ್ತು ‘ಪ್ರಿಸ್ಮ್ ಕ್ಯೂಬ್ ಪಿಂಕ್' ನ ಮೂರು ಬಣ್ಣಗಳ ಆಯ್ಕೆಯಲ್ಲಿ ಲಬ್ಯವಾಗಲಿದ್ದು, ಬೆಲೆಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Samsung’s mid-range Galaxy A51 and Galaxy A71 get new 5G variants..to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X